Asianet Suvarna News Asianet Suvarna News

ಕಾಂಗ್ರೆಸ್‌ ಪಕ್ಷಕ್ಕಾಗಿ ಯಾವುದೇ ತ್ಯಾಗಕ್ಕೆ ಮುನಿಯಪ್ಪ ಸಿದ್ಧ: ರಣದೀಪ್‌ ಸುರ್ಜೇವಾಲಾ

ಕಾಂಗ್ರೆಸ್‌ ಪಕ್ಷದಿಂದ ಏಳು ಬಾರಿ ಸಂಸದರಾಗಿದ್ದ ಕೆ.ಎಚ್.ಮುನಿಯಪ್ಪ ಅವರು ಪಕ್ಷಕ್ಕಾಗಿ ಯಾವ ತ್ಯಾಗಕ್ಕೂ ಸಿದ್ಧ ಎಂದಿದ್ದಾರೆ. ಹೀಗಾಗಿ ಒಟ್ಟಾಗಿ ಚುನಾವಣೆ ಎದುರಿಸಿ ಪಕ್ಷದ ಅಭ್ಯರ್ಥಿ ಕೆ.ವಿ.ಗೌತಮ್‌ ಅವರನ್ನು ಗೆಲ್ಲಿಸಿಕೊಂಡು ಬರಲಿದ್ದಾರೆ ಎಂದು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಹೇಳಿದ್ದಾರೆ. 
 

Lok Sabha Election 2024 Randeep Singh Surjewala Talks Over KH Muniyappa gvd
Author
First Published Mar 31, 2024, 5:23 AM IST

ಬೆಂಗಳೂರು (ಮಾ.31): ಕಾಂಗ್ರೆಸ್‌ ಪಕ್ಷದಿಂದ ಏಳು ಬಾರಿ ಸಂಸದರಾಗಿದ್ದ ಕೆ.ಎಚ್.ಮುನಿಯಪ್ಪ ಅವರು ಪಕ್ಷಕ್ಕಾಗಿ ಯಾವ ತ್ಯಾಗಕ್ಕೂ ಸಿದ್ಧ ಎಂದಿದ್ದಾರೆ. ಹೀಗಾಗಿ ಒಟ್ಟಾಗಿ ಚುನಾವಣೆ ಎದುರಿಸಿ ಪಕ್ಷದ ಅಭ್ಯರ್ಥಿ ಕೆ.ವಿ.ಗೌತಮ್‌ ಅವರನ್ನು ಗೆಲ್ಲಿಸಿಕೊಂಡು ಬರಲಿದ್ದಾರೆ ಎಂದು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಹೇಳಿದ್ದಾರೆ. ಮುನಿಯಪ್ಪ ಅವರ ಅಳಿಯನಿಗೆ ಟಿಕೆಟ್‌ ತಪ್ಪಿದ ಬೆನ್ನಲ್ಲೇ ಅವರನ್ನು ವಿಶ್ವಾಸಕ್ಕೆ ಪಡೆಯುವ ನಿಟ್ಟಿನಲ್ಲಿ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ಸಚಿವ ಮುನಿಯಪ್ಪ ಅವರು ಗೆಲ್ಲುವ ತಂತ್ರಗಾರಿಕೆ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದರು. 

ಕ್ಷೇತ್ರವನ್ನು ಗೆಲ್ಲುವ ನಿಟ್ಟಿನಲ್ಲಿ ದಲಿತ ಎಡಗೈ ಸಮುದಾಯಕ್ಕೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದರು. ಇದರ ಜತೆಗೆ ಎಲ್ಲರೊಂದಿಗೂ ಚರ್ಚಿಸಿ ಟಿಕೆಟ್‌ ಅಂತಿಮಗೊಳಿಸಲಾಗಿದೆ ಎಂದು ಹೇಳಿದ್ದಾರೆ. ಕೋಲಾರ ಕ್ಷೇತ್ರದ ಎಲ್ಲಾ ಕಾಂಗ್ರೆಸ್ ನಾಯಕರ ಅಭಿಪ್ರಾಯ ಪಡೆದಿದ್ದೇವೆ. ಕೇಂದ್ರ ಚುನಾವಣಾ ಸಮಿತಿ ಯಾವುದೇ ಅಭ್ಯರ್ಥಿ ಆಯ್ಕೆ ಮಾಡಿದರೂ ಕೆಲಸ ಮಾಡುವುದಾಗಿ ಹೇಳಿದ್ದರು. ವೈಯಕ್ತಿಕ ಭಿನ್ನಾಭಿಪ್ರಾಯ ಬದಿಗೊತ್ತಿ ಅಭ್ಯರ್ಥಿಯನ್ನು ಗೆಲ್ಲಿಸುವುದಾಗಿ ಹೇಳಿದ್ದಾರೆ. ಮುನಿಯಪ್ಪ ಅವರು ಪಕ್ಷಕ್ಕಾಗಿ ಯಾವ ತ್ಯಾಗಕ್ಕೂ ಸಿದ್ಧ ಎಂದಿರುವುದಾಗಿ ತಿಳಿಸಿದ್ದಾರೆ.

