ಮತದಾರರಿಗೆ ಹಣ ಕೊಡುವವರೇ ರಣಹೇಡಿಗಳು: ಡಿಕೆಶಿಗೆ ಎಚ್‌ಡಿಕೆ ತಿರುಗೇಟು

ತಮ್ಮನ್ನು ರಣಹೇಡಿ ಎಂದು ಕರೆದಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತೀವ್ರ ಹರಿಹಾಯ್ದಿದ್ದಾರೆ.

Lok Sabha Elections 2024 HD Kumaraswamy Slams On DCM DK Shivakumar At Ramanagara gvd

ರಾಮನಗರ (ಏ.27): ತಮ್ಮನ್ನು ರಣಹೇಡಿ ಎಂದು ಕರೆದಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತೀವ್ರ ಹರಿಹಾಯ್ದಿದ್ದಾರೆ. ರಣಹೇಡಿ ನಾನಲ್ಲ, ನೇರವಾಗಿ ಚುನಾವಣೆ ಎದುರಿಸಲಾಗದೆರಾತ್ರೋರಾತ್ರಿ ಮತದಾರ ರಿಗೆ QR ಕೋಡ್ ಗಿಫ್ಟ್ ಕೂಪನ್, ಹಣ ಹಂಚಿಕೆ ಮಾಡುವವರು ರಣಹೇಡಿಗಳು ಎಂದು ಕಿಡಿಕಾರಿದರು. 

ಬಿಡದಿ ಸಮೀಪದ ಕೇತಿಗಾನಹಳ್ಳಿ ಮತಗಟ್ಟೆಯಲ್ಲಿ ಶುಕ್ರವಾರ ಮತದಾನ ಮಾಡಿದ ನಂತರ ಮಾಧ್ಯಮಗಳ ಜತೆ ಮಾತನಾಡಿ, ರಣಹೇಡಿಗಳು ಯಾರು ಎಂದು ಮುಂದೆ ಚರ್ಚೆ ಮಾಡೋಣ. ನಾವು ರಣಹೇಡಿ ಸಂಸ್ಕೃತಿ ಡಿ.ಕೆ.ಶಿವಕುಮಾರ್‌ ಅವರದ್ದು. ನೇರವಾಗಿಯೇ ಚುನಾವಣೆ ಮಾಡುತ್ತಿದ್ದೇವೆ ಎಂದರು. ರಾತ್ರೋರಾತ್ರಿ ಹೋಗಿ ಕಳ್ಳತನದಿಂದಜನರಿಗೆ ಕ್ಯೂ ಆರ್‌ಕೋಡ್ ಗಿಫ್ಟ್ ಕೂಪನ್ ಗಳನ್ನು ಹಂಚಿಕೆ ಮಾಡಿದ ವ್ಯಕ್ತಿ ರಣಹೇಡಿತನದ ಬಗ್ಗೆ ಮಾತನಾಡುತ್ತಿದ್ದಾರೆ.ರಣಹೇಡಿಗಳು, ಕುತಂತ್ರದರಾಜಕಾರಣಿ ಗಳೆಲ್ಲ ಅವರೇ ಎಂದು ಕುಮಾರಸ್ವಾಮಿ ಗುಡುಗಿದರು. 

