ಮತದಾನ ಮುಗಿಯುವ ವೇಳೆ ಪರಸ್ಪರ ಬಡಿದಾಡಿಕೊಂಡ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರು!

ಮತದಾನ ಪ್ರಕ್ರಿಯೆ ಮುಗಿಯುವ ವೇಳೆಯೇ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರು ಪರಸ್ಪರ ಬಡಿದಾಡಿಕೊಂಡ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕೆಬಿ ಪಾಳ್ಯದ ಮತಗಟ್ಟೆ ಸಂಖ್ಯೆ 249 ರ ಬಳಿ ನೆಡದಿದೆ.

Lok sabha election 2024 in Karnataka Clash between JDS Congress workers at Hassan Lok sabha constituency rav

ಹಾಸನ (ಏ.26) : ಮತದಾನ ಪ್ರಕ್ರಿಯೆ ಮುಗಿಯುವ ವೇಳೆಯೇ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರು ಪರಸ್ಪರ ಬಡಿದಾಡಿಕೊಂಡ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕೆಬಿ ಪಾಳ್ಯದ ಮತಗಟ್ಟೆ ಸಂಖ್ಯೆ 249 ರ ಬಳಿ ನೆಡದಿದೆ.

ಘಟನೆಯಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದ್ದು, ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮತಗಟ್ಟೆ ಸಂಖ್ಯೆ 249 ಕ್ಕೆ ಭೇಟಿ ನೀಡಿದ್ದ ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್‌ಪಟೇಲ್ ತಾಯಿ ಅನುಪಮಾ ಮಹೇಶ್. ಈ ವೇಳೆ ಜೆಡಿಎಸ್ ಪಕ್ಷಕ್ಕೆ ಜೈಕಾರ ಕೂಗಿದ ಜೆಡಿಎಸ್ ಕಾರ್ಯಕರ್ತರು. ಇದರಿಂದ ರೊಚ್ಚಿಗೆದ್ದ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಅಭ್ಯರ್ಥಿ ಪರ ಘೋಷಣೆ ಕೂಗಿದ್ದಾರೆ. ಇದೇ ವಿಕೋಪಕ್ಕೆ ತಿರುಗಿ ಎರಡು ಪಕ್ಷದ ಕಾರ್ಯಕರ್ತರು ಪರಸ್ಪರ ಬಡಿದಾಡಿಕೊಂಡಿದ್ದಾರೆ. ಕಬ್ಬಿಣದ ರಾಡ್‌ನಿಂದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಜೆಡಿಎಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿದೆ.

ಬಿಜೆಪಿ ಎಂದರೆ 'ಭಾರತೀಯ ಚೊಂಬು ಪಾರ್ಟಿ'; ಬಳ್ಳಾರಿ ಸಮಾವೇಶದಲ್ಲಿ ರಾಹುಲ್ ಗಾಂಧಿ ವಾಗ್ದಾಳಿ!

ಘಟನೆಯಲ್ಲಿ ಮೋಹನ್‌ಕುಮಾರ್, ಗಿರೀಶ್ ಮಂಜುನಾಥ್ ಮೇಲೆ ಜೆಡಿಎಸ್‌ ಕಾರ್ಯಕರ್ತರಾದ ಸಾಗರ್, ಪ್ರದೀಪ್ ಹಲ್ಲೆ ಮಾಡಿದ್ದಾರೆಂದು ಆರೋಪಿಸಲಾಗಿದೆ. ಹಲ್ಲೆಯಿಂದ ಮೋಹನ್‌ ಕುಮಾರ ಗಂಭೀರ ಗಾಯಗೊಂಡಿದ್ದಾರೆ. ಇದೇ ವೇಳೆ ಕಾಂಗ್ರೆಸ್ ಕಾರ್ಯಕರ್ತರಿಂದಲೂ ನಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪ ಮಾಡಿರುವ ಜೆಡಿಎಸ್ ಕಾರ್ಯಕರ್ತರು. ಪ್ರದೀಪ್, ಸಾಗರ್ ಹಾಗೂ ಗೌತಮ್‌ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿದೆ. ಹಲ್ಲೆಗೊಳಗಾದ ಜೆಡಿಎಸ್ ಕಾರ್ಯಕರ್ತರು ಹಾಸನದ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ.

 

ಕರ್ನಾಟಕ Election 2024 Live: ಲೋಕಸಭಾ ಚುನಾವಣೆಯ ಕ್ಷಣ ಕ್ಷಣದ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಘಟನೆ ಬಳಿಕ ಆಸ್ಪತ್ರೆಗೆ ಮೈಸೂರು ದಕ್ಷಿಣ ವಲಯ ಡಿಐಜಿ ಅಮಿತ್ ಸಿಂಗ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹಮದ್ ಸುಜೇತಾ ಭೇಟಿ ನೀಡಿ ಗಾಯಾಳುಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಸದ್ಯ ಘಟನೆ ಸಂಬಂಧ ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿಸಿದ್ದಾರೆ.

Latest Videos
Follow Us:
Download App:
  • android
  • ios