ಮೈಸೂರು ಕೊಡಗು ಲೋಕಸಭಾ ಕ್ಷೇತ್ರದಿಂದ ಪ್ರಿಯಾಂಕ ಗಾಂಧಿ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ.
ಕೊಡಗು : ಮೈಸೂರು ಕೊಡಗು ಲೋಕಸಭಾ ಕ್ಷೇತ್ರದಿಂದ ಪ್ರಿಯಾಂಕ ಗಾಂಧಿ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ. ಸದ್ಯ ಕೊಡಗು ಮೈಸೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಪ್ರಬಲವಾಗಿರುವ ಹಿನ್ನೆಲೆಯಲ್ಲಿ ಪ್ರಿಯಾಂಕ ಗಾಂಧಿ ಗೆಲುವಿಗೆ ಮೈಸೂರು ಕೊಡಗು ಕ್ಷೇತ್ರ ಸೇಫ್ ಎಂದು ಕಾಂಗ್ರೆಸ್ ನಾಯಕರು ಯೋಚಿಸುತ್ತಿದ್ದು, ಈ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ.
ಮೈಸೂರು ಕೊಡಗು ಲೋಕಸಭಾ ಕ್ಷೇತ್ರದಿಂದ ಪ್ರಿಯಾಂಕ ಗಾಂಧಿ ಸ್ಪರ್ಧೆ ಬಗ್ಗೆ ಕಾಂಗ್ರೆಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿವೆ. ಪ್ರಸ್ತುತ ಇಲ್ಲಿ ಬಿಜೆಪಿಯಿಂದ ಪ್ರತಾಪ್ ಸಿಂಹ ಅವರು ಕೊಡಗು ಮೈಸೂರು ಕ್ಷೇತ್ರದ ಸಂಸದರಾಗಿದ್ದಾರೆ. ಒಂದು ವೇಳೆ ಪ್ರಿಯಾಂಕ ಗಾಂಧಿ ಇದಕ್ಕೆ ಒಪ್ಪದಿದ್ದರೆ ಅವರನ್ನು ಚಿಕ್ಕಮಗಳೂರಿನಿಂದ ಕಣಕ್ಕಿಳಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ಆಘಾತಕಾರಿ ವಿಷಯ ಸೃಷ್ಟಿಸಿ ಮತ ಪಡೆಯುವ ಕಲೆ ಬಿಜೆಪಿಗಿದೆ : ಪ್ರಿಯಾಂಕ ವಾಗ್ದಾಳಿ
ಮಧ್ಯ ಪ್ರದೇಶದಲ್ಲೂ ಗೆಲುವಿಗೆ ಕೈ ಪ್ಲ್ಯಾನ್: ಚುನಾವಣಾ ಪ್ರಚಾರಕ್ಕೆ ಪ್ರಿಯಾಂಕಾ ಚಾಲನೆ
ರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆದು ಭರ್ಜರಿ ಬಹುಮತ ಗಳಿಸಿರುವ ಕಾಂಗ್ರೆಸ್ ಇದೇ ರೀತಿ ಮಧ್ಯ ಪ್ರದೇಶದಲ್ಲೂ ಅಧಿಕಾರಕ್ಕೆ ಹಿಡಿಯಲು ಭರ್ಜರಿ ಪ್ಲ್ಯಾನ್ ಮಾಡ್ತಿದೆ. ರಾಜ್ಯದಲ್ಲಿ ಪ್ರಿಯಾಂಕಾ ಗಾಂಧಿ ಹಾಗೂ ರಾಹುಲ್ ಗಾಂಧಿ ಹೆಚ್ಚಿನ ಪ್ರಚಾರ ನಡೆಸಿದಂತೆ ಮಧ್ಯ ಪ್ರದೇಶದಲ್ಲೂ ‘ಕೈ’ ಪಕ್ಷದ ಪ್ರಚಾರಕ್ಕೆ ಪ್ರಿಯಾಂಕಾ ಗಾಂಧಿ ಚಾಲನೆ ನೀಡಿದ್ದಾರೆ.
ಜಬಲ್‌ಪುರ ನಗರದ ಗ್ವಾರಿಘಾಟ್‌ನಲ್ಲಿ ಪ್ರಿಯಾಂಕಾ ಗಾಂಧಿ ನರ್ಮದಾ ನದಿಯಲ್ಲಿ ಪೂಜೆ ನೆರವೇರಿಸುವ ಮೂಲಕ ಪ್ರಚಾರ ಆರಂಭಿಸಿದ್ದಾರೆ. ಅವರೊಂದಿಗೆ ಮಧ್ಯ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಹಾಗೂ ಮಾಜಿ ಸಿಎಂ ಕಮಲ್ ನಾಥ್, ಪಕ್ಷದ ರಾಜ್ಯ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಜೆ.ಪಿ ಅಗರವಾಲ್ ಮತ್ತು ರಾಜ್ಯಸಭಾ ಸಂಸದ ವಿವೇಕ್ ತಂಖಾ ಇದ್ದರು. ಇನ್ನು, ಸ್ಥಳೀಯ ಶಾಸಕ ತರುಣ್ ಭಾನೋಟ್ ಅವರು ಪ್ರಿಯಾಂಕಾ ಗಾಂಧಿ ವಾದ್ರಾಗೆ ಗಣೇಶ ಮೂರ್ತಿಯನ್ನು ಉಡುಗೊರೆಯಾಗಿ ನೀಡಿದ್ದಾರೆ.
ಮಧ್ಯಪ್ರದೇಶದ ಜೀವನಾಡಿ ಎನಿಸಿರುವ ನರ್ಮದಾವನ್ನು ಸ್ವಚ್ಛವಾಗಿಡಲು ಸಹ ಕಾಂಗ್ರೆಸ್ ನಾಯಕರು ಈ ವೇಳೆ ಪಣ ತೊಟ್ಟಿದ್ದಾರೆ. ಜಬಲ್ಪುರ್ ಮಹಾಕೋಶಲ್ ಪ್ರದೇಶದ ಮಧ್ಯ ಭಾಗದಲ್ಲಿದ್ದು, ಇದು ಗಮನಾರ್ಹ ಸಂಖ್ಯೆಯ ಬುಡಕಟ್ಟು ಮತದಾರರನ್ನು ಹೊಂದಿದೆ. 2018 ರ ಅಸೆಂಬ್ಲಿ ಚುನಾವಣೆಯಲ್ಲಿ, ಈ ಭಾಗದಲ್ಲಿ 13 ಪರಿಶಿಷ್ಟ ಪಂಗಡದ ಮೀಸಲು ಸ್ಥಾನಗಳಲ್ಲಿ 11 ರಲ್ಲಿ ಕಾಂಗ್ರೆಸ್ ಗೆದ್ದರೆ, ಭಾರತೀಯ ಜನತಾ ಪಕ್ಷ (ಬಿಜೆಪಿ) ಉಳಿದ ಎರಡನ್ನು ಗೆದ್ದುಕೊಂಡಿತ್ತು.
ಒಂದು ವೇಳೆ ಪ್ರಿಯಾಂಕಾ ಕೊಡಗು ಮೈಸೂರು ಕ್ಷೇತ್ರ ಒಪ್ಪದೇ ಕಾಫಿನಾಡು ಚಿಕ್ಕಮಗಳೂರಿನಿಂದ ಕಣಕ್ಕಿಳಿದರೆ ಮೈಸೂರು ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಯತೀಂದ್ರ ಸಿದ್ಧರಾಮಯ್ಯ ಸ್ಪರ್ಧೆ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
