ರಾಜಕೀಯ ವೈಷಮ್ಯದಿಂದ ಬಿಜೆಪಿ ಕಾರ್ಯಕರ್ತನ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಗದಗ ಜಿಲ್ಲೆಯ ಶಿರುಂಜ ಗ್ರಾಮದಲ್ಲಿ ನೆಡದಿದೆ. ಮುದ್ದಪ್ಪ ಪ್ಯಾಟಿ, ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆಗೊಳಗಾದ ವ್ಯಕ್ತಿ

ಗದಗ (ಮೇ.7): ರಾಜಕೀಯ ವೈಷಮ್ಯದಿಂದ ಬಿಜೆಪಿ ಕಾರ್ಯಕರ್ತನ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಗದಗ ಜಿಲ್ಲೆಯ ಶಿರುಂಜ ಗ್ರಾಮದಲ್ಲಿ ನೆಡದಿದೆ.

ಮುದ್ದಪ್ಪ ಪ್ಯಾಟಿ, ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆಗೊಳಗಾದ ವ್ಯಕ್ತಿ. ಶಿರುಂಜ ಗ್ರಾಮದವರಾದ ಮುದ್ದಪ್ಪ ಪ್ಯಾಟಿ ಬಿಜೆಪಿ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು. ರಾಜಕೀಯ ದ್ವೇಷ ಹಿನ್ನೆಲೆ ಮನೆಯಲ್ಲಿದ್ದ ಮುದ್ದಪ್ಪ ಪ್ಯಾಟಿಗೆ ಕರೆ ಮಾಡಿರುವ ಕಾಂಗ್ರೆಸ್ ಕಾರ್ಯಕರ್ತರು. ಉಪಾಯದಿಂದ ಸ್ಥಳಕ್ಕೆ ಕರೆಯಿಸಿಕೊಂಡು ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿದೆ. 

'ಶಾಸಕ ಆಗೋಕೆ ನನ್ನ ಬಳಿ ದುಡ್ಡು ತಗೊಂಡು ಬಂದವನು, ನನಗೆ ಅವನೊಬ್ಬ ಆಫ್ಟ್ರಾಲ್' ಸಚಿವ ತಂಗಡಗಿ ವಿರುದ್ಧ ರೆಡ್ಡಿ ವಾಗ್ದಾಳಿ

ಹಲ್ಲೆಯಿಂದ ಮುದ್ದಪ್ಪ ಪೇಟೆ ಗಂಭೀರ ಪೆಟ್ಟಾಗಿದ್ದು, ಆಂಬುಲೆನ್ಸ್ ಮೂಲಕ ಗದಗ ಜಿಲ್ಲಾಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಹಲ್ಲೆ ಘಟನೆಯಿಂದ ಶಿರುಂಜ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಘೋಷಣೆ ಕೂಗಿ, ಹಲ್ಲೆಕೋರರ ಮೇಲೆ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿದ್ದಾರೆ. ಶಿರುಂಜ ಗ್ರಾಮಕ್ಕೆ ಪೊಲೀಸರು ಭೇಟಿ ನೀಡಿದ್ದು ಘಟನೆ ಸಂಬಂಧ ಮಾಹಿತಿ ಕಲೆಹಾಕುತ್ತಿದ್ದಾರೆ.

ಡಿಕೆಶಿಯಂಥ ಕಲಾಕಾರ ಕರ್ನಾಟಕದಲ್ಲಿ ಯಾರೂ ಇಲ್ಲ: ಸದಾನಂದಗೌಡ