ಲೋಕಸಭಾ ಚುನಾವಣೆಗೆ ಗ್ಯಾರಂಟಿ ಯೋಜನೆಗಳನ್ನೇ ಪ್ರಮುಖವಾಗಿ ಬಿಂಬಿಸಲು ಕಾಂಗ್ರೆಸ್ ನಾಯಕತ್ವ ನಿರ್ಧರಿಸಿದ್ದು, ಇದಕ್ಕಾಗಿ ಜನವರಿ ಮಾಸದಿಂದ ಮೂರು ತಿಂಗಳವರೆಗೆ ರಾಜ್ಯಾದ್ಯಂತ ಗ್ಯಾರಂಟಿ ಯೋಜನೆ ಕುರಿತು ಜಾಗೃತಿ ಆಂದೋಲನ ಕೈಗೊಳ್ಳಲು ತೀರ್ಮಾನಿಸಿದೆ.

ಬೆಂಗಳೂರು (ನ.29): ಲೋಕಸಭಾ ಚುನಾವಣೆಗೆ ಗ್ಯಾರಂಟಿ ಯೋಜನೆಗಳನ್ನೇ ಪ್ರಮುಖವಾಗಿ ಬಿಂಬಿಸಲು ಕಾಂಗ್ರೆಸ್ ನಾಯಕತ್ವ ನಿರ್ಧರಿಸಿದ್ದು, ಇದಕ್ಕಾಗಿ ಜನವರಿ ಮಾಸದಿಂದ ಮೂರು ತಿಂಗಳವರೆಗೆ ರಾಜ್ಯಾದ್ಯಂತ ಗ್ಯಾರಂಟಿ ಯೋಜನೆ ಕುರಿತು ಜಾಗೃತಿ ಆಂದೋಲನ ಕೈಗೊಳ್ಳಲು ತೀರ್ಮಾನಿಸಿದೆ. ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಮಂಗಳವಾರ ನಗರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್‌ ಅವರೊಂದಿಗೆ ನಡೆಸಿದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಗ್ಯಾರಂಟಿ ಯೋಜನೆ ಕುರಿತು ರಾಜ್ಯದ ಜನತೆಗೆ ಜಾಗೃತಿ ಮೂಡಿಸಲು ಹಾಗೂ ಈ ಬಗ್ಗೆ ಪ್ರಚಾರಾಂದೋಲನ ಕೈಗೊಳ್ಳಲು ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು. ಸರ್ಕಾರದ ಈ ಯೋಜನೆಗಳನ್ನು ಪಕ್ಷದ ಕಾರ್ಯಕರ್ತರು ಮನೆ ಮನೆಗೆ ಮುಟ್ಟಿಸಬೇಕು. ಇದಕ್ಕಾಗಿ ಜನವರಿ ಮಾಸದಿಂದ ಮಾರ್ಚ್ ವರೆಗೂ ಆಂದೋಲನವನ್ನು ಕೈಗೊಳ್ಳಬೇಕು. ಇದಕ್ಕೆ ಪಕ್ಷವೇ ರೂಪರೇಷೆ ರೂಪಿಸಬೇಕು ಎಂದು ನಿರ್ಧರಿಸಲಾಗಿದೆ ಎಂದು ಮೂಲಗಳು ಹೇಳಿವೆ.

ಪುಲ್ವಾಮಾ ದಾಳಿಯಾಗದಿದ್ದರೆ ಮೋದಿ ಗೆಲ್ಲುತ್ತಿರಲಿಲ್ಲ: ಶಾಸಕ ಬಾಲಕೃಷ್ಣ ಕೀಳು ಹೇಳಿಕೆ

ತಂತ್ರಜ್ಞಾನ ಬಳಕೆಯಿಂದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪರಿಣಾಮಕಾರಿ: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಂಡಿದ್ದು ಜಿಲ್ಲೆಯಲ್ಲಿ ಶೇ. 92ರಿಂದ 98ರಷ್ಟು ಅರ್ಹರಿಗೆ ಸರ್ಕಾರದ ಗ್ಯಾರಂಟಿ ಯೋಜನೆಗಳು ತಲುಪಿವೆ. ವಿಶೇಷ ಪ್ರಯತ್ನ ಹಾಗೂ ತಂತ್ರಜ್ಞಾನದ ಬಳಕೆಯಿಂದಾಗಿ ಆಡಳಿತ ವೇಗವಾಗಿ ನಡೆಯುತ್ತಿದೆ ಎಂದು ಕಾನೂನು ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ ಹೇಳಿದರು.

