ಲೋಕಸಭಾ ಚುನಾವಣೆ 2024: ದಿಲ್ಲಿಯಲ್ಲಿ ಮೂರು ಪಕ್ಷಗಳಿಂದ ಟಿಕೆಟ್ ಸರ್ಕಸ್..!
ಲೋಕಸಭೆಗೆ ಕರ್ನಾಟಕದಿಂದ ಸ್ಪರ್ಧಿಸುವ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಗಳು ಮತ್ತು ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ದಿಲ್ಲಿಯಲ್ಲಿ ವರಿಷ್ಠರು ನಡೆಸುತ್ತಿರುವ ಸರಣಿ ಸಭೆಗಳಲ್ಲಿ ಚರ್ಚೆ ನಡೆಯುತ್ತಿದೆ. ಬಿಜೆಪಿ ಸಭೆಯಲ್ಲಿ ಯಡಿಯೂರಪ್ಪ, ವಿಜಯೇಂದ್ರ ಮತ್ತು ಕಾಂಗ್ರೆಸ್ ಸಭೆಯಲ್ಲಿ ಡಿ.ಕೆ.ಶಿವಕುಮಾರ್, ಕೆ.ಜೆ.ಜಾರ್ಜ್ ಪಾಲ್ಗೊಂಡಿದ್ದಾರೆ.
ಬೆಂಗಳೂರು/ದೆಹಲಿ(ಮಾ.08): ಲೋಕಸಭೆಗೆ ಕರ್ನಾಟಕದಿಂದ ಸ್ಪರ್ಧಿಸುವ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಗಳು ಮತ್ತು ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ದಿಲ್ಲಿಯಲ್ಲಿ ವರಿಷ್ಠರು ನಡೆಸುತ್ತಿರುವ ಸರಣಿ ಸಭೆಗಳಲ್ಲಿ ಚರ್ಚೆ ನಡೆಯುತ್ತಿದೆ. ಬಿಜೆಪಿ ಸಭೆಯಲ್ಲಿ ಯಡಿಯೂರಪ್ಪ, ವಿಜಯೇಂದ್ರ ಮತ್ತು ಕಾಂಗ್ರೆಸ್ ಸಭೆಯಲ್ಲಿ ಡಿ.ಕೆ.ಶಿವಕುಮಾರ್, ಕೆ.ಜೆ.ಜಾರ್ಜ್ ಪಾಲ್ಗೊಂಡಿದ್ದಾರೆ.
ಪ್ರತಿ ಕ್ಷೇತ್ರಕ್ಕೆ 2-3 ಹೆಸರು ಇರಿಸಿಕೊಂಡು ಬಿಜೆಪಿ ಸಭೆ
ಲೋಕಸಭಾ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಕಗ್ಗಂಟಾಗಿ ಪರಿಣಮಿಸಿರುವ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ರಾಜ್ಯ ಬಿಜೆಪಿ ನಾಯಕರು 2ನೇ ದಿನವಾದ ಗುರುವಾರವೂ ಕಸರತ್ತು ಮುಂದುವರೆಸಿದ್ದಾರೆ. ಬುಧವಾರ ತಡರಾತ್ರಿ ಸುಮಾರು ಐದು ಗಂಟೆಗೂ ಹೆಚ್ಚು ಕಾಲ ಸಭೆ ನಡೆದರೂ ಹಲವು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿ ಸಲು ಸಾಧ್ಯವಾಗ ಲಿಲ್ಲ. ರಾಜಕೀಯ ನಿವೃತ್ತಿ ಘೋಷಿಸಿದ ವರನ್ನು ಹೊರತು ಪಡಿಸಿ ಹಾಲಿ ಸಂಸ ದರಜತೆಪ್ರತಿಕ್ಷೇತ್ರಕ್ಕೆ ಹೆಚ್ಚುವರಿಯಾಗಿ ಎರಡೆರಡು ಹೆಸರುಗಳ ಪಟ್ಟಿಯನ್ನು ರಾಜ್ಯ ನಾಯಕರು ಮುಂದಿಟ್ಟುಕೊಂಡು ರಾಷ್ಟ್ರೀಯ ನಾಯಕರ ಜತೆ ಸಭೆ ನಡೆಸಿದರೂ ಒಮ್ಮತಾಭಿ ಪ್ರಾಯ ಮೂಡಲಿಲ್ಲ. ಜತೆಗೆ ಜೆಡಿಎಸ್‌ಗೆ ಯಾವ ಕ್ಷೇತ್ರಗಳನ್ನು ಬಿಟ್ಟುಕೊಡಬೇಕು ಎಂಬುದರ ಬಗ್ಗೆಯೂ ಸ್ಪಷ್ಟ ನಿರ್ಧಾರಕ್ಕೆ ಬರಲುಸಾಧ್ಯವಾಗಲಿಲ್ಲ.ಬಳಿಕಗುರುವಾರವೂ ಸಭೆಮುಂದುವರೆದಿದ್ದು, ಅಭ್ಯರ್ಥಿಗಳ ಆಯ್ಕೆ ಬಗ್ಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎನ್ನಲಾಗಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪ್ರಕಾರ, ಇನ್ನೂ ಎರಡು ಅಥವಾ ಮೂರು ದಿನಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳ್ಳುವ ಸಾಧ್ಯತೆಯಿದೆ.
