ಜೆಡಿಎಸ್ -ಬಿಜೆಪಿ ಮೈತ್ರಿಯಿಂದ ಸೋಲಾಯ್ತಾ ಡಿಕೆ ಸುರೇಶ್ ಹೇಳಿದ್ದೇನು?
ಮೂರು ಬಾರಿ ಸಂಸದನಾಗಿ ಕೆಲಸ ಮಾಡಲು ಅವಕಾಶ ಕೊಟ್ಟಿದ್ದೀರಿ ನಾಲ್ಕನೇ ಬಾರಿ ಅಗ್ನಿಪರೀಕ್ಷೆಯಲ್ಲಿ ವಿರಾಮ ಕೊಟ್ಟಿದ್ದೀರಿ. ಮತದಾರ ಪ್ರಭುಗಳು ಕೊಟ್ಟಿರೋ ತೀರ್ಮಾನ ಸ್ವಾಗತಿಸುತ್ತೇನೆ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ಡಿಕೆ ಸುರೇಶ್ ಮಾಧ್ಯಮದ ಮೂಲಕ ಕ್ಷೇತ್ರದ ಮತದಾರರಿಗೆ ಧನ್ಯವಾದ ತಿಳಿಸಿದರು.
ಬೆಂಗಳೂರು (ಜೂ.4): ಮೂರು ಬಾರಿ ಸಂಸದನಾಗಿ ಕೆಲಸ ಮಾಡಲು ಅವಕಾಶ ಕೊಟ್ಟಿದ್ದೀರಿ ನಾಲ್ಕನೇ ಬಾರಿ ಅಗ್ನಿಪರೀಕ್ಷೆಯಲ್ಲಿ ವಿರಾಮ ಕೊಟ್ಟಿದ್ದೀರಿ. ಮತದಾರ ಪ್ರಭುಗಳು ಕೊಟ್ಟಿರೋ ತೀರ್ಮಾನ ಸ್ವಾಗತಿಸುತ್ತೇನೆ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ಡಿಕೆ ಸುರೇಶ್ ಮಾಧ್ಯಮದ ಮೂಲಕ ಕ್ಷೇತ್ರದ ಮತದಾರರಿಗೆ ಧನ್ಯವಾದ ತಿಳಿಸಿದರು.
ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನನಗೆ ಅವಕಾಶ ಕೊಟ್ಟ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ. ಗೆಲುವು ಪಡೆದ ಡಾ ಮಂಜುನಾಥ ಅವರಿಗೂ ಧನ್ಯವಾದ ಹೇಳಿದರು.
ಡಾ ಮಂಜುನಾಥ್ ವಿರುದ್ಧ ಭಾರೀ ಹಿನ್ನಡೆ; ಡಿಕೆ ಶಿವಕುಮಾರ ನಿವಾಸಕ್ಕೆ ಆಗಮಿಸಿದ ಡಿಕೆ ಸುರೇಶ್
ಹೊಸಬರು ಚೆನ್ನಾಗಿ ಕೆಲಸ ಮಾಡಲಿ ಕ್ಷೇತ್ರಕ್ಕೆ ಒಳ್ಳೆಯದಾಗಲಿ. ಕಾರ್ಯಕರ್ತರೊಂದಿಗೆ ನಾನು ಜೊತೆಯಾಗಿರುತ್ತೇನೆ. ಸೋಲು ಗೆಲುವು ಸಮಾನವಾಗಿ ಸ್ವೀಕರಿಸಬೇಕು. ನಾನು ಸೋಲನ್ನ ಸ್ವೀಕರಿಸಿದ್ದೇನೆ. ಗೆಲ್ಲುವ ವಿಶ್ವಾಸ ಇತ್ತು ಆದರೆ ಜನ ಬೇರೆ ತೀರ್ಮಾನ ಕೊಟ್ಟಿದ್ದಾರೆ ಎಂದರು.
ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯಿಂದ ಸೋಲಾಯ್ತಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿಕೆ ಸುರೇಶ್, ರಾಜಕೀಯದಲ್ಲಿ ತಂತ್ರ ಕುತಂತ್ರ ಕೆಲಸ ಮಾಡುತ್ತೆ, ಅದನ್ನ ಅವರು ಮಾಡಿದ್ದಾರೆ. ನಾನು ಮೊದಲಿನಿಂದಲೂ ಕಾರ್ಯಕರ್ತರ ಜೊತೆ ಇದ್ದವನು, ಈಗಲೂ ಇರ್ತೇನೆ ಮುಂದೆಯೂ ಹೋರಾಟ ಮಾಡುತ್ತೇನೆ. ಈ ಬಾರಿ ಇಂಡಿಯಾ ಒಕ್ಕೂಟಕ್ಕೆ ಒಳ್ಳೆಯ ನಂಬರ್ ಬಂದಿದೆ. ನಾವು 400 ಗೆಲ್ತೇವೆ ಎಂದು ಬಿಜೆಪಿಯವರು ಹೇಳಿಕೊಂಡಿದ್ರು. ಮಾಧ್ಯಮಗಳು ಹೇಳಿದ್ದ ಚುನಾವಣೋತ್ತರ ಸಮೀಕ್ಷೆಗಳು ಸಹ ಸುಳ್ಳಾಗಿದೆ ಎಂದರು.
ಡಾ . ಮಂಜುನಾಥ್ 2 ಲಕ್ಷ ಮತಗಳ ಅಂತರದಿಂದ ಗೆಲ್ತಾರೆ: ಮುನಿರತ್ನ
ದೇಶದ 18ನೇ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಲ್ಲಿ ಒಟ್ಟು 2 ಹಂತದ ಮತದಾನ ನಡೆದಿದೆ. ಮೊದಲ ಹಂತದಲ್ಲಿ ಏ.26ರಂದು 14 ಕ್ಷೇತ್ರಗಳಾದ ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು-ಕೊಡಗು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಮತ್ತು ಕೋಲಾರದಲ್ಲಿ ಮತದಾನವಾಗಿದೆ. ಎರಡನೇ ಹಂತದಲ್ಲಿ ಮೇ 7ರಂದು ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ ಮತ್ತು ಶಿವಮೊಗ್ಗ ಸೇರಿ 14 ಕ್ಷೇತ್ರಗಳಲ್ಲಿ ಮತದಾನ ನಡೆದಿದೆ. ರಾಜ್ಯದಲ್ಲಿ ಒಟ್ಟು 5,47,25,675 ಮತದಾರರಿದ್ದು, ಈ ಪೈಕಿ 3,86,57,725 ಜನರು ಮತದಾನ ಮಾಡುವ ಮೂಲಕ ಶೇ.70.64 ಜನರು ಮತ ಚಲಾಯಿಸಿದ್ದಾರೆ. ಮತದಾನ ನಡೆದ ಒಂದು ತಿಂಗಳ ಬಳಿಕ ಇಂದು (ಜೂ.4ರಂದು) ಫಲಿತಾಂಶ ಪ್ರಕಟವಾಗುತ್ತಿದೆ. ಇದರಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಫಲಿತಾಂಶ ಅತ್ಯಂತ ಕುತೂಹಲವನ್ನು ಕೆರಳಿಸಿದೆ. ಮತ್ತೊಂದೆಡೆ ಮೈಸೂರಿನ ಮಹಾರಾಜರು ಸ್ಪರ್ಧಿಸಿದ ಕ್ಷೇತ್ರ, ಅಶ್ಲೀಲ ವಿಡಿಯೋ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣ ಸ್ಪರ್ಧಿಸಿದ ಹಾಸನ ಲೋಕಸಭಾ ಕ್ಷೇತ್ರಗಳ ಫಲಿತಾಂಶದ ಮೇಲೆ ಹೆಚ್ಚು ಜನರ ಚಿತ್ತ ನೆಟ್ಟಿದೆ. ಸುಮಾರು 10ಕ್ಕೂ ಅಧಿಕ ಕ್ಷೇತ್ರದಲ್ಲಿ ಕಾಂಗ್ರೆಸ್ ಘಟಾನುಘಟಿ ನಾಯಕರು ತಮ್ಮ ಸಹೋದರರು, ಮಕ್ಕಳು, ಪತ್ನಿಯರನ್ನು ಕಣಕ್ಕಿಳಿಸಿದ್ದು 2ನೇ ತಲೆಮಾರಿನ ರಾಜಕೀಯ ಬೆಳೆಸಲು ಮುಂದಡಿಯಿಟ್ಟಿದ್ದಾರೆ.