ಮದ್ದೂರು: ಲೋಕಸಭೆಗೆ ಅಭ್ಯರ್ಥಿಯಾಗಲು ಕಾಂಗ್ರೆಸ್‌ನಲ್ಲಿ ತೀವ್ರ ಪೈಟೋಟಿ
ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೆ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಅಭ್ಯರ್ಥಿಗಳಾಗಲು ಕಾಂಗ್ರೆಸ್ ಪಕ್ಷದಲ್ಲಿ ಪೈಪೋಟಿ ನಡೆದಿದೆ.
ಮದ್ದೂರು (ಜೂ.16): ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೆ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಅಭ್ಯರ್ಥಿಗಳಾಗಲು ಕಾಂಗ್ರೆಸ್ ಪಕ್ಷದಲ್ಲಿ ಪೈಪೋಟಿ ನಡೆದಿದೆ. ಈಗಾಗಲೇ ಮಾಜಿ ಸಂಸದೆ ರಮ್ಯಾ ಹೆಸರು ಚಾಲ್ತಿಯಲ್ಲಿರುವಾಗಲೇ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸಹೋದರ ಲಕ್ಷ್ಮೀಕಾಂತ್ ಮತ್ತು ಅವರ ಪುತ್ರ ಸುನಿಲ… ಲಕ್ಷ್ಮೀಕಾಂತ್ ಹೆಸರುಗಳು ಆಕಾಂಕ್ಷಿಗಳ ಪಟ್ಟಿಯಲ್ಲಿ ಪ್ರಬಲವಾಗಿ ಕೇಳಿಬರುತ್ತಿವೆ. ಇದರ ಜೊತೆಗೆ ಮಾಜಿ ಸಂಸದೆ ರಮ್ಯಾ ಹೆಸರು ಇಬ್ಬರ ಹೆಸರುಗಳು ಕೇಳಿ ಬರುತ್ತಿರುವುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.
ನಾಗಮಂಗಲ ಕ್ಷೇತ್ರದಲ್ಲಿ ಕಳೆದ 1994ರಿಂದಲೂ ಚಲುವರಾಯಸ್ವಾಮಿ ಗೆಲುವಿಗೆ ಸಹೋದರ ಲಕ್ಷ್ಮೀಕಾಂತ್ ಪ್ರಮುಖ ಪಾತ್ರ ವಹಿಸಿದ್ದರು. ನೇರವಾಗಿ ರಾಜಕಾರಣದಲ್ಲಿ ಗುರುತಿಸಿಕೊಳ್ಳದಿದ್ದರೂ ತೆರೆಯ ಹಿಂದೆ ಸಾಕಷ್ಟುಕೆಲಸಗಳನ್ನು ಮಾಡುವ ಮೂಲಕ ಸ್ವಾಮಿಗೌಡರ ಪರವಾಗಿ ಕೆಲಸ ಮಾಡುತ್ತಿದ್ದರು.
ಪ್ರಧಾನಿ ವಯಸ್ಸಿನಷ್ಟೇ ನಾವೂ ಇದ್ದೇವೆ; ಮೋದಿಗೆ ಟಿಕೆಟ್ ಕೊಟ್ರೆ ನಮ್ಗೂ ಟಿಕೆಟ್ ಪರೋಕ್ಷ ಬೇಡಿಕೆ ಇಟ್ಟ ಕರಡಿ ಸಂಗಣ್ಣ!
ಲೋಕಸಭಾ ಚುನಾವಣೆ ಮಂಡ್ಯ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಲಕ್ಷ್ಮೀಕಾಂತ್ ಹಾಗೂ ಸುನಿಲ… ಲಕ್ಷ್ಮೀಕಾಂತ್ ಇಚ್ಛæ ವ್ಯಕ್ತಪಡಿಸುತ್ತಿದ್ದಾರೆ ಎಂದು ಅವರ ಆಪ್ತ ಮೂಲಗಳಿಂದ ತಿಳಿದುಬಂದಿದೆ.
ಪಕ್ಷದ ವರಿಷ್ಠರು ಚುನಾವಣೆಯಲ್ಲಿ ಹಿರಿತನವನ್ನು ಪರಿಗಣಿಸುವುದಾದರೆ ಲಕ್ಷ್ಮೀಕಾಂತ್ ಅಥವಾ ಯುವಕರಿಗೆ ಆದ್ಯತೆ ಇದ್ದರೆ ಸುನಿಲ… ಲಕ್ಷ್ಮೀಕಾಂತ್ ಅವರನ್ನು ಪರಿಗಣಿಸಬೇಕು ಎಂದು ಅವರ ಬೆಂಬಲಿಗರ ಅನಿಸಿಕೆಯಾಗಿದೆ.
ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಲು ಶ್ರಮಿಸಿ: ಶೋಭಾ ಕರೆ
ತಮ್ಮ ಕುಟುಂಬದ ಸ್ಪರ್ಧೆ ಬಗ್ಗೆ ಚಲುವರಾಯಸ್ವಾಮಿ ಎಲ್ಲೂ ಪ್ರಸ್ತಾಪ ಮಾಡಿಲ್ಲವಾದರೂ ಬೆಂಬಲಿಗರು ಮಾತ್ರ ಚುನಾವಣೆಯಲ್ಲಿ ಲಕ್ಷ್ಮೀಕಾಂತ್ ಅಥವಾ ಸುನಿಲ… ಲಕ್ಷ್ಮೀಕಾಂತ್ ಅವರ ಸ್ಪರ್ಧೆ ಬಗ್ಗೆ ನಾಗಮಂಗಲ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎನ್.ದಿವಾಕರ್ ಮತ್ತು ಬೆಂಬಲಿಗರು ಸದ್ಯದಲ್ಲೇ ಸಚಿವ ಚಲುವರಾಯಸ್ವಾಮಿ ಅವರನ್ನು ಭೇಟಿ ಮಾಡಿ ಲಕ್ಷ್ಮೀಕಾಂತ್ ಅಥವಾ ಸುನಿಲ… ಅವರನ್ನು ಕಣಕ್ಕಿಳಿಸುವಂತೆ ಒತ್ತಡ ಹೇರಿದ್ದಾರೆಂದು ಗೊತ್ತಾಗಿದೆ.