ಐಟಿಯಿಂದ ಡಿಕೆಸು ಚಾಲಕನ ಮಗ-ಸೊಸೆಗೆ ಕಿರುಕುಳ: ಡಿ.ಕೆ.ಶಿವಕುಮಾರ್‌

ಜ್ಯೋತಿಷಿ ಅಣತಿಯಂತೆ ಹಣ, ದೇವರಲಾಡು!: ಜ್ಯೋತಿಷಿಯೊಬ್ಬರು ಹೇಳಿದಂತೆ ಇವರು ಕನಕಪುರದಲ್ಲಿ ಹಣ, ಗಿಫ್ಟ್ ಕೂಪನ್ ಹಂಚಿದ್ದಾರೆ. ಅವರು ಹೇಳಿದರೆಂದು 505 ರು, ಮಲೆಮಹದೇಶ್ವರ ದೇವಾಲಯದ ಲಾಡು ಮತ್ತು ಗ್ಯಾರಂಟಿ ಕಾರ್ಡ್‌ಗಳನ್ನು ರಾತ್ರಿಯೆಲ್ಲ ಹಂಚಿದ್ದಾರೆ. ಕಾರ್ಡು ಹಂಚಿಕೆ ಮಾಡುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಬಿಜೆಪಿ, ಜೆಡಿಎಸ್ ಪಕ್ಷಗಳ ಕಾರ್ಯಕರ್ತರು ತಡೆದಿದ್ದಾರೆ. ಜಿಲ್ಲಾಧಿಕಾರಿ ಮತ್ತು ಚುನಾವಣಾ ಅಧಿಕಾರಿಗಳ ಗಮನಕ್ಕೂ ಈ ವಿಚಾರ ತಂದಿದ್ದಾರೆ. ಆದರೂ ಅವರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮುಕ್ತ, ನ್ಯಾಯ ಸಮ್ಮತ ಚುನಾವಣೆ ನಡೆಯುತ್ತಿಲ್ಲ. ಸೋಲಿನ ಭೀತಿಯಿಂದ ಕುತಂತ್ರದ ರಾಜಕಾರಣ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಆರೋಪಿಸಿದರು. 

ದೂರು ಕೊಟ್ಟರೆ ಉಪಯೋಗ ಇಲ್ಲ: ಗಿಫ್ಟ್ ಕೂಪನ್ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ಕೊಟ್ಟರೂ ಏನೂ ಪ್ರಯೋಜನ ಇಲ್ಲ. ಹಿಂದೆ ಹಲವು ಬಾರಿ ದೂರುಕೊಟ್ಟರೂ ಆಯೋಗಯಾವುದೇ ಕ್ರಮ ಕೈಗೊಂಡಿಲ್ಲ. ಈಗ ಮತ್ತೆ ದೂರು ಕೊಟ್ಟರೆ ಏನು ಉಪಯೋಗ? ಎಂದು ಅಸಮಾಧಾನ ವ್ಯಕ್ತಪಡಿಸಿದರು. 

ಬರ ಪರಿಹಾರದ ಬದಲು ರಾಜ್ಯಕ್ಕೆ ಮೋದಿ ಕೊಟ್ಟದ್ದು ಖಾಲಿ ಚೊಂಬು: ರಾಹುಲ್‌ ಗಾಂಧಿ

ಮುಕ್ತವಾಗಿ ಹಣ ಹಂಚೋ ವ್ಯವಸ್ಥೆ ತನ್ನಿ: ನಾನು ಚುನಾವಣಾ ಆಯೋಗಕ್ಕೆ ಕೇಳುತ್ತೇನೆ. ಈ ರೀತಿ ಚುನಾವಣೆ ಮಾಡುವ ಬದಲು ನೇರವಾಗಿ, ಮುಕ್ತವಾಗಿ ಗಿಫ್ಟ್, ಹಣ ಹಂಚುವ ವ್ಯವಸ್ಥೆಯನ್ನೇ ತನ್ನಿ. ಅವರವರ ಶಕ್ತಿಗನುಸಾರ ಹಣ ಹಂಚಿ ವೋಟು ಪಡೆಯುವ ವ್ಯವಸ್ಥೆ ಜಾರಿಗೆ ತನ್ನಿ ಎಂದ ಅವರು, ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತದಲ್ಲಿ ಈ ರೀತಿಯ ವ್ಯವಸ್ಥೆ ಬಂದರೆ ಕಾಂಗ್ರೆಸ್‌ನವರಿಗೆ ಒಳಿತು ಎಂದು ವ್ಯಂಗ್ಯವಾಡಿದರು. ನಾವು ಇದನ್ನು ಚುನಾವಣೆ ಎಂದು ಕರೆಯಬೇಕಾ? ಪ್ರಜಾಪ್ರಭುತ್ವದ ಹಬ್ಬ ಎಂದು ಕರೆಯಬೇಕಾ? ದುಡ್ಡು ಇರುವವರಿಗೆ, ಲೂಟಿ ಮಾಡುವವರಿಗೆ ಇದು ಹಬ್ಬವೇ ಹೊರತು ಜನಸಾಮಾನ್ಯರಿಗೆ ಅಲ್ಲ ಎಂದರು.

Latest Videos
Follow Us:
Download App:
  • android
  • ios