ನಾಳೆ ಬೆಂಗಳೂರಿಗೆ ಮೋದಿ ಆಗಮನ; ಈ ಮಾರ್ಗಗಳಲ್ಲಿ ವಾಹನ ಸಂಚಾರ ನಿಷೇಧ

 ನಾಳೆ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕಕ್ಕೆ ಆಗಮಿಸುತ್ತಿದ್ದು, ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯಲಿರುವ ಬಿಜೆಪಿ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಮೋದಿ ಆಗಮನ ಹಿನ್ನೆಲೆ 2000ಕ್ಕೂ ಅಧಿಕ ಪೊಲೀಸರನ್ನ ನಿಯೋಜಿಸಲಾಗಿದೆ ಅಲ್ಲದೇ ಮೋದಿ ಸಂಚರಿಸುವ ರಸ್ತೆ ಮಾರ್ಗಗಳಲ್ಲಿ ವಾಹನ ಸಂಚಾರ ನಿಷೇದಿಸಲಾಗಿದ್ದು ಪರ್ಯಾಯ ಮಾರ್ಗ ಸೂಚಿಸಲಾಗಿದೆ.

Lok sabha poll 2024 PM Modi visit bengaluru tomorrow Traffic route change rav

ಬೆಂಗಳೂರು (ಏ.19): ಲೋಕಸಭಾ ಚುನಾವಣಾ ಕಾವು ಏರಿದ್ದು, ಉಭಯ ಪಕ್ಷಗಳು ಭರ್ಜರಿಯಾಗಿ ಪ್ರಚಾರ ನಡೆಸುತ್ತಿವೆ. ಶತಾಯಗತಾಯ ಈ ಬಾರಿ 400 ಸೀಟು ಗೆಲ್ಲಲೇಬೇಕು ಸಂಕಲ್ಪತೊಟ್ಟಿರುವ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ದೇಶಾದ್ಯಂತ ಸಮಾವೇಶಗಳನ್ನ ಏರ್ಪಡಿಸಿ ಶಕ್ತಿ ಪ್ರದರ್ಶನ ಮಾಡುತ್ತಿದೆ. ಅದರ ಭಾಗವಾಗಿ ನಾಳೆ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕಕ್ಕೆ ಆಗಮಿಸುತ್ತಿದ್ದು, ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯಲಿರುವ ಬಿಜೆಪಿ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.

ನಾಳೆ ಪ್ರಧಾನಿ ಮೋದಿ ಆಗಮಿಸುತ್ತಿರುವ ಹಿನ್ನೆಲೆ ಸಮಾವೇಶ ನಡೆಯುವ ಅರಮನೆ ಮೈದಾನದ ಬಳಿ ಪೊಲೀಸರು ಭಾರೀ ಬಂದೋಬಸ್ತ್ ಮಾಡಿದ್ದಾರೆ. ಹೆಚ್ಚುವರಿ ಪೊಲೀಸ್ ಆಯುಕ್ತರಾದ ಸತೀಶ್ ಕುಮಾರ್, ರಮಣ್ ಗುಪ್ತ ನೇತೃತ್ವದಲ್ಲಿ ನಾಲ್ವರು ಡಿಸಿಪಿ, ಎಸಿಪಿ, ಇನ್ಸ್‌ಪೆಕ್ಟರ್, ಸಬ್‌ ಇನ್ಸ್‌ಪೆಕ್ಟರ್ ಸೇರಿದಂತೆ ಸುಮಾರು ಎರಡು ಸಾವಿರಕ್ಕೂ ಅಧಿಕಾರ ಪೊಲೀಸರಿಂದ ಭಾರೀ ಭದ್ರತೆ ಮಾಡಲಾಗಿದೆ.

 

ಲೋಕಸಭೆ ಚುನಾವಣೆ 2024: ಕಾಂಗ್ರೆಸ್‌ನ ಲೋಕಲ್‌ ಗ್ಯಾರಂಟಿ, ಮೋದಿ ಗ್ಯಾರಂಟಿ ನಡುವೆ ಪೈಪೋಟಿ..!

ಸಮಾವೇಶ ನಡೆಯುವ ಅರಮನೆ ಮೈದಾನ, ಹೆಲಿಪ್ಯಾಡ್, ಮೇಕ್ರಿ ಸರ್ಕಲ್ ಹಾಗೂ ಬಳ್ಳಾರಿ ರಸ್ತೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ನಾಳೆ ಮೋದಿ ಆಗಮಿಸುತ್ತಿರುವ ಹಿನ್ನೆಲೆ ಕಾಂಗ್ರೆಸ್ ಕಾರ್ಯಕರ್ತರು ಮೇಕ್ರಿ ಸರ್ಕಲ್‌ನಲ್ಲಿ ಚೆಂಬು ಪ್ರದರ್ಶಿಸಿ ಪ್ರತಿಭಟನೆ ನಡೆಸುವ ಸಾಧ್ಯತೆಯಿರುವ ಹಿನ್ನೆಲೆ ಮೇಕ್ರಿ ಸರ್ಕಲ್‌ನಲ್ಲಿ ಹೆಚ್ಚುವರಿಯಾಗಿ ಬಿಗಿ ಭದ್ರತೆ ಮಾಡಲಾಗಿದೆ. ನಾಳೆ ಮೇಕ್ರಿ ಸರ್ಕಲ್‌ನಲ್ಲಿ ಯಾವುದೇ ಪ್ರತಿಭಟನೆಗೆ ಅವಕಾಶವಿಲ್ಲ. ಒಂದು ವೇಳೆ ಪ್ರತಿಭಟನೆ ಮಾಡಿದರೆ ಕೂಡಲೆ ವಶಕ್ಕೆ ಪಡೆದು ಪೊಲೀಸರು ಕ್ರಮ ಜರುಗಿಸಲಿದ್ದಾರೆ. 

