Asianet Suvarna News Asianet Suvarna News

Lok Sabha Election 2024: ಕಾಂಗ್ರೆಸ್‌ ಅಭ್ಯರ್ಥಿ ಬಾಕಿ ಪಟ್ಟಿ ಇಂದು/ ನಾಳೆ ಪ್ರಕಟ: ಸಿದ್ದರಾಮಯ್ಯ

ಲೋಕಸಭೆ ಚುನಾವಣೆಯ ಉಳಿದ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಸೋಮವಾರ ಅಥವಾ ಮಂಗಳವಾರ ಪ್ರಕಟ ಆಗುವ ನಿರೀಕ್ಷೆ ಇದೆ. ಕಾಂಗ್ರೆಸ್ ಟಿಕೆಟ್ ಹಂಚಿಕೆಯಲ್ಲಿ ಯಾವುದೇ ಕಗ್ಗಂಟಾಗಲಿ, ಎಳೆದಾಟವಾಗಲಿ ಆಗಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್‌ 20 ಕ್ಷೇತ್ರಗಳಲ್ಲಿ ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. 
 

Lok Sabha Election 2024 Pending list of Congress candidates announced today or tomorrow Says Siddaramaiah gvd
Author
First Published Mar 25, 2024, 7:43 AM IST

ಮೈಸೂರು (ಮಾ.25): ಲೋಕಸಭೆ ಚುನಾವಣೆಯ ಉಳಿದ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಸೋಮವಾರ ಅಥವಾ ಮಂಗಳವಾರ ಪ್ರಕಟ ಆಗುವ ನಿರೀಕ್ಷೆ ಇದೆ. ಕಾಂಗ್ರೆಸ್ ಟಿಕೆಟ್ ಹಂಚಿಕೆಯಲ್ಲಿ ಯಾವುದೇ ಕಗ್ಗಂಟಾಗಲಿ, ಎಳೆದಾಟವಾಗಲಿ ಆಗಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್‌ 20 ಕ್ಷೇತ್ರಗಳಲ್ಲಿ ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯವರ ರೀತಿ ನಾವು ಸುಳ್ಳು ಹೇಳಲ್ಲ. ಅವರು 28 ಕ್ಷೇತ್ರ ಗೆಲ್ಲುತ್ತೇವೆ ಅಂತಾರೆ. ಆದರೆ ಅದು ಸಾಧ್ಯನಾ? ಎಂದು ಇದೇ ವೇ‍ಳೆ ಸಿದ್ದರಾಮಯ್ಯ ಕಿಡಿಕಾರಿದರು.

ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ನಮಗೆ ಅನುಕೂಲವೇ ಆಗಲಿದೆ. ಈ ಹಿಂದೆ ಜೆಡಿಎಸ್ ಜೊತೆ ನಾವು ಮೈತ್ರಿ ಮಾಡಿಕೊಂಡಿದ್ದಾಗ ನಮಗೆ ಅನಾನುಕೂಲವೇ ಆಗಿತ್ತು. ಇದೀಗ ಬಿಜೆಪಿ-ಜೆಡಿಎಸ್‌ ಮೈತ್ರಿ ಮಾಡಿಕೊಂಡಿದ್ದು, ನಮ್ಮ ರೀತಿಯೇ ಇವರಿಗೂ ಅನಾನುಕೂಲವೇ ಆಗಲಿದೆ ಎಂದು ಅಭಿಪ್ರಾಯಪಟ್ಟರು. ನಾವು ನುಡಿದಂತೆ ನಡೆದಿದ್ದೇವೆ. ಬಿಜೆಪಿಯವರಂತೆ ಸುಳ್ಳು ಹೇಳಲ್ಲ. ಬಿಜೆಪಿಯವರು ತಮ್ಮ 600 ಭರವಸೆಗಳಲ್ಲಿ ಶೇ.10ರಷ್ಟನ್ನೂ ಈಡೇರಿಸಿಲ್ಲ. ಮೋದಿಯವರು ಜನಕ್ಕೆ 15 ಲಕ್ಷ ಕೊಟ್ರಾ? 2 ಕೋಟಿ ಉದ್ಯೋಗ ಸೃಷ್ಟಿ ಭರವಸೆ ನೀಡಿದ್ದರು, ಅದನ್ನು ಈಡೇರಿಸಿದ್ರಾ? ರೈತರ ಆದಾಯ ಡಬಲ್ ಮಾಡಿದ್ರಾ ಎಂದು ಸರಣಿ ಪ್ರಶ್ನೆಗಳನ್ನು ಕೇಳಿದರು.

ಸಿಎಂ ಸಿದ್ದರಾಮಯ್ಯರಿಂದ ಡ್ರಾಮಾ, ಅವರಿಗಿದು ಶೋಭೆಯಲ್ಲ: ಬಿ.ವೈ.ವಿಜಯೇಂದ್ರ

ಬಿಜೆಪಿ- ಜೆಡಿಎಸ್ ಮೈತ್ರಿಯಿಂದ ನಮಗೆ ಅನುಕೂಲ: ಕಾಂಗ್ರೆಸ್ ಟಿಕೆಟ್ ಹಂಚಿಕೆಯಲ್ಲಿ ಯಾವ ಕಗ್ಗಂಟು ಆಗಿಲ್ಲ. ಎಳೆದಾಟವೂ ಆಗಿಲ್ಲ. ನಾಳೆ ಅಥವಾ ನಾಳಿದ್ದು ಉಳಿದ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಪ್ರಕಟ ಆಗಲಿದೆ. 20 ಕ್ಷೇತ್ರಗಳಲ್ಲಿ ನಾವು ಗೆಲ್ಲುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಮೈಸೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರ ರೀತಿ ನಾವು ಸುಳ್ಳು ಹೇಳಲ್ಲ. ಅವರು 28 ಕ್ಷೇತ್ರ ಗೆಲ್ಲುತ್ತೇವೆ ಅಂತಾರೆ ಸಾಧ್ಯನಾ? 