ಈ ನಡುವೆ ಶುಕ್ರವಾರ ಪಕ್ಷದ ಅಭ್ಯರ್ಥಿಗಳ ಎರಡನೇ ಪಟ್ಟಿ ಅಂತಿಮ ಗೊಳಿಸಿ ಪ್ರಕಟಿಸುವ ಸಂಬಂಧ ಕೇಂದ್ರ ಚುನಾವಣಾಸಮಿತಿಸಭೆನಡೆಯುವುದು ಅನುಮಾನವಾಗಿದ್ದು, ಒಂದೆರಡು ದಿನಗಳ ಕಾಲ ವಿಳಂಬವಾಗುವ ನಿರೀಕ್ಷೆ ಯಿದೆ ಎಂದು ತಿಳಿದು ಬಂದಿದೆ.
2-3 ದಿನದಲ್ಲಿ ಅಂತಿಮ- ಬಿಎಸ್‌ವೈ:
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಅಭ್ಯ ರ್ಥಿಗಳ ಆಯ್ಕೆ ಮತ್ತು ಬಿಜೆಪಿ-ಜೆಡಿಎಸ್ ನಡುವಿನ ಕ್ಷೇತ್ರ ಹಂಚಿಕೆ ಬಗ್ಗೆ ಅಂತಿಮಗೊಂಡಿಲ್ಲ. ಅದೆಲ್ಲವನ್ನೂ ಪ್ರಧಾನಿ ನರೇಂದ್ರ ಮೋದಿ ಅವರ ಜತೆ ಮಾತುಕತೆ ನಡೆಸಿ 2-3 ದಿನದಲ್ಲಿ ಅಂತಿ ಮಗೊಳಿಸಲಾಗುವುದು. ಎಲ್ಲ 28 ಕ್ಷೇತ್ರಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಎಲ್ಲಾ ಕ್ಷೇತ್ರಗಳಲ್ಲಿಯೂ ಗೆಲುವು ಸಾಧಿ ಸುತ್ತೇವೆ ಎಂಬ ವಿಶ್ವಾಸ ಇದೆ ಎಂದರು
ಜಾತಿ ಹಂಚಿಕೆ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ತೀರ್ಮಾನ ಕೈಗೊಳ್ಳಲಿದ್ದಾರೆ. ನಿನ್ನೆ ನಡೆದ ಸಭೆಯಲ್ಲಿ ನಡೆದಮಾತುಕತೆಗಳುಬಹುತೇಕಕೇಂದ್ರ ಚುನಾವಣಾಸಮಿತಿಸಭೆಯಲ್ಲೂಚರ್ಚೆ ಆಗಲಿವೆ ಎಂದು ಹೇಳಿದರು. ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಕೇಂದ್ರ ಸಚಿವರ ವಿರುದ್ಧ ಅಸಮಾಧಾನ ಇರುವುದು ಮತ್ತು ಮಹಿಳೆಯರಿಗೆ ಹೆಚ್ಚಿನ ಸ್ಥಾನ ನೀಡುವ ಕುರಿತು ಮಾಹಿತಿ
ಮಾಜಿ ಸಿಎಂಗಳ ಹೆಸರು ಪ್ರಸ್ತಾಪ: ಯಡಿಯೂರಪ್ಪ
ರಾಜ್ಯದ ಮಾಜಿ ಮುಖ್ಯಮಂತ್ರಿ ಗಳು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಸಭೆಯಲ್ಲಿ ಪ್ರಸ್ತಾ ಪವಾಗಿದೆಎಂದುಯಡಿಯೂರಪ್ಪ ಮಾಹಿತಿ ನೀಡಿದರು. ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್. ಅವರಿಗೆ ಟಿಕೆಟ್ ಕೊಡುವುದರ ಬಗ್ಗೆ ಚರ್ಚೆಯಾಗಿದೆ. ಆದರೆ, ಅಂತಿಮವಾಗಿಲ್ಲ, 9.2. ಸದಾನಂದಗೌಡ ಅವರು ಸ್ಪರ್ಧೆ ಮಾಡುವ ಬಗ್ಗೆ ಅಂತಿಮತೀರ್ಮಾ ನವನ್ನು ಕೇಂದ್ರದ ವರಿಷ್ಠರು ಕೈಗೊಳ್ಳಲಿದ್ದಾರೆ ಎಂದರು.
