Asianet Suvarna News Asianet Suvarna News

ಲೋಕಸಭೆ ಚುನಾವಣೆ: ಸಂಸದ ಡಿ.ಕೆ.ಸುರೇಶ್ ಮಣಿಸಲು ಹೃದ್ರೋಗ ತಜ್ಞ ಡಾ.ಸಿ.ಎನ್‌.ಮಂಜುನಾಥ್‌ ಸ್ಪರ್ಧೆ?

ಲೋಕಸಭೆ ಚುನಾವಣೆಗೆ ಹಳೆ ಮೈಸೂರು ಭಾಗದಲ್ಲಿ ಮತ ಕ್ರೋಡೀಕರಣಕ್ಕೆ ಬಿಜೆಪಿ -ಜೆಡಿಎಸ್‌ ಜಂಟಿ ತಾಲೀಮು ಮಹತ್ವದ ಘಟ್ಟ ತಲುಪಿದ್ದು, ಬೆಂಗಳೂರು ಗ್ರಾಮಾಂತರದಿಂದ ಖ್ಯಾತ ಹೃದ್ರೋಗ ತಜ್ಞ ಡಾ.ಸಿ.ಎನ್‌.ಮಂಜುನಾಥ್‌ ಕಣಕ್ಕಿಳಿಯುವ ಸಾಧ್ಯತೆಗಳು ದಟ್ಟವಾಗಿವೆ. 

Lok Sabha Elections 2024 Dr Cn Manjunath Contests As Alliance Candidate From Bengaluru Rural gvd
Author
First Published Feb 8, 2024, 8:59 AM IST

ಬೆಂಗಳೂರು (ಫೆ.08): ಲೋಕಸಭೆ ಚುನಾವಣೆಗೆ ಹಳೆ ಮೈಸೂರು ಭಾಗದಲ್ಲಿ ಮತ ಕ್ರೋಡೀಕರಣಕ್ಕೆ ಬಿಜೆಪಿ -ಜೆಡಿಎಸ್‌ ಜಂಟಿ ತಾಲೀಮು ಮಹತ್ವದ ಘಟ್ಟ ತಲುಪಿದ್ದು, ಬೆಂಗಳೂರು ಗ್ರಾಮಾಂತರದಿಂದ ಖ್ಯಾತ ಹೃದ್ರೋಗ ತಜ್ಞ ಡಾ.ಸಿ.ಎನ್‌.ಮಂಜುನಾಥ್‌ ಕಣಕ್ಕಿಳಿಯುವ ಸಾಧ್ಯತೆಗಳು ದಟ್ಟವಾಗಿವೆ. ಜಯದೇವ ಹೃದ್ರೋಗ ಸಂಸ್ಥೆಯ ಮಾಜಿ ಮುಖ್ಯಸ್ಥರು ಮತ್ತು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಅಳಿಯ ಡಾ.ಮಂಜುನಾಥ್‌ ಜನಮನದ ಪರಿಚಿತ ವ್ಯಕ್ತಿತ್ವವಾಗಿದ್ದು, ಇತ್ತೀಚಿಗಷ್ಟೇ ಜಯದೇವ ಆಸ್ಪತ್ರೆಯ ನಿರ್ದೇಶಕ ಸ್ಥಾನದಿಂದ ನಿವೃತ್ತಿ ಹೊಂದಿದ್ದಾರೆ. 

ಮಂಜುನಾಥ್‌ ಅವರನ್ನು ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಕಣಕ್ಕಿಳಿಸುವ ನಿರೀಕ್ಷೆಯಿದೆ. ಹಳೆ ಮೈಸೂರು ಭಾಗದಲ್ಲಿ ಮೈತ್ರಿಯ ಮತಬ್ಯಾಂಕ್‌ ಕ್ರೋಡೀಕರಣ ದೃಷ್ಟಿಯಿಂದ ಅನುಕೂಲವಾಗಲಿದೆ ಎಂಬ ಲೆಕ್ಕಾಚಾರ ನಡೆದಿದೆ. ಸದ್ಯ ಡಿ.ಕೆ.ಸುರೇಶ್‌ ರಾಜ್ಯದ ಏಕೈಕ ಕಾಂಗ್ರೆಸ್‌ ಸಂಸದರಾಗಿ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದಾರೆ. ಈ ಕ್ಷೇತ್ರಕ್ಕೆ ಸೂಕ್ತ ಅಭ್ಯರ್ಥಿಗಾಗಿ ಶೋಧದಲ್ಲಿ ತೊಡಗಿದ್ದ ಬಿಜೆಪಿ -ಜೆಡಿಎಸ್‌ ಮೈತ್ರಿ ಪಾಳಯದಲ್ಲಿ ಡಾ.ಮಂಜುನಾಥ್‌ ಸಮರ್ಥ ಅಭ್ಯರ್ಥಿ ಎಂಬ ಒಲವು ಮೂಡಿದೆ. 

ಸಿದ್ದು ನಾಯಕತ್ವದಲ್ಲಿ ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಸನ್ನದ್ಧ: ಸಚಿವ ಸತೀಶ್‌ ಜಾರಕಿಹೊಳಿ

ಎಚ್.ಡಿ.ಕುಮಾರಸ್ವಾಮಿ ಹಾಗೂ ಸಿ.ಪಿ.ಯೋಗೇಶ್ವರ್ ಸ್ಪರ್ಧೆಗೆ ಹಿಂದೇಟು ಹಿನ್ನಲೆಯಲ್ಲಿ ಡಾ.ಮಂಜುನಾಥ್ ರನ್ನ ಕಣಕ್ಕಿಳಿಸಲು ಮೈತ್ರಿ ನಾಯಕರು ಚಿಂತನೆ ನಡೆಸಿದ್ದು, ಈಗಾಗಲೇ ಡಾ ಮಂಜುನಾಥ್ ಜೊತೆ ಮಾತುಕತೆ ಮೈತ್ರಿ ನಾಯಕರು ನಡೆಸಿದ್ದಾರೆ. ಅಲ್ಲದೇ ಬಿಜೆಪಿ ಚಿಹ್ನೆಯಿಂದ ಸ್ಪರ್ಧಿಸಿದ್ರೆ ಹೆಚ್ಚಿನ ಲಾಭ ಅನ್ನೋ ಚಿಂತನೆಯೂ ಇದೆ. ಡಾ ಮಂಜುನಾಥ್ ಸ್ಪರ್ಧಿಸಿದ್ರೆ ಸಂಸದ ಡಿಕೆ ಸುರೇಶ್‌ಗೆ ಟಫ್ ಫೈಟ್ ಇದ್ದು, ಎರಡು ಪಕ್ಷದ ನಾಯಕರ ಜೊತೆ ಉತ್ತಮ ಬಾಂಧವ್ಯವನ್ನು ಡಾ ಮಂಜುನಾಥ್ ಹೊಂದಿದ್ದಾರೆ.

Follow Us:
Download App:
  • android
  • ios