ಮಧ್ಯಾಹ್ನ 12.30ರೊಳಗೆ ಎನ್‌ಡಿಎ 400ರ ಗಡಿ ದಾಟಲಿದೆ: ಶಾ ವಿಶ್ವಾಸ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 370 ಮತ್ತು ಒಟ್ಟಾರೆ ಎನ್‌ಡಿಎ 400ಕ್ಕಿಂತ ಹೆಚ್ಚು ಸ್ಥಾನ ಗೆಲ್ಲುವ ಗುರಿ ಯೋಜಿತ ರೀತಿಯಲ್ಲೇ ಮುನ್ನಡೆಯತ್ತಿದೆ. ಫಲಿತಾಂಶದ ದಿನವಾದ ಜೂ.4ರಂದು ಮಧ್ಯಾಹ್ನ 12.30ರ ವೇಳೆಗೆ ನಾವು ಈ ಗುರಿ ಮುಟ್ಟಲಿದ್ದೇವೆ ಎಂದು ಹಿರಿಯ ಬಿಜೆಪಿ ನಾಯಕ ಅಮಿತ್‌ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Lok sabha election 2024 NDA will cross 400 mark before 12 30 pm says Amit Shah rav

ನವದೆಹಲಿ (ಮೇ.3): ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 370 ಮತ್ತು ಒಟ್ಟಾರೆ ಎನ್‌ಡಿಎ 400ಕ್ಕಿಂತ ಹೆಚ್ಚು ಸ್ಥಾನ ಗೆಲ್ಲುವ ಗುರಿ ಯೋಜಿತ ರೀತಿಯಲ್ಲೇ ಮುನ್ನಡೆಯತ್ತಿದೆ. ಫಲಿತಾಂಶದ ದಿನವಾದ ಜೂ.4ರಂದು ಮಧ್ಯಾಹ್ನ 12.30ರ ವೇಳೆಗೆ ನಾವು ಈ ಗುರಿ ಮುಟ್ಟಲಿದ್ದೇವೆ ಎಂದು ಹಿರಿಯ ಬಿಜೆಪಿ ನಾಯಕ ಅಮಿತ್‌ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಖಾಸಗಿ ಸುದ್ದಿವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿರುವ ಶಾ, ‘ನಮ್ಮ ಪಕ್ಷದ ತಂಡ ಮತ್ತು ನಾನು ವಿಸ್ರೃತವಾದ ಅಧ್ಯಯನ ನಡೆಸಿದ್ದೇವೆ. ನಮ್ಮ ಲೆಕ್ಕಾಚಾರದ ಪ್ರಕಾರ ಮೊದಲ ಎರಡು ಹಂತದಲ್ಲಿ ನಾವು 100ಕ್ಕಿಂತ ಹೆಚ್ಚು ಸ್ಥಾನ ಗೆಲ್ಲಲಿದ್ದೇವೆ. ಮತ್ತು ಮೂರನೇ ಹಂತದ ಚುನಾವಣೆಯಲ್ಲೂ ಅದೇ ವಿಶ್ವಾಸದತ್ತ ಸಾಗುತ್ತಿದ್ದೇವೆ ಎಂದು ಹೇಳಿದ್ದಾರೆ.

ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ: ಬಿಜೆಪಿಗಿನ್ನು ಭಾರೀ ಕಷ್ಟ ಇದೆ ಎಂದ ಶಶಿ ತರೂರ್

 ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ  2019 ರ ಲೋಕಸಭಾ ಚುನಾವಣೆಯಲ್ಲಿ ತೋರಿದ ಪ್ರದರ್ಶನವನ್ನ ಮಹಾರಾಷ್ಟ್ರ, ದೆಹಲಿ, ಕರ್ನಾಟಕ, ಮಧ್ಯಪ್ರದೇಶ, ಉತ್ತರಾಖಂಡ, ಜಮ್ಮು ಮತ್ತು ಕಾಶ್ಮೀರ ಮತ್ತು ಗುಜರಾತ್‌ನಲ್ಲಿ ಪುನರಾವರ್ತಿಸುತ್ತದೆ ಎಂದು ಹೇಳಿದ್ದಾರೆ. ವಿಶೇಷ ಏನೆಂದರೆ  ಸಂದರ್ಶನದ ಸಮಯದಲ್ಲಿ ಅಮಿತ್ ಶಾ, 'ಈ ಬಾರಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕನಿಷ್ಠ 30 ಸ್ಥಾನಗಳನ್ನು ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪಬಂಗಾಳದಲ್ಲಿ ಕೇಸರಿ ಪಕ್ಷವು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅನ್ನು ಎದುರಿಸುತ್ತಿದೆ ಎಂದಿದ್ದಾರೆ.

ರಾಹುಲ್‌ ಗಾಂಧಿ ಪಿಎಂ ಆಗಲೆಂದು ಪಾಕಿಸ್ತಾನ ಬಯಕೆ: ಪ್ರಧಾನಿ ಮೋದಿ

ಇನ್ನು ದಕ್ಷಿಣ ಭಾರತದಲ್ಲಿ ಬಿಜೆಪಿ ಸ್ಪರ್ಧೆಯ ಬಗ್ಗೆಯೂ ಅಮಿತ್ ಶಾ ಮಾತನಾಡಿದ್ದು, ದಕ್ಷಿಣದ ರಾಜ್ಯಗಳಾದ ಕರ್ನಾಟಕ, ಕೇರಳ, ತಮಿಳನಾಡು ಮತ್ತು ಆಂಧ್ರ ಪ್ರದೇಶದಲ್ಲಿ ತೀವ್ರ ಸ್ಪರ್ಧೆ ಒಡ್ಡಿರುವ ಬಗ್ಗೆ ಹೇಳಿದ್ದಾರೆ. ಈ ಬಾರಿಯೂ ತಮಿಳನಾಡು, ಕೇರಳದಲ್ಲಿ ಬಿಜೆಪಿ ತನ್ನ ಖಾತೆ ತೆರೆಯುತ್ತದೆ. ಆ ಎಲ್ಲ ರಾಜ್ಯಗಳಲ್ಲಿ ಬಿಜೆಪಿ ಮುಂಚೂಣಿಯಲ್ಲಿದೆ ಎಂದರು.

Latest Videos
Follow Us:
Download App:
  • android
  • ios