ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಿಂದ ಪಕ್ಷಕ್ಕೆ ಮುಜುಗರ: ಅರವಿಂದ ಲಿಂಬಾವಳಿ
ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಿಂದ ಬಿಜೆಪಿ ಹಾಗೂ ಮೈತ್ರಿ ಪಕ್ಷಗಳಿಗೆ ಮುಜುಗರವಾಗಿದೆ. ಇದನ್ನು ಒಪ್ಪಿಕೊಳ್ಳಬೇಕು ಎಂದು ಬಿಜೆಪಿ ಮಾಜಿ ಸಚಿವ ಅರವಿಂದ್ ಲಿಂಬಾವಳಿ ಖಂಡಿಸಿದರು.
ವಿಜಯಪುರ (ಮೇ.2): ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಿಂದ ಬಿಜೆಪಿ ಹಾಗೂ ಮೈತ್ರಿ ಪಕ್ಷಗಳಿಗೆ ಮುಜುಗರವಾಗಿದೆ. ಇದನ್ನು ಒಪ್ಪಿಕೊಳ್ಳಬೇಕು ಎಂದು ಬಿಜೆಪಿ ಮಾಜಿ ಸಚಿವ ಅರವಿಂದ್ ಲಿಂಬಾವಳಿ ಖಂಡಿಸಿದರು.
ವಿಜಯಪುರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಭಿವೃದ್ಧಿ ಆಧಾರದ ಮೇಲೆ ಮತ ಯಾಚನೆ ನಡೆಸಿದೆ. ಕಳೆದ ಹತ್ತು ವರ್ಷಗಳ ಕಾಲ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಕೈಗೊಂಡ ಅಭಿವೃದ್ಧಿ, ಸುರಕ್ಷತೆ ಆಧಾರದ ಮೇಲೆ ಪ್ರಚಾರ ಕಾರ್ಯ ಕೈಗೊಳ್ಳಲಾಗಿದೆ. ಹೀಗಾಗಿ ಜನ ಅಭಿವೃದ್ಧಿಗಾಗಿ ಮತ್ತೆ ಬಿಜೆಪಿಯನ್ನು ಬೆಂಬಲಿಸಲು ಉತ್ಸುಕರಾಗಿದ್ದಾರೆ ಎಂದರು.
ಪ್ರಧಾನಿ ಮೋದಿ ಮಹಿಳೆಯರ ರಕ್ಷಣೆಗೆ ಏನು ಮಾಡಿದ್ದಾರೆ? ಪ್ರಿಯಾಂಕಾ ಗಾಂಧಿ
ಸಾಮಾನ್ಯವಾಗಿ ಪ್ರತಿಪಕ್ಷಗಳು ಆಡಳಿತ ವಿರೋಧಿ ಅಲೆ ಬಳಸಿಕೊಂಡು ಮತಯಾಚನೆ ಮಾಡುವುದು ವಾಡಿಕೆ. ಆದರೆ ಕಳೆದ ಹತ್ತು ವರ್ಷಗಳಲ್ಲಿ ಪ್ರಧಾನಿ ಮೋದಿಯವರ ಮೇಲೆ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲ. ಮೋದಿ ಬಗ್ಗೆ ಟೀಕೆ ಮಾಡಲು ಯಾವುದೇ ಅವಕಾಶ ಇಲ್ಲದ ಕಾರಣ ಪ್ರತಿಪಕ್ಷಗಳು ಸುಳ್ಳು ಆರೋಪದಲ್ಲಿ ತೊಡಗಿಸಿಕೊಂಡಿವೆ. ಅದರ ಭಾಗವಾಗಿ ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಕಾಂಗ್ರೆಸ್ ರಾಜಕೀಕರಣಗೊಳಿಸುತ್ತಿದೆ. ಕಾಂಗ್ರೆಸ್ ಸರ್ಕಾರವೇ ಎಸ್‌ಐಟಿ ರಚನೆ ಮಾಡಿದೆ. ತನಿಖೆ ಆಗಲಿದೆ. ಕಾನೂನು ಏನು ಕ್ರಮ ಕೈಗೊಳ್ಳುತ್ತದೆ ಕಾದು ನೋಡಬೇಕು ಎಂದರು.
ನಾವು ಕೂಡ ಈ ಪ್ರಕರಣವನ್ನು ಖಂಡಿಸುತ್ತೇವೆ, ಶೀಘ್ರ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ ಎಂದರು. ಇದೇ ವೇಳೆ ಕಲಬುರಗಿ ನೇಹಾ ಹಿರೇಮಠ ಹತ್ಯೆ ಪ್ರಕರಣ ಸಂಬಂಧ ಮಾತನಾಡಿದ ಅವರು, ನೇಹಾ ಪ್ರಕರಣ ಕೇವಲ ಒಂದು ಕೊಲೆ ಮಾತ್ರವಲ್ಲ, ಅದಕ್ಕೂ ಇದಕ್ಕೂ ಹೋಲಿಕೆ ಮಾಡುವುದು ಸರಿಯಲ್ಲ ಎಂದರು.
Prajwal Revanna: ಮಗನ ಪೆನ್‌ಡ್ರೈವ್ ಬಗ್ಗೆ ಮೌನ ಮುರಿದ ರೇವಣ್ಣ: ಅಶ್ಲೀಲ ವಿಡಿಯೋ ಬಗ್ಗೆ ಹೇಳಿದ್ದೇನು..?
ಕರ್ನಾಟಕದಲ್ಲಿ ಬಾಂಬ್ ಸ್ಫೋಟಿಸಿ ಕಲ್ಕತ್ತಾದಲ್ಲಿ ಸಿಕ್ಕಿ ಹಾಕಿಕೊಳ್ಳುತ್ತಾರೆ ಎಂದರೆ ಇದರ ಹಿಂದೆ ಜಿಹಾದಿಗಳ ಕೈವಾಡದ ಶಂಕೆಯಿದೆ. ನೇಹಾ ಪ್ರಕರಣ ದೇಶ ವಿರೋಧಿ ಚಟುವಟಿಕೆಗಳ ಸಂಬಂಧವಿರಬಹುದು ಎಂದರು.