Asianet Suvarna News Asianet Suvarna News

ಬೊಮ್ಮಾಯಿ ಬದಲು ನನ್ನ ಮುಖ್ಯಮಂತ್ರಿ ಮಾಡಿದ್ರೆ, ಕರ್ನಾಟಕದಲ್ಲಿ 103 ಸೀಟು ತರುತ್ತಿದ್ದೆ: ಯತ್ನಾಳ್

ಕೆಎಸ್ ಈಶ್ವರಪ್ಪನವರು ಅಮಿತ್ ಶಾ ಭೇಟಿಗೆ ತೆರಳಿದ್ರು, ಆದರೆ ಯಾವ ಕಾರಣದಿಂದ‌ ಭೇಟಿಯಾಗಲಿಲ್ಲ ಎಂಬುದು ಗೊತ್ತಿಲ್ಲ. ಹೈಕಮಾಂಡ್‌ ಈಶ್ವರಪ್ಪನವರು ಹೇಳುವ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು. ಪಕ್ಷಕ್ಕೆ ಮುಜುಗರ ಆಗದ ರೀತಿಯಲ್ಲಿ ಎಲ್ಲ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದರು.

Lok sabha election 2024 Vijayapur MLA Basanagowda patil yatnal reaction about family politics at uttara kannada rav
Author
First Published Apr 4, 2024, 5:05 PM IST

ಕಾರವಾರ, ಉತ್ತರಕನ್ನಡ (ಏ.4): ಕೆಎಸ್ ಈಶ್ವರಪ್ಪನವರು ಅಮಿತ್ ಶಾ ಭೇಟಿಗೆ ತೆರಳಿದ್ರು, ಆದರೆ ಯಾವ ಕಾರಣದಿಂದ‌ ಭೇಟಿಯಾಗಲಿಲ್ಲ ಎಂಬುದು ಗೊತ್ತಿಲ್ಲ. ಹೈಕಮಾಂಡ್‌ ಈಶ್ವರಪ್ಪನವರು ಹೇಳುವ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು. ಪಕ್ಷಕ್ಕೆ ಮುಜುಗರ ಆಗದ ರೀತಿಯಲ್ಲಿ ಎಲ್ಲ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದರು.

ಇಂದು ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಲೋಕಸಭೆಯಲ್ಲಿ ಎಲ್ಲಾ 28 ಕ್ಷೇತ್ರದಲ್ಲಿ ಗೆಲ್ಲುವುದು ನಮ್ಮೆಲ್ಲರ ಗುರಿಯಾಗಿದೆ. ಯಾರಾರು ಅಸಮಾಧಾನಗೊಂಡಿದ್ದಾರೋ ಅವರು ವೈಯಕ್ತಿಕ ವಿಚಾರ ಬಿಟ್ಟು ದೇಶದ ವಿಚಾರದಲ್ಲಿ ಮೋದಿಯವರ ವಿಚಾರದಲ್ಲಿ ನಾವೆಲ್ಲ ಕೂಡಿ ಕೆಲಸ ಮಾಡೋಣ ಎಂದು ವಿನಂತಿಸಿದರು.

