Asianet Suvarna News Asianet Suvarna News

ಕಾಂಗ್ರೆಸ್ ಪಕ್ಷದ ಪಾಲಿಗೆ ಪ್ರಧಾನಿ ಮೋದಿ ಶನಿ: ಬೊಮ್ಮಾಯಿ ತಿರುಗೇಟು

ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಪಕ್ಷದ ಪಾಲಿಗೆ ಶನಿನೇ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

Lok Sabha Elections 2024 Basavaraj Bommai Slams On Congress Govt gvd
Author
First Published Apr 22, 2024, 6:03 AM IST

ಬೆಂಗಳೂರು (ಏ.22): ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಪಕ್ಷದ ಪಾಲಿಗೆ ಶನಿನೇ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ಸಿನ ಮುಖಂಡ ರಮೇಶ್ ಕುಮಾರ್ ಎಷ್ಟು ಸತ್ಯವಂತರು ಎನ್ನುವುದು ಎಲ್ಲರಿಗೂ ಗೊತ್ತಿದೆ. ಮೋದಿ ಅವರು ರಮೇಶ್ ಕುಮಾರ್ ಮತ್ತು ಕಾಂಗ್ರೆಸ್ಸಿಗೆ ಶನಿಯಾಗಿದ್ದಾರೆ. ಯಾರು ಭಷ್ಟಾಚಾರ ಮಾಡುತ್ತಾರೆ, ಯಾರು ದೇಶವಿರೊಧಿ ಚಟುವಟಿಕೆ ಮಾಡುತ್ತಾರೆ. ಯಾರು ಜನ ವಿರೋಧಿ ಕೆಲಸ ಮಾಡುತ್ತಾರೆಯೋ ಅವರಿಗೆ ಮೋದಿ ಶನಿಯಾಗಿ ಕಾಡುತ್ತಾರೆ ಎಂದು ತಿರುಗೇಟು ನೀಡಿದರು. ದೇಶಭಕ್ತರಿಗೆ, ಯುವಕರಿಗೆ, ಹೆಣ್ಣುಮಕ್ಕಳಿಗೆ ಅವರು ವರವನ್ನು ಕೊಡುತ್ತಾರೆ. ರಮೇಶ್ ಕುಮಾರ್ ಅವರಿಗೆ ಅದರ ಒಳ ಮರ್ಮ ಗೊತ್ತಿದೆ ಎಂದು ತೀಕ್ಷ್ಣವಾಗಿ ಹೇಳಿದರು.

ಹಾಲಿನ ಬಾಕಿ ಕೊಡಲು ಹಣ ಇಲ್ಲ: ಧಾನಿ ನರೇಂದ್ರ ಮೋದಿ ಅಪ್ಪಟ ದೇಶಭಕ್ತರಾಗಿದ್ದು, ಅವರು ದೇಶಕ್ಕಾಗಿ ದಿನದ 18 ಗಂಟೆ ನಿರಂತರ ಕೆಲಸ ಮಾಡುತ್ತಾರೆ ಎಂದು ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬಲಿಷ್ಠ ದೇಶಕ್ಕೆ ಬಲಿಷ್ಠ ನಾಯಕತ್ವ ಬೇಕು. ಬಿಜೆಪಿ ಜಗತ್ತಿನ ಅತಿ ದೊಡ್ಡ ಪಕ್ಷವಾಗಿದೆ. ಪ್ರಧಾನಿ ನರೇಂದ್ರ ಮೋದಿ ದೇಶದ ಬಲಿಷ್ಠ ನಾಯಕರಾಗಿದ್ದಾರೆ. ಮೋದಿ ತಮ್ಮ ತಾಯಿ ನಿಧನ ಹೊಂದಿದಾಗ ಕೇವಲ ಮೂರು ಗಂಟೆಯಲ್ಲಿ ಅಂತ್ಯಸಂಸ್ಕಾರ ಮಾಡಿ ಮತ್ತೆ ದೇಶದ ಕರ್ತವ್ಯಕ್ಕೆ ಹಾಜರಾದ ಅಪ್ಪಟ ದೇಶಪ್ರೇಮಿಯಾಗಿದ್ದಾರೆ ಎಂದರು.

