ಲೋಕಸಭೆಗೆ ಭರ್ಜರಿ ಪ್ರಚಾರ ಆರಂಭ: ಮೊಳಗಿದ ಕಾಂಗ್ರೆಸ್ ಪ್ರಜಾಧ್ವನಿ ರಣಕಹಳೆ

ಬಿಜೆಪಿಯವರು ನಮಗೆ ಮೋಸ ಮಾಡಿಬಿಟ್ಟರು. ಮೊದಲು ಅಕ್ಕಿ ಕೊಡುತ್ತೇವೆ ಎಂದಿದ್ದರು. ಆಮೇಲೆ ಕೊಡೋದಿಲ್ಲ ಎಂದು ಹೇಳಿದರು. ಮೋಸ ಮಾಡಿ ಅಕ್ಕಿಯನ್ನೇ ಕೊಡಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರದ ಮೋದಿ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದರು. 
 

Lok Sabha Election 2024 CM Siddaramaiah Slams On PM Narendra Modi gvd

ಕೋಲಾರ/ಮುಳಬಾಗಲು (ಏ.07): ಬಿಜೆಪಿಯವರು ನಮಗೆ ಮೋಸ ಮಾಡಿಬಿಟ್ಟರು. ಮೊದಲು ಅಕ್ಕಿ ಕೊಡುತ್ತೇವೆ ಎಂದಿದ್ದರು. ಆಮೇಲೆ ಕೊಡೋದಿಲ್ಲ ಎಂದು ಹೇಳಿದರು. ಮೋಸ ಮಾಡಿ ಅಕ್ಕಿಯನ್ನೇ ಕೊಡಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರದ ಮೋದಿ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದರು. ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಕುರುಡುಮಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜೊತೆ ಶನಿವಾರ ಗಣೇಶನಿಗೆ ವಿಶೇಷ ಪೂಜೆ ಸಲ್ಲಿಸಿ, 'ಪ್ರಜಾಧ್ವನಿ 2.0'ಕ್ಕೆ ಚಾಲನೆ ನೀಡುವ ಮೂಲಕ ಕಾಂಗ್ರೆಸ್ ಪ್ರಚಾರಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು. 

ಬಳಿಕ, ತಮ್ಮ ಪ್ರಚಾರ ಭಾಷಣದುದ್ದಕ್ಕೂ ಬಿಜೆಪಿ, ಪ್ರಧಾನಿ ಮೋದಿ ವಿರುದ್ಧ ಟೀಕಾಪ್ರಹಾರ ನಡೆಸಿದ ಸಿಎಂ, ಬಿಜೆಪಿಯವರು ಹೇಳಿದಂತೆ ನಡೆದುಕೊಂಡಿದ್ದಾರಾ? ಮೋದಿ ಹತ್ತು ವರ್ಷಗಳಲ್ಲಿ ನುಡಿದಂತೆ ನಡೆದುಕೊಂಡರಾ? ರೈತರ ಆದಾಯವನ್ನು ದುಪ್ಪಟ್ಟು ಮಾಡುವುದಾಗಿ ಹೇಳಿದ್ದರು. ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿದ್ದರು. ಆದರೆ, ಯಾವುದನ್ನೂ ಜಾರಿಗೊಳಿಸಿಲ್ಲ ಎಂದರು. 15ನೇ ಹಣಕಾಸು ಆಯೋಗದವರು 5,498 ಕೋಟಿ ವಿಶೇಷ ಅನುದಾನ ಕೊಡ್ತೀವಿ ಅಂದ್ರು, ಕೊಟ್ಟಿಲ್ಲ. ಬರ ಪರಿಹಾರದ ಹಣ ನಯಾಪೈಸೆ ಬಂದಿಲ್ಲ. ಕೇಂದ್ರ ಬಜೆಟ್‌ನಲ್ಲಿ 5,300 ಕೋಟಿ ಕೊಡುವುದಾಗಿ ಹೇಳಿದ್ದರು. 