ಚಿತ್ರದುರ್ಗದಲ್ಲಿ ಕಾಂಗ್ರೆಸ್ ಸಮಾವೇಶ: ಭಾಷಣದ ಮಧ್ಯೆ ಎದ್ದು ಹೊರಟವರಿಗೆ ಗದರಿದ ಸಿಎಂ

ಹಿಂದುತ್ವದ ರಾಜಕಾರಣಿಗಳನ್ನು ಎಂದೂ ಮುಗಿಸಲು ಸಾಧ್ಯವಿಲ್ಲ. ನಾನು ವಿರೋಧ ಪಕ್ಷದ ನಾಯಕನಾಗುವ ಎಲ್ಲಾ ಅರ್ಹತೆ ಇತ್ತು. ಆದರೆ, ನನ್ನನ್ನು ಮಾಡಲಿಲ್ಲ, ನನಗೆ ಕೊಡಬೇಕಿತ್ತು, ಕೊಡಲಿಲ್ಲ. ನನಗೆ ಆ ಬಗ್ಗೆ ಅಸಮಧಾನ ಇಲ್ಲ. ಜೂನ್ 4ರ ನಂತರ ಕುಟುಂಬ ರಾಜಕಾರಣದಿಂದ ಇಡೀ ದೇಶದಲ್ಲಿ ಬಿಜೆಪಿ ಮುಕ್ತವಾಗುತ್ತದೆ. ಈ ಬಗ್ಗೆ ನನಗೆ ಹೈಕಮಾಂಡ್ ಭರವಸೆ ನೀಡಿದೆ. ಹಿಂದೂಪರ ಮಾತನಾಡುವವರಿಗೆ ಯಾವುದೇ ಅನ್ಯಾಯ ಆಗುವುದಿಲ್ಲ. ಸುಧಾಕರ್ ಹಿಂದೆ ಸಚಿವರಾಗಿದ್ದಾಗ ಶಾಸಕರಿಗೆ ಸರಿಯಾಗಿ ಸ್ಪಂದಿಸುತ್ತಿರಲಿಲ್ಲ. ಹಲವು ಶಾಸಕರು ಕಣ್ಣೀರು ಹಾಕಿದ್ದಾರೆ, ಪಕ್ಷ ಅಂತಹ ತಪ್ಪಿನಿಂದ ಸೋತಿದೆ. ಉತ್ತರಕನ್ನಡ ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಆಗಲೇ ಆಗಬೇಕಿತ್ತು. ಅಂತವರ ತಪ್ಪಿನಿಂದ ಜಿಲ್ಲೆಯಲ್ಲಿ ಪಕ್ಷದ ಅಭ್ಯರ್ಥಿ ಗೆಲ್ಲಲಿಲ್ಲ. ಕೆಲವು ನಿರ್ಣಯ ಮಾಡಬೇಕಿತ್ತು, ಮಾಡದ ಕಾರಣ ಪಕ್ಷ ಸೋತಿತ್ತು. ರಾಜ್ಯದಲ್ಲಿ ಅಪ್ಪ, ಮಕ್ಕಳು, ಮಾವ, ಅಳಿಯ ಇವರೇ ಕಾಂಗ್ರೆಸ್ ನಲ್ಲಿ ಕ್ಯಾಂಡಿಡೇಟ್ ಆಗಿದ್ದಾರೆ. ಬಿಜೆಪಿಯಲ್ಲಿ ಸಹ ಅದೇ ರೀತಿಯೇ ಇದೆ. ನಮ್ಮ ಮಗಳಿಗೆ ಕೊಟ್ಟಿಲ್ಲ, ನನ್ನ ಮಗನಿಗೆ ಕೊಟ್ಟಿಲ್ಲ, ನನ್ನ ಮಗ ಸಮರ್ಥನಿದ್ದ ಎಂದು ಎರಡೂ ಪಕ್ಷದಲ್ಲಿ ಇದೆ. ಈ ಲೋಕಸಭೆ ಚುನಾವಣೆ ಅಪ್ಪ , ಮಕ್ಕಳು, ಅಳಿಯ ಮಗಳು ಅಂತಲೇ ಆಗಿದೆ. ಲೋಕಸಭೆಗೆ ಕಾಂಗ್ರೆಸ್ ಸಚಿವರು ಒಬ್ಬರೂ ನಿಲ್ಲಲಿಲ್ಲ, ಬದಲಿಗೆ ಮಕ್ಕಳನ್ನು‌ ನಿಲ್ಲಿಸಿದ್ದಾರೆ. ಅವರು ಸೋತ್ರೆ ಮಂತ್ರಿ ಸ್ಥಾನ ಹೋಗುತ್ತೆ ಅಂತಾ ಭಯದಿಂದ ಯಾರೂ ನಿಲ್ಲಲಿಲ್ಲ ಎಂದು ವ್ಯಂಗ್ಯ ಮಾಡಿದರು.

 

ಈಶ್ವರಪ್ಪ ಬಹಿರಂಗ ಹೇಳಿಕೆ ನೀಡಿದ್ದಕ್ಕೆ ಅಮಿತ್‌ ಶಾ ಸಿಟ್ಟು?

ಬೊಮ್ಮಾಯಿ ಬದಲು ನನ್ನನ್ನು ಮುಖ್ಯಮಂತ್ರಿ ಮಾಡಿದ್ದರೆ 103 ಸೀಟು ಕರ್ನಾಟಕದಲ್ಲಿ ತರುತಿದ್ದೆ. ಹುಬ್ಬಳ್ಳಿಯಲ್ಲಿ ಪೊಲೀಸ್ ಠಾಣೆಯಲ್ಲಿ ಗಲಾಟೆ ಆದಾಗ, ಕೆಜೆ ಹಳ್ಳಿ, ಡಿಜೆ ಹಳ್ಳಿಯಲ್ಲಿ ಗಲಾಟೆ ಆದಾಗ, ಶಿವಮೊಗ್ಗ ದಲ್ಲಿ ಹಿಂದು ಕಾರ್ಯಕರ್ತರ ಹತ್ಯೆಯಾದಾಗ ನಾಲ್ಕು ಎನ್ ಕೌಂಟರ್ ಮಾಡಿದ್ದರೇ ಇಂದು ಈ ಪರಿಸ್ಥಿತಿ ಇರುತ್ತಿರಲಿಲ್ಲ. ಹಿಂದೂ ಕಾರ್ಯಕರ್ತರು ನಿರಾಸಕ್ತಿ ತೋರಿಸಿದ್ದಕ್ಕೆ ನಾವು ಸೋತೆವು ಹಿಂದಿನ ಬಿಜೆಪಿ ಸರ್ಕಾರದ ಬಗ್ಗೆ ಕಿಡಿಕಾರಿದರು. 

Follow Us:
Download App:
  • android
  • ios