ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ: ಬಿಜೆಪಿಗಿನ್ನು ಭಾರೀ ಕಷ್ಟ ಇದೆ ಎಂದ ಶಶಿ ತರೂರ್
ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಆರೋಪಿಯಾಗಿರುವ ಲೈಂಗಿಕ ಕಿರುಕುಳ ಹಗರಣ ಕರ್ನಾಟಕ ಮಾತ್ರವಲ್ಲದೇ ಇಡೀ ಭಾರತದ ಚುನಾವಣೆ ಮೇಲೆ ಪರಿಣಾಮ ಬೀರಲಿದೆ. ಇದು ಬಿಜೆಪಿಗೆ ಅಡ್ಡಪರಿಣಾಮವಾಗುವ ಸಾಧ್ಯತೆ ಇದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಹೇಳಿದ್ದಾರೆ.
![Lok sabha election 2024 Shashi Tharoor reaction on Revanna sex scandal rav Lok sabha election 2024 Shashi Tharoor reaction on Revanna sex scandal rav](https://static-gi.asianetnews.com/images/01hwy3j8k73w4cxye7mcjn6kgp/1_363x203xt.jpg)
ನವದೆಹಲಿ: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಆರೋಪಿಯಾಗಿರುವ ಲೈಂಗಿಕ ಕಿರುಕುಳ ಹಗರಣ ಕರ್ನಾಟಕ ಮಾತ್ರವಲ್ಲದೇ ಇಡೀ ಭಾರತದ ಚುನಾವಣೆ ಮೇಲೆ ಪರಿಣಾಮ ಬೀರಲಿದೆ. ಇದು ಬಿಜೆಪಿಗೆ ಅಡ್ಡಪರಿಣಾಮವಾಗುವ ಸಾಧ್ಯತೆ ಇದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಹೇಳಿದ್ದಾರೆ.
ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ ಬಿಜೆಪಿ ನಾಯಕರು ಪ್ರಚಾರ ಮಾಡಿದ್ದಾರೆ. ಸಜ್ಜನರ ಪರ ಎನ್ನುವ ಬಿಜೆಪಿಯವರು ಆರೋಪಿ ಪರ ಪ್ರಚಾರ ಮಾಡಿದ್ದಾರೆ. ಇದರಿಂದ ಮುಂದಿನ 5 ಹಂತದ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನೆಡೆಯಾಗುವ ಸಾಧ್ಯತೆಯಿದೆ ಎಂದು ಹೇಳಿದರು.
ರಾಹುಲ್ ಗಾಂಧಿ ಪಿಎಂ ಆಗಲೆಂದು ಪಾಕಿಸ್ತಾನ ಬಯಕೆ: ಪ್ರಧಾನಿ ಮೋದಿ
ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲಿನ ಲೈಂಗಿಕ ಹಗರಣವು ಕರ್ನಾಟಕದಲ್ಲಿ ಮಾತ್ರವಲ್ಲದೆ ಲೋಕಸಭೆ ಚುನಾವಣೆಯ ಉಳಿದ ಹಂತಗಳಲ್ಲಿ ಪ್ರತಿಧ್ವನಿಸಲಿದೆ.
ಪ್ರಜ್ವಲ್ ರೇವಣ್ಣ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಮೊಮ್ಮಗ ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರ ಅಣ್ಣನ ಮಗನಾಗಿದ್ದಾನೆ. ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಬಿಡುಗಡೆಗೊಂಡ ಬಳಿಕ ಕಾಂಗ್ರೆಸ್ ಸೇರಿದಂತೆ ಇತರ ರಾಜಕೀಯ ಪಕ್ಷಗಳು ಜೆಡಿಎಸ್ ಬಿಜೆಪಿ ಮೈತ್ರಿ ಪಕ್ಷಗಳ ವಿರುದ್ಧ ನಿರಂತರ ದಾಳಿಯನ್ನು ನಡೆಸುತ್ತಿದ್ದಾರೆ. ಜೆಡಿಎಸ್ ನೊಂದಿಗೆ ಮೈತ್ರಿ ಮಾಡಿಕೊಂಡು ಬಿಜೆಪಿಗೆ ತೀವ್ರ ಮುಜುಗರ ತಂದೊಡ್ಡಿದೆ. ಈಗಾಗಲೇ ಮಿತ್ರ ಪಕ್ಷ ಜೆಡಿಎಸ್‌ನಿಂದ ಪ್ರಜ್ವಲ್ ರೇವಣ್ಣರನ್ನ ಉಚ್ಚಾಟನೆ ಮಾಡಲಾಗಿದೆ.