Lok Sabha Election 2024: ಮತ್ತೊಂದು ಚುನಾವಣಾ ಸಮೀಕ್ಷೆ, ಎನ್‌ಡಿಎಗೆ 411, ಇಂಡಿಯಾಗೆ 105, ಕರ್ನಾಟಕದಲ್ಲಿ ಎಷ್ಟು?

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟ ಭರ್ಜರಿ ಜಯ ಸಾಧಿಸಲಿದೆ. 543 ಕ್ಷೇತ್ರಗಳಲ್ಲಿ 411ರಲ್ಲಿ ಜಯ ಸಾಧಿಸಲಿದೆ ಎಂದು ಸಿಎನ್‌ಎನ್‌ ನ್ಯೂಸ್‌ 18 ನಡೆಸಿದ ಚುನಾವಣೆ ಪೂರ್ವ ಸಮೀಕ್ಷೆ ಹೇಳಿದೆ

Lok Sabha Election 2024 cnn news18 mega opinion poll predicts NDA win highest Seat gow

ನವದೆಹಲಿ (ಮಾ.15): ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟ ಭರ್ಜರಿ ಜಯ ಸಾಧಿಸಲಿದೆ. 543 ಕ್ಷೇತ್ರಗಳಲ್ಲಿ 411ರಲ್ಲಿ ಜಯ ಸಾಧಿಸಲಿದೆ ಎಂದು ಸಿಎನ್‌ಎನ್‌ ನ್ಯೂಸ್‌ 18 ನಡೆಸಿದ ಚುನಾವಣೆ ಪೂರ್ವ ಸಮೀಕ್ಷೆ ಹೇಳಿದೆ. ಇನ್ನು ಇಂಡಿಯಾ ಕೂಟ ಕೇವಲ 105 ಸ್ಥಾನ ಪಡೆಯಲಿದೆ ಹಾಗೂ ಇತರರು ಕೇವಲ 27 ಸ್ಥಾನ ಡೆಯಲಿದ್ದಾರೆ ಎಂದು ಸಮೀಕ್ಷೆ ಹೇಳಿದೆ.

ಸಂಸತ್ತಿನಿಂದ ಪಂಚಾಯಿತಿವರೆಗೆ ಏಕ ಚುನಾವಣೆ, ಕೋವಿಂದ್‌ ಸಮಿತಿ ಶಿಫಾರಸು

ಕರ್ನಾಟಕದಲ್ಲಿ ಎನ್‌ಡಿಎಗೆ 25 ಕೈಗೆ 3: ನ್ಯೂಸ್‌-18 ಸಮೀಕ್ಷೆ: ಕರ್ನಾಟಕದ ಒಟ್ಟು 28 ಕ್ಷೇತ್ರದಲ್ಲಿ 25ರಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿಯ ಕೂಟವಾದ ಎನ್‌ಡಿಎ ಒಕ್ಕೂಟ ಜಯಸಾಧಿಸಲಿದೆ. ಉಳಿದ 3 ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆಲ್ಲಿಲಿದೆ ಎಂದು ಸಿಎನ್‌ಎನ್‌ ನ್ಯೂಸ್‌ 18 ಸಮೀಕ್ಷೆ ಭವಿಷ್ಯ ನುಡಿದಿದೆ.

ರಾಜ್ಯದ 28 ಕ್ಷೇತ್ರಗಳ ಪೈಕಿ ಹಾಲಿ ಬಿಜೆಪಿ 25, ಕಾಂಗ್ರೆಸ್‌ 1, ಜೆಡಿಎಸ್‌ 1 ಹಾಗೂ ಪಕ್ಷೇತರರು 1 ಸ್ಥಾನ ಹೊಂದಿದ್ದಾರೆ. ಈ ಚುನಾವಣೆಯಲ್ಲೂ ಬಿಜೆಪಿ, ಬಹುತೇಕ ಕಳೆದ ಸಲದ ಪ್ರದರ್ಶನವನ್ನೇ ತೋರಲಿದೆ ಎಂದು ಸಮೀಕ್ಷೆ ನುಡಿದಿದೆ.

ಎಸ್‌ಬಿಐ ಚುನಾವಣಾ ಬಾಂಡ್‌ ದೇಣಿಗೆ ರಹಸ್ಯ ಆಯೋಗದಿಂದ ಬಹಿರಂಗ, ಬಿಜೆಪಿ ಟಾಪ್‌, ಜೆಡಿಎಸ್‌ಗೆ 43 ಕೋಟಿ!

ಎಬಿಪಿ ನ್ಯೂಸ್ ಚುನಾವಣಾ ಪೂರ್ವ ಸಮೀಕ್ಷೆ:
ಲೋಕಸಭೆ ಚುನಾವಣೆಗೆ ಕ್ಷಣಗಣನೆ ಆರಂಭ ಆಗುತ್ತಿದ್ದಂತೆಯೇ, ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿಕೂಟ 23 ಹಾಗೂ ಕಾಂಗ್ರೆಸ್ 5 ಸ್ಥಾನ ಗೆಲ್ಲಲಿದೆ ಎಂದು ಎಬಿಪಿ ನ್ಯೂಸ್ ಕೂಡ ಚುನಾವಣಾ ಪೂರ್ವ ಸಮೀಕ್ಷೆ ಹೇಳಿದೆ. ಹಾಲಿ ರಾಜ್ಯದ 28 ಸ್ಥಾನಗಳಲ್ಲಿ ಬಿಜೆಪಿ 25, ಕಾಂಗ್ರೆಸ್‌ 1, ಜೆಡಿಎಸ್‌ 1 ಹಾಗೂ ಪಕ್ಷೇತರರು 1 ಸ್ಥಾನ ಹೊಂದಿದ್ದಾರೆ.

Latest Videos
Follow Us:
Download App:
  • android
  • ios