Asianet Suvarna News Asianet Suvarna News

ಜನರ ಆರ್ಶೀವಾದದಿಂದ ಗೆದ್ದಿರುವೆ, ಯಾಗದಿಂದಲ್ಲ: ಎಚ್‌ಡಿಕೆ

ಲೋಕಸಭಾ ಚುನಾವಣೆಯಲ್ಲಿ ಜನರ ಆಶೀರ್ವಾದ ಹಾಗೂ ಜೆಡಿಎಸ್‌-ಬಿಜೆಪಿ ಮೈತ್ರಿ ಪಕ್ಷದ ಕಾರ್ಯಕರ್ತರ ಪರಿಶ್ರಮದಿಂದಾಗಿ ಜೆಡಿಎಸ್‌ ಎರಡು ಸ್ಥಾನ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನು ಗೆದ್ದಿದ್ದೇವೆಯೇ ಹೊರತು, ಶತ್ರು ಭೈರವಿ ಯಾಗದಿಂದ ಅಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ತೀಕ್ಷ್ಣವಾಗಿ ಹೇಳಿದ್ದಾರೆ.

Lok sabha elelction result 2024 highlights HDKumraswamy reacts rav
Author
First Published Jun 5, 2024, 8:20 AM IST

ಬೆಂಗಳೂರು (ಜೂ.5): ಲೋಕಸಭಾ ಚುನಾವಣೆಯಲ್ಲಿ ಜನರ ಆಶೀರ್ವಾದ ಹಾಗೂ ಜೆಡಿಎಸ್‌-ಬಿಜೆಪಿ ಮೈತ್ರಿ ಪಕ್ಷದ ಕಾರ್ಯಕರ್ತರ ಪರಿಶ್ರಮದಿಂದಾಗಿ ಜೆಡಿಎಸ್‌ ಎರಡು ಸ್ಥಾನ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನು ಗೆದ್ದಿದ್ದೇವೆಯೇ ಹೊರತು, ಶತ್ರು ಭೈರವಿ ಯಾಗದಿಂದ ಅಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ತೀಕ್ಷ್ಣವಾಗಿ ಹೇಳಿದ್ದಾರೆ.

ಮಂಗಳವಾರ ಮಂಡ್ಯ ಕ್ಷೇತ್ರದ ಫಲಿತಾಂಶ ಹೊರಬಿದ್ದ ಬಳಿಕ ಜೆಡಿಎಸ್‌ ಕಚೇರಿ ಜೆ.ಪಿ.ಭವನದಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ಭಾಗಿ ಸುದ್ದಿಗಾರರ ಜತೆ ಮಾತನಾಡಿದ ಅವರು, ನಾವು ಯಾವುದೇ ಕುರಿ, ಮೇಕೆ, ಎಮ್ಮೆ ಕಡಿದು ಗೆದ್ದಿಲ್ಲ. ಕಾರ್ಯಕರ್ತರ ಶ್ರಮದಿಂದ ಗೆದ್ದಿದ್ದೇವೆ. ರಾಜ್ಯದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಕ್ಷೇತ್ರಗಳಲ್ಲಿಯೇ ಕಾಂಗ್ರೆಸ್ ಅಭ್ಯರ್ಥಿಗಳು ಸೋತಿದ್ದಾರೆ ಎಂದು ಕಿಡಿಕಾರಿದರು.

ಲೋಕಸಭಾ ಚುನಾವಣೆ: ಗೆದ್ದರೂ ಬಿಜೆಪಿಗೆ ಸಂಭ್ರಮವಿಲ್ಲ, ಸೋತರೂ ಕಾಂಗ್ರೆಸಿಗಿಲ್ಲ ದುಃಖ!

ಸೂರ್ಯ-ಚಂದ್ರ ಇರುವುದು ಎಷ್ಟು ಸತ್ಯವೋ, ಕುಮಾರಸ್ವಾಮಿ ಸೋಲುವುದೂ ಅಷ್ಟೇ ಸತ್ಯ ಎಂದು ಮುಖ್ಯಮಂತ್ರಿಗಳು ಹೇಳಿದ್ದರು. ಈಗ ಅವರ ಪ್ರಕಾರ ಸೂರ್ಯ ಹುಟ್ಟುತ್ತಾನೋ ಇಲ್ಲವೋ ನೋಡೋಣ. ಮಂಡ್ಯ ಕ್ಷೇತ್ರದಲ್ಲಿ ದೊಡ್ಡ ಪ್ರಮಾಣದಲ್ಲಿ ಜನರು ಆಶೀರ್ವಾದ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷ ಹಣದ ಹೊಳೆ ಹರಿಸಿ ಅಧಿಕಾರ ದುರುಪಯೋಗ ಮಾಡಿಕೊಂಡರೂ ಜನರು ಲೆಕ್ಕಕ್ಕೆ ತೆಗೆದುಕೊಂಡಿಲ್ಲ. ಪ್ರೀತಿ, ವಿಶ್ವಾಸಕ್ಕೆ ಮನ್ನಣೆ ನೀಡಿದ್ದಾರೆ. ನನಗೆ ರಾಜಕೀಯವಾಗಿ ಶಕ್ತಿ ತುಂಬಿದ ಮಂಡ್ಯ ಯಾವತ್ತೂ ನನ್ನ ಕೈ ಬಿಡಲ್ಲ ಎಂದು ಭಾವುಕರಾಗಿ ನುಡಿದರು.

