ಸಂಭ್ರಮಾಚರಣೆ ವೇಳೆ 'ಮೋದಿ ಹಮಾರಾ ಕುತ್ತ' ಎಂದ ಕಾಂಗ್ರೆಸ್ ಕಾರ್ಯಕರ್ತ!

ಚಿಕ್ಕೋಡಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧ್ಯತೆ ಹಿನ್ನೆಲೆ ಫಲಿತಾಂಶಕ್ಕೆ ಮೊದಲೇ ಕಾಂಗ್ರೆಸ್ ಕಾರ್ಯಕರ್ತರಿಂ ಸಂಭ್ರಮಾಚರಣೆ ಈ ವೇಳೆ ಪ್ರಧಾನಿ ಮೋದಿ ನಿಂದನೆ ಮಾಡಿದ ಘಟನೆ ನಡೆದಿದೆ.

Lok sabha election result 4th june 2024 live chikkodi congress workers raised pro pak slogan rav

ಚಿಕ್ಕೋಡಿ (ಜೂ.4):ಬೆಳಗಾವಿ ತಾಲೂಕು ಕೇಂದ್ರದ ಲೋಕಸಭಾ ಚುನಾವಣಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಪ್ರತಿಹಂತದಲ್ಲೂ ಮುನ್ನಡೆ ಕಾಯ್ದುಕೊಂಡಿದ್ದು, ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ್ ಜೊಲ್ಲೆ ವಿರುದ್ಧ 12.30 ರವರೆಗೆ 2.76 ಲಕ್ಷ ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಗೆಲುವು ಸುಳಿವು ಸಿಗ್ತಿದ್ದಂತೆ ಆರ್‌ಡಿ ಕಾಲೇಜು ಎದುರು ಹರಿದು ಬಂದ  ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು. ಫಲಿತಾಂಶಕ್ಕೆ ಮೊದಲೇ ಗುಲಾಲು ಎರಚಿ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದ ಕಾರ್ಯಕರ್ತರು

Bengaluru Rural constituency: ಕನಕಪುರ ಬಂಡೆ ಡಿಕೆಸುಗೆ ಸರ್ಜರಿ, ಭರ್ಜರಿ ಗೆಲುವು ಕಂಡ ಡಾ. ಮಂಜುನಾಥ್!

 ಸಂಭ್ರಮಾಚರಣೆ ವೇಳೆ ಕಾಂಗ್ರೆಸ್ ಕಾರ್ಯಕರ್ತನೋರ್ವ ದೇಶ ವಿರೋಧಿ ಘೋಷಣೆ ಕೂಗಿದ ಘಟನೆ ನಡೆದಿದೆ. ಅಲ್ಲದೇ ಕಾರ್ಯಕರ್ತನೋರ್ವ ಕಾಂಗ್ರೆಸ್ ಬಾವುಟ ಹಿಡಿದು ಘೋಷಣೆ ಕೂಗುತ್ತಿದ್ದ ವೇಳೆ ಪ್ರಧಾನಿ ಮೋದಿಗೆ ಅವಾಚ್ಯವಾಗಿ ನಿಂದನೆ ಮಾಡಿದ್ದಾನೆ. 'ಮೋದಿ ಹಮಾರಾ ಕುತ್ತಾ' ಎಂದಿರುವ ಕಾಂಗ್ರೆಸ್ ಕಾರ್ಯಕರ್ತ. ಈ ವೇಳೆ ಅವನನ್ನ ಬಾಯಿಮುಚ್ಚಿಸಿದ ಇನ್ನೋರ್ವ ಕಾರ್ಯಕರ್ತ

ಸಂಸತ್ತಿನಲ್ಲಿ ಕರ್ನಾಟಕದ ಧ್ವನಿಯಾಗುವೆ: ತೇಜಸ್ವಿ ಸೂರ್ಯ 

ದೇಶದ 18ನೇ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಲ್ಲಿ ಒಟ್ಟು 2 ಹಂತದ ಮತದಾನ ನಡೆದಿದೆ. ಮೊದಲ ಹಂತದಲ್ಲಿ ಏ.26ರಂದು 14 ಕ್ಷೇತ್ರಗಳಾದ ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು-ಕೊಡಗು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಮತ್ತು ಕೋಲಾರದಲ್ಲಿ ಮತದಾನವಾಗಿದೆ. ಎರಡನೇ ಹಂತದಲ್ಲಿ ಮೇ 7ರಂದು ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ ಮತ್ತು ಶಿವಮೊಗ್ಗ ಸೇರಿ 14 ಕ್ಷೇತ್ರಗಳಲ್ಲಿ ಮತದಾನ ನಡೆದಿದೆ. ರಾಜ್ಯದಲ್ಲಿ ಒಟ್ಟು 5,47,25,675 ಮತದಾರರಿದ್ದು, ಈ ಪೈಕಿ 3,86,57,725 ಜನರು ಮತದಾನ ಮಾಡುವ ಮೂಲಕ ಶೇ.70.64 ಜನರು ಮತ ಚಲಾಯಿಸಿದ್ದಾರೆ. ಮತದಾನ ನಡೆದ ಒಂದು ತಿಂಗಳ ಬಳಿಕ ಇಂದು (ಜೂ.4ರಂದು) ಫಲಿತಾಂಶ ಪ್ರಕಟವಾಗುತ್ತಿದೆ. ಇದರಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಫಲಿತಾಂಶ ಅತ್ಯಂತ ಕುತೂಹಲವನ್ನು ಕೆರಳಿಸಿದೆ. ಮತ್ತೊಂದೆಡೆ ಮೈಸೂರಿನ ಮಹಾರಾಜರು ಸ್ಪರ್ಧಿಸಿದ ಕ್ಷೇತ್ರ, ಅಶ್ಲೀಲ ವಿಡಿಯೋ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣ ಸ್ಪರ್ಧಿಸಿದ ಹಾಸನ ಲೋಕಸಭಾ ಕ್ಷೇತ್ರಗಳ ಫಲಿತಾಂಶದ ಮೇಲೆ ಹೆಚ್ಚು ಜನರ ಚಿತ್ತ ನೆಟ್ಟಿದೆ. ಸುಮಾರು 10ಕ್ಕೂ ಅಧಿಕ ಕ್ಷೇತ್ರದಲ್ಲಿ ಕಾಂಗ್ರೆಸ್ ಘಟಾನುಘಟಿ ನಾಯಕರು ತಮ್ಮ ಸಹೋದರರು, ಮಕ್ಕಳು, ಪತ್ನಿಯರನ್ನು ಕಣಕ್ಕಿಳಿಸಿದ್ದು 2ನೇ ತಲೆಮಾರಿನ ರಾಜಕೀಯ ಬೆಳೆಸಲು ಮುಂದಡಿಯಿಟ್ಟಿದ್ದಾರೆ.

Latest Videos
Follow Us:
Download App:
  • android
  • ios