Lok Sabha Election 2024: ಪ್ರಹ್ಲಾದ ಜೋಶಿ ಬದಲಿಸುವ ಪ್ರಶ್ನೆಯೇ ಇಲ್ಲ: ಬಿ.ಎಸ್‌.ಯಡಿಯೂರಪ್ಪ

ಮೋದಿ ಹಿಟ್ಲರ್‌ ರೀತಿ ಸರ್ವಾಧಿಕಾರಿ: ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹಿಟ್ಲರ್‌ ಮಾದರಿ ಸರ್ವಾಧಿಕಾರಿ ಆಡಳಿತ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್‌ ನಾಯಕರು ಕಿಡಿಕಾರಿದ್ದಾರೆ. ಶುಕ್ರವಾರ ಜಂಟಿ ಸುದ್ದಿಗೋಷ್ಠಿ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು, ಕಾಂಗ್ರೆಸ್‌ನ ಬ್ಯಾಂಕ್‌ ಖಾತೆಗಳನ್ನು ಮುಟ್ಟುಗೋಲು ಹಾಕಿಕೊಂಡಿರುವ ಕೇಂದ್ರದ ಕ್ರಮವನ್ನು ಬಲವಾಗಿ ಖಂಡಿಸಿದರು. ಲೋಕಸಭಾ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಬಿಜೆಪಿ ಸರ್ಕಾರ, ವಿರೋಧ ಪಕ್ಷಗಳ ವಿರುದ್ಧ ಖಾತೆ ಮುಟ್ಟುಗೋಲು, ಮುಖ್ಯಮಂತ್ರಿಗಳ ಬಂಧನ, ರಾಜ್ಯಪಾಲರ ದುರ್ಬಳಕೆ, ಸಾಂವಿಧಾನಿಕ ಸಂಸ್ಥೆಗಳ ದುರ್ಬಳಕೆ ಪ್ರಯೋಗಕ್ಕೆ ಮುಂದಾಗಿದೆ. 

ಕೇಂದ್ರದ ಈ ಧೋರಣೆಯನ್ನು ಕರ್ನಾಟಕ ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ ಎಂದು ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಸೋಲಿನ ಭಯದಲ್ಲಿ ಕಾಂಗ್ರೆಸ್ ಬ್ಯಾಂಕ್ ಖಾತೆಗಳನ್ನು ಬಿಜೆಪಿ ಸೀಜ್ ಮಾಡಿದೆ. ಇದು ಪ್ರಜಾಪ್ರಭುತ್ವಕ್ಕೆ ಮಾರಕ ನಡೆ. ಕಾಂಗ್ರೆಸ್ ಜನರಿಂದ ಹಣ ಸಂಗ್ರಹಿಸಿದೆ. ಜನರು ಸ್ವಯಂಪ್ರೇರಿತವಾಗಿ ಕೊಟ್ಟ ಹಣ ಕಾಂಗ್ರೆಸ್ ಖಾತೆಯಲ್ಲಿತ್ತು. ಸಣ್ಣ ತಾಂತ್ರಿಕ ಕಾರಣ ನೀಡಿ ಇಡೀ ಖಾತೆಯನ್ನು ಸೀಜ್ ಮಾಡಿರುವುದು ಸರ್ವಾಧಿಕಾರಿ ಧೋರಣೆ. ಈ ಬಾರಿ ಬಿಜೆಪಿಯನ್ನು ದೇಶದ ಜನ ಸ್ಪಷ್ಟವಾಗಿ ತಿರಸ್ಕರಿಸಿ ಭಾರತವನ್ನು ಉಳಿಸುತ್ತಾರೆ ಎಂದು ಹೇಳಿದರು.

ಎನ್‌ಡಿಆರ್‌ಎಫ್ ಹಣಕ್ಕಾಗಿ ಸುಪ್ರೀಂಗೆ ಹೋಗಿರುವುದು ರಾಜಕೀಯ ತಂತ್ರಗಾರಿಕೆ: ಬೊಮ್ಮಾಯಿ

ಡಿಸಿಎಂ ಶಿವಕುಮಾರ್‌ ಮಾತನಾಡಿ, ನಾವು ರಾಜ್ಯದಲ್ಲಿ 78 ಲಕ್ಷ ಪಕ್ಷದ ಸದಸ್ಯತ್ವ ನೀಡಿ ಪ್ರತಿಯೊಬ್ಬರಿಂದ 10 ರು. ಸಂಗ್ರಹಿಸಿ ಎಐಸಿಸಿಗೆ ನೀಡಿದೆವು. ಇನ್ನು ಯುವ ಕಾಂಗ್ರೆಸ್ ಸದಸ್ಯತ್ವದಿಂದ 90 ಕೋಟಿ ರು. ಸಂಗ್ರಹವಾಗಿತ್ತು. ನಾವು ಪಕ್ಷದ ಕಟ್ಟಡ, ಸಿಬ್ಬಂದಿ ವೇತನ ನೀಡಲು ಪರದಾಡುವ ಸಂದರ್ಭದಲ್ಲಿ ಎಐಸಿಸಿ ಖಾತೆಯಲ್ಲಿನ 290 ಕೋಟಿ ರು.ಗಳಷ್ಟು ಹಣವನ್ನು ಕೇಂದ್ರ ಸರ್ಕಾರ ಆದಾಯ ತೆರಿಗೆ ಇಲಾಖೆ ಮೂಲಕ ಮುಟ್ಟುಗೋಲು ಹಾಕಿಸಿದೆ. ನಾವು ನ್ಯಾಯಾಧಿಕರಣಕ್ಕೆ ಹೋದರೂ ನಮಗೆ ಪರಿಹಾರ ಸಿಗುತ್ತಿಲ್ಲ. ಇಂತಹ ಪರಿಸ್ಥಿತಿಯಲ್ಲಿ ನಾವು ಯಾರ ಬಳಿ ನ್ಯಾಯ ಕೇಳಬೇಕು ಎಂದು ಅಸಹಾಯಕತೆ ವ್ಯಕ್ತಪಡಿಸಿದರು.

Follow Us:
Download App:
  • android
  • ios