ಸಾಮಾಜಿಕವಾಗಿಯೂ ಮೋದಿ ಅವರು ಸಾಕಷ್ಟು ಸಹಾಯ ಮಾಡಿದ್ದಾರೆ. ಎಲ್ಲರಿಗೂ 10 ಕೆಜಿ ಅಕ್ಕಿ ಕೊಟ್ಟರು. ಕೋವಿಡ್ ಸಂದರ್ಭದಲ್ಲಿ ಎಲ್ಲರಿಗೂ ಮೂರು ಉಚಿತ ಲಸಿಕೆ ಹಾಕಿಸಿದರು. ನಮ್ಮ ದೇಶದಲ್ಲಿ ಯಾವುದೇ ಸಮಸ್ಯೆ ಇಲ್ಲ. ಮೋದಿ ನಾಲ್ಕು ಕೋಟಿ ಮನೆ ಕಟ್ಟಿಸಿದ್ದಾರೆ. ದೇಶದಲ್ಲಿ ನೂರು ಕೋಟಿ ಮನೆಗಳಿವೆ. ಎಲ್ಲ ಮನೆಗಳಿಗೂ ಜಲ ಜೀವನ್ ಮಿಷನ್ ಮೂಲಕ ನಳದ ನೀರು ಕೊಡುತ್ತಿದ್ದಾರೆ. ಮೋದಿ ಅವರು ಶಾಶ್ವತ ಗ್ಯಾರಂಟಿ ಯೋಜನೆ ನೀಡುತ್ತಿದ್ದಾರೆ ಎಂದರು.

ಕಾಂಗ್ರೆಸ್‌ನವರ ಕುಮ್ಮಕ್ಕಿನಿಂದ ಅಪರಾಧ ಚಟುವಟಿಕೆ ಹೆಚ್ಚಳ: ಶಾಸಕ ಮುನಿರತ್ನ ವಾಗ್ದಾಳಿ

ರಾಜ್ಯ ಆರ್ಥಿಕ ದಿವಾಳಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಆಡಳಿತ ಪಕ್ಷದ ಶಾಸಕರಿಗೆ ಅಭಿವೃದ್ಧಿಗೆ ಹಣ ಇಲ್ಲ ಎಂದು ಹೇಳುತ್ತಿದ್ದಾರೆ. ಬರ ಬಂದಿದೆ ರೈತರಿಗೆ ಕೇವಲ ಎರಡು ಸಾವಿರ ಪರಿಹಾರ ನೀಡಿ ಕೇಂದ್ರದ ಮೇಲೆ ಆರೋಪ ಮಾಡುತ್ತಿದ್ದಾರೆ. ಹಾಲು ಉತ್ಪಾದಕರಿಗೆ ಸುಮಾರು ₹1100 ಕೋಟಿ ಬಾಕಿ ಕೊಡಬೇಕಿದೆ. ಇದೊಂದು ರೈತ ವಿರೋಧಿ, ಬಡವರ, ದಲಿತರ ವಿರೋಧಿ ಸರ್ಕಾರ ಎಂದು ವಾಗ್ದಾಳಿ ನಡೆಸಿದರು. ಜನರ ತೆರಿಗೆ ಹಣವನ್ನು ಗ್ಯಾರಂಟಿಗಳಿಗೆ ನೀಡಿದ್ದಾರೆ. ಅಷ್ಟೇ ಅಲ್ಲದೇ ಈ ವರ್ಷ ಒಂದು ಲಕ್ಷ ಐದು ಸಾವಿರ ಕೋಟಿ ಸಾಲ ಮಾಡಿದ್ದಾರೆ. ಪ್ರತಿಯೊಬ್ಬರ ತಲೆಯ ಮೇಲೆ ಐವತ್ತು ಸಾವಿರ ಸಾಲ ಹೇರಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ಆರೋಪಿಸಿದರು.

Follow Us:
Download App:
  • android
  • ios