ಸಮಾವೇಶದ ನಂತರ ರಸ್ತೆ ಮಾರ್ಗವಾಗಿ ಹೆಚ್ಎಎಲ್ ತಲುಪಲಿರುವ ಮೋದಿ ಹೀಗಾಗಿ ಹೆಚ್ಎಎಲ್ ಮಾರ್ಗದಲ್ಲೂ ಕೂಡ ಹೆಜ್ಜೆ ಹಜ್ಜೆಗೆ ಪೊಲೀಸರ ನಿಯೋಜಿಸಲಾಗಿದೆ. ಇದೇ ವೇಳೆ ವಾಹನ ಸವಾರರಿಗೆ ಅಡಚಣೆಯಾಗದಂತೆ ಸಂಚಾರಿ ಪೊಲೀಸರು ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸಲು ಸೂಚನೆ ನೀಡಿದ್ದಾರೆ. ನಾಳೆ ಮಧ್ಯಾಹ್ನ ಒಂದು ಗಂಟೆಯಿಂದ ಸಂಜೆ ಏಳು ಗಂಟೆಯವರೆಗೆ ಹಲವು ರಸ್ತೆಗಳಲ್ಲಿ ಸಂಚಾರ ವ್ಯತ್ಯಯವಾಗಲಿದೆ. ನಗರದ ಹನ್ನೊಂದು ರಸ್ತೆಗಳ ಬದಲಿಗೆ ಪರ್ಯಾಯ ಮಾರ್ಗ ಬಳಸಲು ಸೂಚಿಸಿರುವ ಸಂಚಾರಿ ಪೊಲೀಸರು.

ಪ್ಯಾಲೇಸ್ ರಸ್ತೆ, ಜಯಮಹಲ್, ರಮಣ ಮಹರ್ಷಿ ರಸ್ತೆ, ಮೌಂಟ್ ಕಾರ್ಮೆಲ್ ರಸ್ತೆ, ಜಯರಾಮ್ ರಸ್ತೆ, ಸಿ ವಿ ರಾಮನ್ ರಸ್ತೆ, ನಂದಿದುರ್ಗ ರಸ್ತೆ, ಮೇಖ್ರಿ ಸರ್ಕಲ್, ವಸಂತನಗರ, ಬಳ್ಳಾರಿ ರಸ್ತೆ ಮತ್ತು ತರಳಬಾಳು ರಸ್ತೆ ಬದಲಿಗೆ ಪರ್ಯಾಯ ಮಾರ್ಗ ಬಳಸುವುದು.

70 ವರ್ಷ ದಾಟಿದವರಿಗೂ ಆಯುಷ್ಮಾನ್ ಯೋಜನೆ, ಬುಲೆಟ್ ಟ್ರೈನ್ ವಿಸ್ತರಣೆ: ಇಲ್ಲಿದೆ ಬಿಜೆಪಿ ಪ್ರಣಾಳಿಕೆಯ ಹೈಲೈಟ್ಸ್‌

ಸರಕು ಸಾಗಣೆ ವಾಹನ ಸಂಚಾರ ನಿಷೇಧ: 

ನಾಳೆ ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಯಾವುದೇ ಸರಕು ಸಾಗಣೆ ವಾಹನಗಳ ಎಂಟ್ರಿ ನಿಷೇದಿಸಲಾಗಿದೆ. ಸರಕು ಸಾಗಣೆ ವಾಹನಗಳ ಸಂಚಾರಕ್ಕೆ ಬದಲಿ ಮಾರ್ಗಕ್ಕೆ ಸೂಚಿಸಲಾಗಿದೆ. ಸಿಎಂಐಟಿ ಜಂಕ್ಷನ್, ನ್ಯೂ ಬಿಇಎಲ್ ಜಂಕ್ಷನ್, ಮೈಸೂರು ಬ್ಯಾಂಕ್ ಜಂಕ್ಷನ್, ಬಿಹೆಚ್ಇಎಲ್ ಜಂಕ್ಷನ್, ಹೆಬ್ಬಾಳ ಜಂಕ್ಷನ್, ಬಸವೇಶ್ವರ ಜಂಕ್ಷನ್ ಮೂಲಕ ಸಂಚರಿಸಬಹುದಾಗಿದೆ. ಈ ಬಗ್ಗೆ ನಗರ ಸಂಚಾರ ಪೊಲೀಸರಿಂದ ವಾಹನ ಸವಾರರಿಗೆ ಅಧಿಕೃತವಾಗಿ ಸೂಚನೆ ನೀಡಿದ್ದಾರೆ

Latest Videos
Follow Us:
Download App:
  • android
  • ios