Asianet Suvarna News Asianet Suvarna News

ರಾಯ್‌ಬರೇಲಿ: ಪ್ರಿಯಾಂಕಾ ಗಾಂಧಿ ವಿರುದ್ಧ ನೂಪುರ್ ಶರ್ಮಾ ಕಣಕ್ಕೆ?

ಪ್ರವಾದಿ ಮೊಹಮ್ಮದರ ಬಗ್ಗೆ ವಿವಾದಿತ ಹೇಳಿಕೆ ನೀಡಿ ಪಕ್ಷದಿಂದ ಅಮಾನತಾಗಿರುವ ಬಿಜೆಪಿ ನಾಯಕಿ ನೂಪುರ್ ಶರ್ಮಾ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ನೂಪುರ್ ಶರ್ಮಾ ಅವರನ್ನು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿದ್ದಾರೆ ಎನ್ನಲಾದ ಉತ್ತರ ಪ್ರದೇಶದ ರಾಯ್ ಬರೇಲಿಯಿಂದ ಬಿಜೆಪಿ ಕಣಕ್ಕಿಳಿಸುವ ಸಾಧ್ಯತೆ ಇದೆ ಎಂದು ಕೆಲವು ಮಾಧ್ಯಮ ವರದಿಗಳು ಹೇಳಿವೆ. 

Lok sabha Election 2024 Priyanka Gandhi vs Nupur Sharma in Rae Bareli Lok sabha constituency akb
Author
First Published Mar 19, 2024, 2:29 PM IST

ನವದೆಹಲಿ: ಪ್ರವಾದಿ ಮೊಹಮ್ಮದರ ಬಗ್ಗೆ ವಿವಾದಿತ ಹೇಳಿಕೆ ನೀಡಿ ಪಕ್ಷದಿಂದ ಅಮಾನತಾಗಿರುವ ಬಿಜೆಪಿ ನಾಯಕಿ ನೂಪುರ್ ಶರ್ಮಾ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ನೂಪುರ್ ಶರ್ಮಾ ಅವರನ್ನು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿದ್ದಾರೆ ಎನ್ನಲಾದ ಉತ್ತರ ಪ್ರದೇಶದ ರಾಯ್ ಬರೇಲಿಯಿಂದ ಬಿಜೆಪಿ ಕಣಕ್ಕಿಳಿಸುವ ಸಾಧ್ಯತೆ ಇದೆ ಎಂದು ಕೆಲವು ಮಾಧ್ಯಮ ವರದಿಗಳು ಹೇಳಿವೆ. 

ನೂಪುರ್ ಶರ್ಮಾ ಈ ಹಿಂದೆ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ, ಆಪ್‌ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ವಿರುದ್ಧ ಸೋತಿದ್ದರು. ಟಿವಿ ಕಾರ್ಯಕ್ರಮವೊಂದರಲ್ಲಿ ನೂಪುರ್ ಶರ್ಮಾ ಪ್ರವಾದಿ ಮೊಹಮ್ಮದ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಬಿಜೆಪಿಯಿಂದ ಅಮಾನತಾಗಿದ್ದರು. ಈಗ ಅವರ ಅಮಾನತು ರದ್ದು ಮಾಡಿ ಕಣಕ್ಕಿಳಿಸುವ ಊಹಾಪೋಹದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗುತ್ತಿದೆ.

ನೂಪುರ್‌ ಶರ್ಮಗೆ ಬೆಂಬಲ ನೀಡಿದ್ದ ಗೀರ್ಟ್ ವೈಲ್ಡರ್ಸ್‌ಗೆ ನೆದರ್ಲೆಂಡ್ಸ್‌ ಚುನಾವಣೆಯಲ್ಲಿ ಗೆಲುವು ಸನ್ನಿಹಿತ!

