Lok Sabha Elections 2024: ಬಿಜೆಪಿ 650 ಪ್ರಚಾರ ಸಭೆ, 180 ರೋಡ್‌ಶೋ: ಸುನಿಲ್‌ ಕುಮಾರ್‌ ಹೇಳಿದ್ದೇನು?

ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಮೂರು ರೀತಿಯಲ್ಲಿ ಪ್ರಚಾರ ಕೈಗೊಂಡು ಮತದಾರರನ್ನು ತಲುಪುವಲ್ಲಿ ಯಶಸ್ವಿಯಾಗಿದ್ದೇವೆ. ಎಲ್ಲಾ 28 ಕ್ಷೇತ್ರದಲ್ಲಿಯೂ ಗೆಲ್ಲುವ ವಿಶ್ವಾಸವನ್ನು ಹೊಂದಿದ್ದೇವೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಿಲ್‌ ಕುಮಾರ್‌ ಹೇಳಿದ್ದಾರೆ.

Lok Sabha Elections 2024 BJP 650 campaign meeting 180 roadshow Says V Sunil Kumar gvd

ಬೆಂಗಳೂರು (ಮೇ.12): ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಮೂರು ರೀತಿಯಲ್ಲಿ ಪ್ರಚಾರ ಕೈಗೊಂಡು ಮತದಾರರನ್ನು ತಲುಪುವಲ್ಲಿ ಯಶಸ್ವಿಯಾಗಿದ್ದೇವೆ. ಎಲ್ಲಾ 28 ಕ್ಷೇತ್ರದಲ್ಲಿಯೂ ಗೆಲ್ಲುವ ವಿಶ್ವಾಸವನ್ನು ಹೊಂದಿದ್ದೇವೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಿಲ್‌ ಕುಮಾರ್‌ ಹೇಳಿದ್ದಾರೆ. ಮಲ್ಲೇಶ್ವರದಲ್ಲಿನ ಬಿಜೆಪಿ ಕಚೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಧ್ಯಕ್ಷತೆಯಲ್ಲಿ ಲೋಕಸಭಾ ಚುನಾವಣೆಯ ಅವಲೋಕನ ಸಭೆ ನಡೆಯಿತು. ಬಳಿಕ ಸುದ್ದಿಗೋಷ್ಠಿಯಲ್ಲಿ ಸಭೆ ವಿವರ ನೀಡಿದ ಸುನಿಲ್‌ ಕುಮಾರ್‌, ಲೋಕಸಭಾ ಚುನಾವಣೆ ವೇಳೆ ಬೃಹತ್‌ ಸಭೆಗಳು, ರೋಡ್‌ಶೋ ಮತ್ತು ಮನೆಯಂಗಳದಲ್ಲಿನ ಸಭೆಗಳನ್ನು ಯಶಸ್ವಿಯಾಗಿ ನಡೆಸಿದ್ದೇವೆ. 

ಕಡಿಮೆ ಅವಧಿಯಲ್ಲಿ ಈ ರೀತಿಯಾಗಿ ಮೂರು ರೀತಿಯಲ್ಲಿ ಪ್ರಚಾರ ಕೈಗೊಂಡು ಹೆಚ್ಚು ಜನರನ್ನು ತಲುಪುವ ಪ್ರಯತ್ನ ಮಾಡಲಾಯಿತು ಎಂದು ತಿಳಿಸಿದರು. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸೇರಿದಂತೆ 14 ಮಂದಿ ರಾಷ್ಟ್ರೀಯ ಮಟ್ಟದ ಮುಖಂಡರು ರಾಜ್ಯದಲ್ಲಿ 79 ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಿದ್ದಾರೆ. 39 ಕಡೆಗಳಲ್ಲಿ ರೋಡ್ ಶೋಗಳು ನಡೆದಿವೆ. ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಸೇರಿದಂತೆ ಸುಮಾರು 30 ರಾಜ್ಯದ ಮಟ್ಟದ ಪ್ರಮುಖರು 557 ಸಭೆಗಳಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ್ದಾರೆ. 