ಸೆಪ್ಟೆಂಬರ್‌ 30ರಂದು ಜಿಲ್ಲೆಯಲ್ಲಿ ಜರುಗಿದ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಒಟ್ಟು 922 ಅರ್ಜಿಗಳು ಸ್ವೀಕೃತವಾಗಿದ್ದವು. ಗದಗ ತಾಲೂಕಿನ 675, ಗಜೇಂದ್ರಗಡ 18, ಲಕ್ಷ್ಮೇಶ್ವರ 97, ಮುಂಡರಗಿ 50, ನರಗುಂದ 13, ರೋಣ 38, ಶಿರಹಟ್ಟಿ ತಾಲೂಕಿನ 31 ಅರ್ಜಿಗಳು ಸ್ವೀಕೃತವಾಗಿದ್ದವು. ಜನತಾ ದರ್ಶನದಂದು ಸ್ವೀಕೃತವಾದ ಎಲ್ಲ ಅರ್ಜಿಗಳ ಮೇಲೆ ಕ್ರಮ ಕೈಗೊಳ್ಳಲಾಗಿದ್ದು ಕೆಲ ಅರ್ಜಿಗಳಿಗೆ ಹಿಂಬರಹವನ್ನು ನೀಡಿ ಅಗತ್ಯದ ದಾಖಲೆಗಳನ್ನು ಕ್ರೋಡಿಕರಿಸಿಕೊಳ್ಳಲು ಸೂಚನೇ ನೀಡಲಾಗಿದೆ. 

ನಿಮ್ಮ ಜೊತೆ ನಾನಿರುತ್ತೇನೆ: ದಾಸರಹಳ್ಳಿ ಕ್ಷೇತ್ರದ ಮುಖಂಡರಿಗೆ ಎಚ್‌ಡಿಕೆ ಧೈರ್ಯ

ಹಿಂಬರಹ ಒದಗಿಸಿದ ಅರ್ಜಿಗಳ ವಿಲೇವಾರಿಗೆ ಹತ್ತು ದಿನಗಳ ಸಮಯಾವಕಾಶವನ್ನು ನೀಡಲಾಗಿದ್ದು ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಅಗತ್ಯದ ದಾಖಲೆಗಳನ್ನು ಕ್ರೋಡಿಕರಿಸಿ ಪರೀಶಿಲಿಸಿ ಅಂತಿಮ ಆದೇಶ ಹೊರಡಿಸಲು ಸೂಚನೆ ನೀಡಲಾಗಿದೆ. ಹತ್ತು ದಿನಗಳ ನಂತರವು ಅರ್ಜಿಗಳ ವಿಲೇ ಆಗದೇ ಇದ್ದ ಪಕ್ಷದಲ್ಲಿ ಅರ್ಜಿದಾರರನ್ನು ಹಾಗೂ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸಂವಾದ ಜರುಗಿಸಿ ಅಂತಿಮ ಹಂತಕ್ಕೆ ಒಯ್ಯಲಾಗುವದು. ಇಲ್ಲಿಯವರೆಗೆ ಒಟ್ಟು 951 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು ಇವುಗಳ ಪೈಕಿ 798 ಅರ್ಜಿಗಳನ್ನು ವಿಲೇ ಮಾಡಲಾಗಿದ್ದು 153 ಅರ್ಜಿಗಳ ಬಾಕಿ ಉಳಿದಿರುತ್ತವೆ ಎಂದರು.