ಕಳೆದ ಮೇ ತಿಂಗಳಲ್ಲಿ ಟಿವಿ ಚಾನೆಲೊಂದರಲ್ಲಿ ಚರ್ಚೆಯೊಂದರಲ್ಲಿ ಭಾಗವಹಿಸಿದ್ದ ನೂಪುರ್ ಶರ್ಮಾ ಅವರು ನೀಡಿದ ಹೇಳಿಕೆ ದೇಶಾದ್ಯಂತ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಇದಾದ ನಂತರ ಅವರು ಯಾವುದೇ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡಿರಲಿಲ್ಲ. ಇದರ ಜೊತೆಗೆ ಅವರು 2022ರ ಜೂನ್‌ 5 ರಂದು ಟ್ವಿಟ್ಟರ್‌ನಲ್ಲಿ ಮಾಡಿದ್ದ ಪೋಸ್ಟ್‌ ಕೊನೆಯ ಸಾರ್ವಜನಿಕ ಪೋಸ್ಟ್ ಆಗಿತ್ತು.  ಪ್ರವಾದಿ ಮೊಹಮ್ಮದ್ (Prophet Muhammed) ಬಗ್ಗೆ ಇವರು ನೀಡಿದ ಹೇಳಿಕೆ ದೇಶದಲ್ಲಿ ಭಾರತೀಯ ಮುಸಲ್ಮಾನರು ಸಿಡಿದೇಳುವಂತೆ ಮಾಡಿತ್ತು. 

ಯುಎಇ, ಸೌದಿ ಅರೇಬಿಯಾ, ಕತಾರ್, ಇರಾನ್ ಸೇರಿದಂತೆ ಹಲವು ಇಸ್ಲಾಮಿಕ್ ದೇಶಗಳು ನೂಪುರ್ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದವು.  ಇದಾದ ನಂತರ ಬಿಜೆಪಿ ಕೂಡ ಅವರನ್ನು ಪಕ್ಷ ವಕ್ತಾರ ಸ್ಥಾನದಿಂದ ಅಮಾನತು ಮಾಡಿತ್ತು. ಇದರ ಜೊತೆಗೆ ಸುಪ್ರೀಂಕೋರ್ಟ್ ಕೂಡ ನೂಪುರ್‌ ಶರ್ಮಾ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿ ನಿಮ್ಮ ಹಿಡಿತವಿಲ್ಲದ ನಾಲಿಗೆಯಿಂದ ಇಡೀ ದೇಶಕ್ಕೆ ಬೆಂಕಿ ಹಚ್ಚಿದ್ದೀರಿ ಎಂದು ತರಾಟೆಗೆ ತೆಗೆದುಕೊಂಡಿತ್ತು.ಈ ವಿವಾದದ ನಂತರ ನೂಪುರ್ ಶರ್ಮಾಗೆ ಭಾರಿ ಜೀವ ಬೆದರಿಕೆ ಬಂದಿತ್ತು. ನೂಪುರ್‌ ಶರ್ಮಾ, ರಾಷ್ಟ್ರೀಯ ಟಿವಿ ಚಾನೆಲ್‌ಗಳ ಹಲವು ರಾಜಕೀಯ ಚರ್ಚೆಗಳಲ್ಲಿ ಸದಾ ಭಾಗವಹಿಸುತ್ತಿದ್ದ ನೂಪುರ್ ಶರ್ಮಾ, ಬಿಜೆಪಿಯನ್ನು ಸಮರ್ಥಿಸಿಕೊಳ್ಳುತ್ತಿದ್ದರು. 

ಭಾರತ ಮಾತೆಗೆ ಜೈ ಎಂದಷ್ಟೇ ಹೇಳಬಲ್ಲೆ... ಮೊದಲ ಬಾರಿ ಸಾರ್ವಜನಿಕವಾಗಿ ಕಾಣಿಸಿಕೊಂಡ ನೂಪುರ್ ಶರ್ಮಾ