139 ಕಡೆಗಳಲ್ಲಿ ರಾಜ್ಯ ನಾಯಕರು ರೋಡ್ ಶೋ ನಡೆಸಿದ್ದಾರೆ ಎಂದು ವಿವರಿಸಿದರು. ಒಟ್ಟು 650ಕ್ಕೂ ಹೆಚ್ಚು ಸಾರ್ವಜನಿಕ ಸಭೆಗಳು, 180ಕ್ಕೂ ಹೆಚ್ಚು ರೋಡ್ ಶೋಗಳನ್ನು ಮಾಡಿದ್ದು, ಮತದಾರರನ್ನು ಸಂಪರ್ಕಿಸುವ ಯಶಸ್ವಿ ಪ್ರಯತ್ನವಾಗಿದೆ. ಕಾಂಗ್ರೆಸ್ ಅಪಪ್ರಚಾರ, ಡೇಂಜರ್ ಕಾಂಗ್ರೆಸ್ ಎಂದು ತಿಳಿಸಲು ‘ಮನೆಯಂಗಳದಲ್ಲಿ ಸಭೆ’ ಎಂಬ ಕರೆ ಕೊಡಲಾಗಿತ್ತು. 50-75 ಜನರನ್ನೊಳಗೊಂಡ ಸುಮಾರು 60 ಸಾವಿರಕ್ಕೂ ಹೆಚ್ಚು ಸಣ್ಣ ಸಣ್ಣ ಸಭೆಗಳನ್ನು ಎಲ್ಲಾ ಬೂತ್‌ಗಳಲ್ಲಿಯೂ ಮಾಡಿರುವುದು ಈ ಚುನಾವಣೆಯ ವಿಶೇಷವಾಗಿದೆ ಎಂದು ಮಾಹಿತಿ ನೀಡಿದರು. 

ರಾಜ್ಯ ಸರ್ಕಾರ ಬೀಳಿಸುವುದು ಅಸಾಧ್ಯ: ಎಚ್ಡಿಕೆಗೆ ಸಚಿವ ಎಂ.ಬಿ.ಪಾಟೀಲ್‌ ಸವಾಲು

ಚುನಾವಣೆ ದಿನಾಂಕ ಘೋಷಣೆಯಾದ ದಿನದಿಂದ ಮುಗಿಯುವವರೆಗೆ ಸರ್ಕಾರಿ ಅಧಿಕಾರಿ ಬದಲಾವಣೆ ಸೇರಿ 152 ದೂರಗಳನ್ನು ಚುನಾವಣಾ ಆಯೋಗಕ್ಕೆ ನೀಡಿದ್ದೇವೆ. ಕಾಂಗ್ರೆಸ್ ಆಡಳಿತ ಯಂತ್ರವನ್ನು ಸಂಪೂರ್ಣವಾಗಿ ದುರುಪಯೋಗ ಮಾಡಿದೆ. ಜಿಲ್ಲಾ ಮತ್ತು ತಾಲೂಕುಗಳಲ್ಲಿ ಪಕ್ಷದ ಕಾರ್ಯಕರ್ತರನ್ನು ಹೆದರಿಸುವ ತಂತ್ರ, ಮೊಕದ್ದಮೆ ಹಾಕಿ ವ್ಯಾಪಕ ದೌರ್ಜನ್ಯ ಮಾಡುವ ಕೆಲಸ ಮಾಡಿದೆ. ಈ ಬಗ್ಗೆಯೂ ದೂರು ದಾಖಲಿಸಲಾಗಿದೆ. ಮುಂದಿನ ಒಂದು ವಾರದಲ್ಲಿ ಆಯಾ ಲೋಕಸಭೆ ಕ್ಷೇತ್ರದಲ್ಲಿ ಅವಲೋಕನ ಸಭೆ ಮಾಡುವಂತೆ ಸೂಚಿಸಲಾಗಿದೆ ಎಂದು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ವಿಧಾನಪರಿಷತ್‌ ಸದಸ್ಯ ಛಲವಾದಿ ನಾರಾಯಣಸ್ವಾಮಿ, ರಾಜ್ಯ ಕಾರ್ಯದರ್ಶಿ ತಮ್ಮೇಶ್ ಗೌಡ, ಮುಖ್ಯ ವಕ್ತಾರ ಅಶ್ವತ್ಥನಾರಾಯಣ್, ಇತರರು ಉಪಸ್ಥಿತರಿದ್ದರು.

Latest Videos
Follow Us:
Download App:
  • android
  • ios