ಬಿಜೆಪಿ- ಜೆಡಿಎಸ್ ಮೈತ್ರಿಯಿಂದ ನಮಗೆ ಅನುಕೂಲ. ಈ ಹಿಂದೆ ಜೆಡಿಎಸ್ ಜೊತೆ ಮೈತ್ರಿ ಆಗಿದ್ದಾಗ ಅನಾನುಕೂಲ ಆಗಿದೆ. ಅದರಂತೆ ಇವರ ಮೈತ್ರಿಯೂ ಅನುಕೂಲ ಆಗಲ್ಲ. ಅವರ ಮೈತ್ರಿ ನಮಗೆ ಅನುಕೂಲ ಎಂದು ತಿಳಿಸಿದರು. ನಾವು ನುಡಿದಂತೆ ನಡೆದಿದ್ದೇವೆ. ಬಿಜೆಪಿಯವರಂತೆ ಸುಳ್ಳು ಹೇಳಲ್ಲ. ಬಿಜೆಪಿಯವರು 600 ಭರವಸೆಗಳಲ್ಲಿ ಶೇ.10 ಈಡೇರಿಸಿಲ್ಲ. ಮೋದಿಯವರು ಜನಕ್ಕೆ 15 ಲಕ್ಷ ಕೋಟ್ರಾ? 2 ಕೋಟಿ ಉದ್ಯೋಗ ಸೃಷ್ಟಿ ಮಾಡುದ್ರಾ? ರೈತರ ಆದಾಯ ಡಬಲ್ ಮಾಡುದ್ರಾ ಎಂದು ಅವರು ಸರಣಿ ಪ್ರಶ್ನೆಗಳನ್ನು ಕೇಳಿದರು.

ಗುಬ್ಬಿ ಶ್ರೀನಿವಾಸ್ ಹೇಳಿಕೆಗೆ ಸಿದ್ದರಾಮಯ್ಯ ಸ್ಪಷ್ಟನೆ: ಹೆಚ್ಚಿನ ಕ್ಷೇತ್ರ ಗೆಲ್ಲದಿದ್ದರೆ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡಬೇಕಾಗಬಹುದು ಎಂಬ ಶಾಸಕ ಗುಬ್ಬಿ ಶ್ರೀನಿವಾಸ್ ಹೇಳಿಕೆ ಕುರಿತು ಸುದ್ದಿಗಾರರ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಧ್ಯಮದವರ ವಿರುದ್ಧವೇ ಕಿಡಿಕಾರಿದರು. ಅಲ್ಲದೆ, ಗುಬ್ಬಿ ಶ್ರೀನಿವಾಸ್ ಹೇಳಿಕೆಯಲ್ಲಿ ಹಿಂದೆ ಮುಂದೆ ಬಿಟ್ಟುಬಿಡ್ತೀರಾ. ಅವರ ಪೂರ್ಣ ಅರ್ಥದ ಮಾತು ತೋರಿಸಲ್ಲ. ಅವರು ಹೇಳಿರೋದು ಸಿದ್ದರಾಮಯ್ಯ ಬಡವರ ಪರ ಕೆಲಸ ಮಾಡಿದ್ದಾರೆ. ಜನ ಅವರನ್ನ ಬೆಂಬಲಿಸಬೇಕು. 

50 ಕೋಟಿ ಆಮಿಷ: ಸಿದ್ದರಾಮಯ್ಯ ವಿರುದ್ಧ ಬಿಜೆಪಿ ದೂರು

ಇದನ್ನ ಬಿಟ್ಟು ಬೇರೆ ಏನು ಹೇಳಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಡಿಸಿದರು. ಕಾಂಗ್ರೆಸ್ ಟಿಕೆಟ್ ಹಂಚಿಕೆಯಲ್ಲಿ ಕುಟುಂಬ ರಾಜಕಾರಣ ವಿಚಾರವನ್ನು ಸ್ಪಷ್ಟವಾಗಿ ನಿರಾಕರಿಸಿದ ಸಿದ್ದರಾಮಯ್ಯ ಅವರು, ಜನರು ಬಯಸಿದವರಿಗೆ ಟಿಕೆಟ್ ಕೊಟ್ಟಿದ್ದೇವೆ. ಇದರಲ್ಲಿ ಕುಟುಂಬ ರಾಜಕಾರಣ ಇಲ್ಲ ಎಂದು ಸ್ಪಷ್ಟಪಡಿಸಿದರು. ಸಿದ್ದರಾಮಯ್ಯನವರದ್ದು ಪೊಲಿಟಿಕಲ್ ಸ್ಟಂಟ್ ಎಂಬ ಎಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆಗೆ ನಿರಾಕರಿಸಿದ ಸಿದ್ದರಾಮಯ್ಯ ಅವರು, ಕುಮಾರಸ್ವಾಮಿಯವರಿಗೆ ಒಳ್ಳೆಯದಾಗಲಿ ಎಂದು ಹೇಳಿದರು.

Follow Us:
Download App:
  • android
  • ios