ಮೋದಿ ಪಾತ್ರ ದೊಡ್ಡದು

ರಾಜ್ಯದಲ್ಲಿ ಮೈತ್ರಿಕೂಟಕ್ಕೆ ಜನರು ಮನ್ನಣೆ ನೀಡಿದ್ದಾರೆ. ಜೆಡಿಎಸ್ ಬಿಜೆಪಿ ಪಕ್ಷಗಳ ಕಾರ್ಯಕರ್ತರು, ಮುಖಂಡರು ಅವಿರತವಾಗಿ ಕೆಲಸ ಮಾಡಿದ್ದಾರೆ. ನಮ್ಮನ್ನು ಬೆಂಬಲಿಸಿದ ಮತದಾರರಿಗೆ ಹಾಗೂ ಬಿಜೆಪಿ, ಜೆಡಿಎಸ್ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಪ್ರಧಾನಿ ಮೋದಿಯವರು ಕಳೆದ ಎರಡೂವರೆ ತಿಂಗಳು ಶ್ರಮವಹಿಸಿ ಗೆಲುವಿಗೆ ಶ್ರಮಿಸಿದ್ದಾರೆ. ಇಡೀ ದೇಶವನ್ನು ಸುತ್ತಿದ್ದಾರೆ. ಎನ್‌ಡಿಎ ಸಾಧನೆಯಲ್ಲಿ ಅವರ ಪಾತ್ರ ದೊಡ್ಡದು ಎಂದು ಇದೇ ವೇಳೆ ಕುಮಾರಸ್ವಾಮಿ ಹೇಳಿದರು.

ಮತದಾನದೋತ್ತರ ಸಮೀಕ್ಷೆಗಳು ಸ್ಪಲ್ಪ ಏರುಪೇರಾಗಿದೆ. ಕಾಂಗ್ರೆಸ್‌ನ ಅಪಪ್ರಚಾರ ಇದಕ್ಕೆ ಕಾರಣ. ಕಾಣದ ಕೈಗಳ ಕುತಂತ್ರ ಕೂಡ ಕೆಲಸ ಮಾಡಿದೆ. ಗೆಲುವಿನ ಸಂಖ್ಯೆ ಕಡಿಮೆಯಾಗಲು ಕೆಲವು ಶಕ್ತಿಗಳು ಕೆಲಸ ಮಾಡಿವೆ. ಈ ಬಗ್ಗೆ ಯಾರನ್ನೂ ದೂರಲು ಹೋಗುವುದಿಲ್ಲ ಎಂದರು.

ಕಾವೇರಿ ಸಮಸ್ಯೆ

ಬಗೆಹರಿಸಲು ಪ್ರಯತ್ನ

ಗೆಲುವಿನ ಬಳಿಕ ಮಂಡ್ಯದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಕುಮಾರಸ್ವಾಮಿ, ಜಿಲ್ಲೆಯ ಸಂಸದನಾಗಿ ಶತಮಾನದಿಂದ ಎಡಬಿಡದೆ ಕಾಡುತ್ತಿರುವ ಕಾವೇರಿ ಸಮಸ್ಯೆಯನ್ನು ಪರಿಹರಿಸುವುದಕ್ಕೆ ಪ್ರಾಮಾಣಿಕ ಪ್ರಯತ್ನ ನಡೆಸುತ್ತೇನೆ ಎಂದರು. ಕಾವೇರಿ ನದಿ ನೀರಿನ ಸಮಸ್ಯೆಗೆ ಯಾವ ರೀತಿ ಪರಿಹಾರ ಕಂಡುಕೊಳ್ಳಬೇಕು ಎಂಬ ಬಗ್ಗೆ ದೇವೇಗೌಡರಿಂದ ಸಲಹೆ ಪಡೆಯುತ್ತೇನೆ. ಅವರ ಸಲಹೆಯಂತೆ ನಡೆದು ಸಮಸ್ಯೆ ಇತ್ಯರ್ಥಗೊಳಿಸುವುದಕ್ಕೆ ಅಧಿಕಾರವನ್ನು ಮುಡಿಪಾಗಿಡುತ್ತೇನೆ ಎಂದು ಭರವಸೆ ವ್ಯಕ್ತಪಡಿಸಿದರು.

Latest Videos
Follow Us:
Download App:
  • android
  • ios