ಏಪ್ರಿಲ್‌ 19 ರಿಂದ ಜೂನ್‌ 1 ರವರೆಗೆ ಚುನಾವಣೆ

ಇನ್ನು ದೇಶದಲ್ಲಿ 2024ರ ಲೋಕಸಭಾ ಚುನಾವಣೆ ಏಪ್ರಿಲ್‌ 19 ರಿಂದ ಜೂನ್‌ 1 ರವರೆಗೆ ಒಟ್ಟು ಏಳು ಹಂತಗಳಲ್ಲಿ ನಡೆಯಲಿದೆ. ಜೂನ್ 4 ರಂದು ಮತ ಎಣಿಕೆ ನಡೆದು ಫಲಿತಾಂಶ ಘೋಷಣೆಯಾಗಲಿದೆ. ಕರ್ನಾಟಕದಲ್ಲಿ ಎಪ್ರಿಲ್ 26 ಹಾಗೂ ಮೇ7 ರಂದು ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಚಿತ್ರದುರ್ಗ, ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ಸೆಂಟ್ರಲ್​‌ನಲ್ಲಿ ಮೊದಲ ಹಂತದಲ್ಲಿ ಮತದಾನವಾಗಲಿದೆ. 2ನೇ ಹಂತದ ಚುನಾವಣೆ ಮೇ 7 ರಂದು ಶಿವಮೊಗ್ಗ, ದಾವಣಗೆರೆ, ಹಾವೇರಿ, ಉತ್ತರ ಕನ್ನಡ, ಬಳ್ಳಾರಿ, ಧಾರವಾಡ, ಕೊಪ್ಪಳ, ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ, ರಾಯಚೂರು, ಬಿಜಾಪುರ ಕಲಬುರಗಿ ಮತ್ತು  ಬೀದರ್‌ ಕ್ಷೇತ್ರಗಳಲ್ಲಿ ನಡೆಯಲಿದೆ.

7 ಹಂತದಲ್ಲಿ ಚುನಾವಣೆ:

2019ರಂತೆ ಈ ಬಾರಿಯೂ 7 ಹಂತದಲ್ಲಿ ಲೋಕಸಭೆಗೆ ಚುನಾವಣೆ ನಡೆಯಲಿದೆ. ಏ.19, ಏ,26, ಮೇ 7, ಮೇ 13, ಮೇ 20, ಮೇ 25 ಮತ್ತು ಜೂನ್‌ 1ರಂದು ಮತದಾನ ನಡೆಯಲಿದೆ. ಜೂನ್‌ 4ರಂದು ಫಲಿತಾಂಶ ಪ್ರಕಟವಾಗಲಿದೆ. ಹಬ್ಬ ಹರಿದಿನಗಳು, ಭದ್ರತೆ, ವಿದ್ಯಾರ್ಥಿಗಳ ಪರೀಕ್ಷೆ - ಹೀಗೆ ವಿವಿಧ ವಿಷಯಗಳನ್ನು ಗಮನದಲ್ಲಿ ಇಟ್ಟುಕೊಂಡು 7 ಹಂತಗಳಾಗಿ ವಿಂಗಡಿಸಲಾಗಿದೆ ಎಂದು ಆಯೋಗ ಹೇಳಿದೆ.

97 ಕೋಟಿ ಮತದಾರರು:

ಈ ಬಾರಿಯ ಚುನಾವಣೆಯಲ್ಲಿ 97 ಕೋಟಿಗೂ ಹೆಚ್ಚು ಮತದಾರರು ತಮ್ಮ ಹಕ್ಕು ಚಲಾಯಿಸಲು ಅರ್ಹರಾಗಿದ್ದಾರೆ. ಈ ಪೈಕಿ 49.72 ಕೋಟಿ ಪುರುಷ ಮತ್ತು 47.1 ಕೋಟಿ ಮಹಿಳಾ ಮತದಾರರು. ಇದರಲ್ಲಿ 1. ಮತದಾನ ಪ್ರಕ್ರಿಯೆಗಾಗಿ 10.5 ಲಕ್ಷ ಮತಗಟ್ಟೆ ಸ್ಥಾಪಿಸಲಾಗುವುದು. ಮತದಾನಕ್ಕಾಗಿ 55 ಲಕ್ಷ ಇವಿಎಂಗಳನ್ನು ಬಳಸಲಾಗುವುದು. ಇಡೀ ಚುನಾವಣಾ ಪ್ರಕ್ರಿಯೆಗಾಗಿ 1.5 ಕೋಟಿ ಸಿಬ್ಬಂದಿಗಳ ಸೇವೆ ಬಳಸಿಕೊಳ್ಳಲಾಗುವುದು.

 

Follow Us:
Download App:
  • android
  • ios