Asianet Suvarna News Asianet Suvarna News

Lok sabha election 2024: ಲೋಕಸಭಾ ಟಿಕೆಟ್ ಸಿಗದ್ದಕ್ಕೆ ಈಶ್ವರಪ್ಪ ಬಂಡಾಯ; ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದೇನು?

ಲೋಕಸಭೆ ಟಿಕೆಟ್ ಸಿಗದಿದ್ದರಿಂದ ಈಶ್ವರಪ್ಪ ಅವರಿಗೆ ಬೇಸರ ಆಗಿರಬಹುದು ಅವರ ಮನವೊಲಿಸುವ ಪ್ರಯತ್ನ ಮಾಡಲಾಗುವುದು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

Lok sabha election 2024 Union minister Pralhad joshi reacts about KS Eshwarappa at hubballi rav
Author
First Published Mar 16, 2024, 1:09 PM IST

ಹುಬ್ಬಳ್ಳಿ (ಮಾ.16): ಲೋಕಸಭೆ ಟಿಕೆಟ್ ಸಿಗದಿದ್ದರಿಂದ ಈಶ್ವರಪ್ಪ ಅವರಿಗೆ ಬೇಸರ ಆಗಿರಬಹುದು ಅವರ ಮನವೊಲಿಸುವ ಪ್ರಯತ್ನ ಮಾಡಲಾಗುವುದು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿ, ಈಶ್ವರಪ್ಪ ಅವರ ಜತೆ ಪಕ್ಷದ ರಾಷ್ಟ್ರೀಯ ನಾಯಕರು ಮತ್ತು ಸ್ಥಳೀಯ ನಾಯಕರು ಮಾತುಕತೆ ನಡೆಸಿ ಬೇಸರ ದೂರ ಮಾಡಲಿದ್ದಾರೆ ಎಂದು ತಿಳಿಸಿದರು.

 

ಬಿಎಸ್‌ವೈ ವಿರುದ್ಧ ಆಡಳಿತ ಪಕ್ಷದ ಷಡ್ಯಂತ್ರ: ಪ್ರಲ್ಹಾದ್‌ ಜೋಶಿ ಆಕ್ರೋಶ

ನಾನೂ ಭೇಟಿ ಮಾಡುವೆ: ಈಶ್ವರಪ್ಪ ಅವರು ಅತ್ಯಂತ ಹಿರಿಯ ನಾಯಕರು. ನನಗಿಂತ ಮೊದಲೇ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಇದ್ದವರು. ಟಿಕೆಟ್ ಸಿಗಲಿಲ್ಲ ಎಂಬ ಕಾರಣಕ್ಕೆ ಅನ್ಯ ಯೋಚನೆ ಮಾಡಲಾರರು ಎಂದು ಜೋಶಿ ಹೇಳಿದರು.

ಈಶ್ವರಪ್ಪ  ಅವರನ್ನು ಸದ್ಯದಲ್ಲೇ ನಾನೂ ಭೇಟಿ ಮಾಡಿ ಮಾತನಾಡುವೆ. ಅವರ ಮನವೊಲಿಸುವ ವಿಶ್ವಾಸವಿದೆ. ಪಕ್ಷದ ಹಿರಿಯ ನಾಯಕರಾಗಿ ಅವರು ದುಡುಕಿನ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂಬ ವಿಶ್ವಾಸ ನನಗಿದೆ ಎಂದು ಸಚಿವ ಜೋಶಿ ತಿಳಿಸಿದರು.

Lok Sabha Election 2024: ಬೆಳಗಾವಿ ಕ್ಷೇತ್ರಕ್ಕೆ ಶೆಟ್ಟರ್‌ ಹೆಸರಿದೆ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ

ಟಿಕೇಟ್ ಸಿಗದೇ ಇದ್ದಾಗ ಸಹಜವಾಗಿಯೇ ಎಲ್ಲರಿಗೂ ಬೇಸರ ಆಗುತ್ತದೆ. ಹಾಗಾಗಿ ಪರ-ವಿರೋಧ ಅಭಿಪ್ರಾಯ ಸಾಮಾನ್ಯವಾಗಿರುತ್ತದೆ. ಆದರೆ, ಪಕ್ಷದ ಹೈಕಮಾಂಡ್ ಅದೆಲ್ಲವನ್ನು ಸರಿಪಡಿಸುತ್ತದೆ ಎಂದು ಹೇಳಿದರು.

Follow Us:
Download App:
  • android
  • ios