ಯಪ್ಪಾ ಯಪ್ಪಾ ಮೋದಿ ಎಷ್ಟು ಸುಳ್ಳು ಹೇಳ್ತಾರೆ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಪ್ರತಿ ಬಾರಿ ರಾಜ್ಯಕ್ಕೆ ಬಂದಾಗಲೆಲ್ಲ ಮೋದಿ ಭಯಾನಕ ಸುಳ್ಳು ಹೇಳಿ ಹೋಗುತ್ತಾರೆ. ಹೆಣ್ಮಕ್ಕಳ ತಾಳಿ, ಕೈಬಳೆ ಬಗ್ಗೆ ಸುಳ್ಳು ಹೇಳ್ಕೊಂಡು ತಿರುಗುವ ಮೋದಿಯಿಂದ ಪ್ರಧಾನಿ ಹುದ್ದೆಗೆ ಮರ್ಯಾದೆ ಬರಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. 

Lok Sabha Elections 2024 CM Siddaramaiah Slams On PM Narendra Modi At Belagavi gvd

ಬೆಳಗಾವಿ (ಏ.29): ಪ್ರತಿ ಬಾರಿ ರಾಜ್ಯಕ್ಕೆ ಬಂದಾಗಲೆಲ್ಲ ಮೋದಿ ಭಯಾನಕ ಸುಳ್ಳು ಹೇಳಿ ಹೋಗುತ್ತಾರೆ. ಹೆಣ್ಮಕ್ಕಳ ತಾಳಿ, ಕೈಬಳೆ ಬಗ್ಗೆ ಸುಳ್ಳು ಹೇಳ್ಕೊಂಡು ತಿರುಗುವ ಮೋದಿಯಿಂದ ಪ್ರಧಾನಿ ಹುದ್ದೆಗೆ ಮರ್ಯಾದೆ ಬರಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಪ್ರಿಯಾಂಕ ಜಾರಕಿಹೊಳಿ ಪರ ಪ್ರಚಾರದ ವೇಳೆ ಮಾತನಾಡಿದ ಅವರು, ಇಷ್ಟೊಂದು ಸುಳ್ಳು ಹೇಳೋ ಮೋದಿಗೆ ನಾಚಿಕೆನೂ ಆಗಲ್ಲ. ಇವರಿಗೆ ಮಾನ ಮರ್ಯಾದೆನೂ ಇಲ್ಲ. ಯಪ್ಪಾ ಯಪ್ಪಾ ಯಪ್ಪಾ ಈ ಮೋದಿ ಯಾವ ಮಟ್ಟದ ಸುಳ್ಳು ಸೃಷ್ಟಿ ಮಾಡ್ತಾರಲ್ಲ ನಾಚ್ಕೆನೂ ಆಗಲ್ಲ ಎಂದರು.

ಕಿತ್ತೂರು ರಾಣಿ ಜಯಂತಿ ಆಚರಣೆಗೆ ಆದೇಶಿಸಿದ್ದು ನಾವು, ಬೊಮ್ಮಾಯಿ ಮಾಡ್ಲಿಲ್ಲ, ಯಡಿಯೂರಪ್ಪ ಮಾಡ್ಲಿಲ್ಲ. ನಾವು ಯಾವತ್ತೂ ಶಿವಾಜಿ ಮಹಾರಾಜರನ್ನು ಅವಮಾನಿಸಿಲ್ಲ. ಆದರೆ, ಈ ಮೋದಿ ಅದೇನು ಸುಳ್ಳು ಹೇಳ್ತಾರೆ ನೋಡಿ‌. ಕಾಂಗ್ರೆಸ್‌ನವರು ರಾಣಿ ಚನ್ನಮ್ಮರಿಗೆ ಮತ್ತು ಶಿವಾಜಿ ಮಹಾರಾಜರಿಗೆ ಅವಮಾನ ಮಾಡಿದ್ದೀವಿ ಎಂದು ಸುಳ್ಳು ಹೇಳ್ತೀರಲ್ಲ, ಸುಳ್ಳಿಗೆ ಒಂದು ಮಿತಿಯಾದರೂ ಬೇಡ್ವಾ ಮೋದಿ ಎಂದು ಪ್ರಶ್ನಿಸಿದರು. ಪ್ರತಿ ಭಾರತೀಯರ ಖಾತೆಗೆ ₹15 ಲಕ್ಷ ಹಾಕ್ತೀವಿ ಎಂದು ನಂಬಿಸಿ ಪ್ರತಿ ಭಾರತೀಯರ ಹಣೆಗೆ 3 ನಾಮ ತಿಕ್ಕಿದ್ರು. ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡ್ತೀವಿ ಎಂದು ನಂಬಿಸಿ ಕೆಲಸ ಕೇಳಿದ್ರೆ ಪಕೋಡ ಮಾರಿ ಅಂತೀರಿ. ಥೂ ನಿಮಗೆ ನಾಚಿಕೆನೇ ಆಗಲ್ವಾ ಎಂದು ಕಿಡಿಕಾರಿದರು.