ಮತ್ತೊಂದು ಪ್ರಶ್ನೆಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಮಂಡ್ಯದಲ್ಲಿ ಸಂಸದೆ ಸುಮಲತಾ ಸ್ಪರ್ಧಿಸುವ ಬಗ್ಗೆ ಮಾತನಾ ಡಲು ನಾನು ಯಾರು? ಹೈಕಮಾಂಡ್ ನಿರ್ಧರಿಸಲಿದೆ. ಜಯದೇವ ಹೃದ್ರೋಗ ಸಂಸ್ಥೆಯ ನಿವೃತ್ತ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಬಗ್ಗೆ ಚರ್ಚೆಯಾಗಿದೆ. ಆದರೆ, ಅಂತಿಮಗೊಂಡಿಲ್ಲ ಎಂದು ಹೇಳಿದರು.
ಕಾಂಗ್ರೆಸ್: ಕರ್ನಾಟಕದ 9 ಹೆಸರಿಗೆ ವರಿಷ್ಠರ ಅಂಕಿತ?
ನವದೆಹಲಿ: ಸದ್ಯದಲ್ಲೇ ಎದುರಾಗಲಿರುವ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕುರಿತು ಕಾಂಗ್ರೆಸ್‌ನ ಮೊದಲ ಕೇಂದ್ರ ಚುನಾವಣಾ ಸಮಿತಿ ಸಭೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ದೆಹಲಿಯಲ್ಲಿ ಗುರುವಾರನಡೆಯಿತು.ರಾಜ್ಯದ28 ಕ್ಷೇತ್ರಗಳ ಪೈಕಿರಾಜ್ಯ ಘಟಕವುಒಂದೇಹೆಸರುಶಿಫಾರಸು ಮಾಡಿದ್ದ 9 ಕ್ಷೇತ್ರಗಳ ಅಭ್ಯರ್ಥಿಯ ಹೆಸರಿಗೆ ಅನುಮೋದನೆ ನೀಡಲಾಯಿತು ಎಂದು ಹೇಳಲಾಗಿದೆ.
ಕಾಂಗ್ರೆಸ್ ಕಚೇರಿ ಯಲ್ಲಿ ಸಂಜೆ 6.30ಕ್ಕೆ ಆರಂಭವಾಗಿ ರಾತ್ರಿ ಸುಮಾರು 10 ಗಂಟೆ ವರೆಗೂ ನಡೆದ ಈ ಮೊದಲ ಸಭೆಯಲ್ಲಿ ಕರ್ನಾಟಕ, ಕೇರಳ, ತೆಲಂಗಾಣ ರಾಜ್ಯಗಳ 60 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಕುರಿತು ಚರ್ಚೆಯಾಗಿದೆ. ಕರ್ನಾಟಕದ ರಾಜ್ಯ ಚುನಾವಣಾ ಸ್ಟೀನಿಂಗ್ ಸಮಿತಿಯು 14 ಕ್ಷೇತ್ರಗಳಿಗೆ ಒಬ್ಬೊಬ್ಬ ಅಭ್ಯರ್ಥಿ ಹೆಸರು ಅಖೈರುಗೊಳಿಸಿದೆ. ಆ ಪಟ್ಟಿಯಲ್ಲಿ 9 ಹೆಸರಿಗೆ ಒಪ್ಪಿಗೆ ದೊರೆತಿದೆ ಎಂದು ತಿಳಿದುಬಂದಿದೆ.