ಕರ್ನಾಟಕ ದ್ರೋಹಿ ಮೋದಿಗೆ ತಕ್ಕಪಾಠ ಕಲಿಸಿ: ಸಿಎಂ ಸಿದ್ದರಾಮಯ್ಯ ಕರೆ

ಫೆರಿಫೆರಲ್ ರಿಂಗ್ ರೋಡ್ ಹಾಗೂ ಕೆರೆಗಳ ಅಭಿವೃದ್ಧಿಗೆ ತಲಾ 3,000 ಕೋಟಿ ರು. ಕೊಡುವುದಾಗಿ ಹೇಳಿದ್ದರು. ಅದನ್ನೂ ಕೊಡಲಿಲ್ಲ ಎಂದು ಆರೋಪಿಸಿದರು. ಲೋಕಸಭಾ ಚುನಾವಣೆ ಬಳಿಕ ಸರ್ಕಾರ ಪತನ ಎಂಬ ಬಿಜೆಪಿಗರ ಹೇಳಿಕೆಗೆ ಪ್ರತಿಕ್ರಿಯಿಸಿ, ಸರ್ಕಾರಕ್ಕೆ 136 ಶಾಸಕರ ಬೆಂಬಲವಿದೆ. 43% ಮತ ಬಂದಿದೆ. ಬಿಜೆಪಿಗೆ 36% ಮತ ಬಂದಿದ್ದು, 64 ಶಾಸಕರು ಗೆದ್ದಿದ್ದಾರೆ. ಸರ್ಕಾರ ಪತನ ಸಾಧ್ಯನಾ ಎಂದು ಪ್ರಶ್ನಿಸಿದರು. ಬಿಜೆಪಿಯಿಂದಲೇ ಇನ್ನಷ್ಟು ಮುಖಂಡರು ಕಾಂಗ್ರೆಸ್‌ಗೆ ಬರಲಿದ್ದಾರೆ ಎಂದರು.  ಇದೇ ವೇಳೆ, ಜೆಡಿಎಸ್ ವಿರುದ್ಧವೂ ವಾಗ್ದಾಳಿ ನಡೆಸಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಕುಮಾರಸ್ವಾಮಿಯವರು ಬಿಜೆಪಿ ಜೊತೆ ಕೈಜೋಡಿಸಿದ್ದು, ಅವರೂ ಕೋಮುವಾದಿಗಳಾಗುತ್ತಿದ್ದಾರೆ ಎಂದು ಆರೋಪಿಸಿದರು.

ಸಿದ್ದರಾಮಯ್ಯನವರ ಆಡಳಿತಕ್ಕೂ ಅನುಭವಕ್ಕೂ ಬಹಳ ವ್ಯತ್ಯಾಸವಿದೆ: ಬೊಮ್ಮಾಯಿ

ಬೃಹತ್‌ ರೋಡ್ ಶೋ: ಇದಕ್ಕೂ ಮೊದಲು, ಬೆಂಗಳೂರಿನಿಂದ ಹೆಲಿಕಾಪ್ಟ‌ ಮೂಲಕ ಆಗಮಿಸಿದ ಸಿಎಂ, ಕುರುಡುಮಲೆಯ ಗಣೇಶನಿಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ, ಮುಳಬಾಗಿಲಿಗೆ ತೆರಳಿ, ಪಟ್ಟಣದಲ್ಲಿರುವ ಪುರಾತನ ದರ್ಗಾಗೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು. ಬಳಿಕ, ನಗರದ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ತೆರಳಿ, ವಿಶೇಷ ಪೂಜೆ ಸಲ್ಲಿಸಿದರು. ನಂತರ, ಅಂಬೇಡ್ಕರ್‌ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಅಂಬೇಡ್ಕರ್‌ವೃತ್ತದಿಂದ ಸೌಂದರ್ಯ ಸರ್ಕಲ್ ವರೆಗೆ ತೆರೆದ ವಾಹನದಲ್ಲಿ 1 ಕಿಮೀ. ಬೃಹತ್ ರೋಡ್ ಶೋ ನಡೆಸಿದರು. ರೋಡ್ ಶೋನಲ್ಲಿ ವಿವಿಧ ಸಾಂಸ್ಕೃತಿಕ ಕಲಾ ತಂಡಗಳು ಭಾಗಿಯಾಗಿದ್ದವು. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವ ಜಿ.ಪರಮೇಶ್ವರ್, ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್, ಹಲವು ಮುಖಂಡರು ಯಾತ್ರೆಯಲ್ಲಿಎಂ.ಸಿ.ಸುಧಾಕರ್‌ ಸೇರಿದಂತೆ ಪಾಲ್ಗೊಂಡಿದ್ದರು.

Latest Videos
Follow Us:
Download App:
  • android
  • ios