ಎಚ್‌.ಡಿ.ರೇವಣ್ಣಗೆ ಬಂಧನ ಭೀತಿ?: ಪ್ರಜ್ವಲ್‌ ಬಳಿಕ ಆರೋಪಿ ನಂ.1 ತಂದೆಗೂ ಸಂಕಷ್ಟ

ಡಾಲರ್ ಎದುರು ರುಪಾಯಿ ಮೌಲ್ಯ ಇಳಿಸ್ತೀವಿ ಅಂದ್ರಿ, ಇಳಿಸಿದ್ರಾ? ಬೆಲೆ ಏರಿಕೆ ತಡಿತೀವಿ ಅಂದ್ರಿ. ತಡೆದ್ರಾ? ಪ್ರತೀ ಬಾರಿ ರಾಜ್ಯಕ್ಕೆ ಬರೋದು, ಹೊಸ ಹೊಸ ಸುಳ್ಳು ಹೇಳಿ ಹೋಗೋದು. ಇನ್ನೂ ಎಷ್ಟು ವರ್ಷ ಹಿಂದುಳಿದ ಜಾತಿ-ಸಮುದಾಯಗಳನ್ನು ನಂಬಿಸಿ ವಂಚಿಸ್ತೀರಿ? ಸುಳ್ಳು ಹೇಳ್ಕೊಂಡು ತಿರುಗ್ತೀರಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಾವು ಭಾರತೀಯರ ಬದುಕಿನ ಬಗ್ಗೆ ಮಾತಾಡ್ತೀವಿ. ಬಿಜೆಪಿ ಭಾರತೀಯರ ಭಾವನೆಗಳ ಜೊತೆ ಚೆಲ್ಲಾಟ ಆಡ್ಕೊಂಡು ಲಾಭ ಮಾಡಿಕೊಳ್ತಾರೆ. ಆದರೆ, ನಾವು ಕಾಂಗ್ರೆಸ್ಸಿನವರು ಜನರ ಬದುಕಿನ‌ ಸಂಕಷ್ಟಗಳನ್ನು ಕಡಿಮೆ ಮಾಡಲು ಕಾರ್ಯಕ್ರಮ ರೂಪಿಸಿ ಜಾರಿ ಮಾಡಿದ್ದೇವೆ. ನುಡಿದಂತೆ ನಡೆದಿದ್ದೇವೆ. ಜನರಿಗೆ ಕೊಟ್ಟ ಮಾತನ್ನು ಈಡೇರಿಸಿದ ನೈತಿಕತೆಯಿಂದ ನಾವು ನಿಮ್ಮ ಮುಂದೆ ಬಂದು ಮತ ಕೇಳುತ್ತಿದ್ದೇವೆ ಎಂದು ಮನವಿ ಮಾಡಿದರು.

Latest Videos
Follow Us:
Download App:
  • android
  • ios