2 ಹಂತದಲ್ಲಿ ಪಟ್ಟಿ ಬಿಡುಗಡೆ:
ಸಭೆಗೂ ಮುನ್ನ ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು, ರಾಜ್ಯದ 28 ಕ್ಷೇತ್ರಗಳ ಪಟ್ಟಿಯನ್ನು ಒಂದೇ ಹಂತದಲ್ಲಿ ಬಿಡುಗಡೆ ಮಾಡಲ್ಲ. ಅರ್ಧದಷ್ಟು ಸೀಟುಗಳ ಬಗ್ಗೆ ಚರ್ಚೆಯಾಗಿದೆ. ರಾಜ್ಯದ 28 ಕ್ಷೇತ್ರ ಗಳ ಅಭ್ಯರ್ಥಿಗಳ ಆಯ್ಕೆ ಒಂದೇ ಹಂತದಲ್ಲಿ ಮಾಡಲು ಸಾಧ್ಯವಿಲ್ಲ. ಎರಡು ಹಂತದಲ್ಲಿ ಚರ್ಚೆ ಆಗಿ ನಿರ್ಧಾರ ಹೊರಬೀಳಲಿದೆ. ಇಂದಿನ ಸಭೆಯಲ್ಲಿ ಅರ್ಧ ದಷ್ಟು ಸೀಟುಗಳ ಬಗ್ಗೆ ಚರ್ಚೆಯಾಗಿದೆ. ನಾವು ನಮ್ಮ ಅಭಿಪ್ರಾಯ ಹೇಳಿದ್ದೇವೆ. ಈಗಲೇ ಏನೂ ಹೇಳಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.
ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಶಾಸಕರು ಬಿಜೆಪಿಗೆ: ಸಂಸದ ರಾಘವೇಂದ್ರ ಭವಿಷ್ಯ
ಎರಡು ಹಂತದಲ್ಲಿ ಬಿಡುಗಡೆ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದ್ದರು. ಬಿಜೆಪಿಯವರ ರಾಜಕಾರಣಕ್ಕೂ ನಮ್ಮ ರಾಜಕಾರಣಕ್ಕೂ ಬಹಳ ವ್ಯತ್ಯಾಸವಿದೆ. ಕಾಂಗ್ರೆಸ್ ಪಕ್ಷದಲ್ಲಿ ವ್ಯಕ್ತಿ ಮೇಲೆ ರಾಜಕಾರಣ ನಡೆಯುವುದಿಲ್ಲ. ಪಕ್ಷ, ನಮ್ಮ ಗ್ಯಾರಂಟಿ ಯೋಜನೆಗಳ ಮೇಲೆನಾವುರಾಜಕೀಯಮಾಡುತ್ತೇವೆ. ಅವರು ಅವರದೇ ಆದ ಲೆಕ್ಕಾಚಾರ ಇಟ್ಟುಕೊಂಡಿದ್ದರೆ, ನಾವು ನಮ್ಮದೇ ಲೆಕ್ಕಾಚಾರಇಟ್ಟುಕೊಂಡುಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದ್ದರು.
ಸಿಎಂ ಗೈರು:
ಸಭೆಯಲ್ಲಿ ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ, ಹಿರಿಯ ನಾಯಕರಾದ ಅಂಬಿಕಾ ಸೋನಿ, ಅಧೀರ್‌ರಂಜನ್ ಚೌದರಿ, ಸಲ್ಮಾನ್ ಖುರ್ಷಿದ್, ಮಧುಸೂದನ್ ಮಿಸ್ತ್ರಿ, ವೇಣುಗೋಪಾಲ ಮತ್ತಿತರರ ಜತೆಗೆ, ಕರ್ನಾಟಕದಿಂದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇಂಧನ ಸಚಿವಕೆ.ಜೆ.ಜಾರ್ಜ್ ಪಾಲ್ಗೊಂಡಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಸಭೆಯಲ್ಲಿ ಉಪಸ್ಥಿತರಿರಬೇಕಿತ್ತಾದರೂ ಬಸವಕಲ್ಯಾಣದಲ್ಲಿ ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಿದ್ದ ಕಾರಣ ಅವರು ಗೈರಾಗಿದ್ದರು.