Asianet Suvarna News Asianet Suvarna News

ಗೋ ಬ್ಯಾಕ್‌ ಅಭಿಯಾನದಿಂದ ನನಗೆ ಅನುಕೂಲ ಆಗಿದೆ: ಶೋಭಾ ಕರಂದ್ಲಾಜೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಟಿಕೆಟ್ ನೀಡದಂತೆ ನಮ್ಮವರು ವಿರೋಧ ಮಾಡಿದ್ದರಿಂದ ನನಗೇ ಅನುಕೂಲವೇ ಆಗಿದೆ. ಯಾವಾಗ ವಿರೋಧ ವ್ಯಕ್ತವಾಗುತ್ತೋ ಆಗಲೇ ನಾಯಕರು ನಮ್ಮ ಬಗ್ಗೆ ಮಾಹಿತಿ ಕಲೆ ಹಾಕುತ್ತಾರೆ. ಆಗ ಅವರಿಗೂ ಸತ್ಯದ ಅರಿವಾಗುತ್ತದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.

Loksabha election 2024 Go Back campaign against me benefited says shobha karandlaje rav
Author
First Published Mar 10, 2024, 6:10 AM IST

ಬೆಳಗಾವಿ (ಮಾ.10) : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಟಿಕೆಟ್ ನೀಡದಂತೆ ನಮ್ಮವರು ವಿರೋಧ ಮಾಡಿದ್ದರಿಂದ ನನಗೇ ಅನುಕೂಲವೇ ಆಗಿದೆ. ಯಾವಾಗ ವಿರೋಧ ವ್ಯಕ್ತವಾಗುತ್ತೋ ಆಗಲೇ ನಾಯಕರು ನಮ್ಮ ಬಗ್ಗೆ ಮಾಹಿತಿ ಕಲೆ ಹಾಕುತ್ತಾರೆ. ಆಗ ಅವರಿಗೂ ಸತ್ಯದ ಅರಿವಾಗುತ್ತದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ನಮ್ಮವರು ವಿರೋಧ ಮಾಡಿದ ಕಾರಣಕ್ಕೆ ನನಗೆ ಅನುಕೂಲ ಆಗಿದೆ. ಇಲ್ಲವಾದರೆ ಶೋಭಾ ಒಳ್ಳೆಯ ‌ಕೆಲಸ ಮಾಡುತ್ತಿದ್ದಾರೆ,‌ ಪಕ್ಷದ ಕೆಲಸ ಮಾಡುತ್ತಾರೆ ಎಂದಷ್ಟೇ ‌ಹೇಳುತ್ತಾರೆ.

Loksabha election 2024: ಶ್ರೀರಾಮುಲುಗೆ ಟಿಕೆಟ್ ನೀಡಿದರೆ ಸೋಲು ಖಚಿತ ಎಂದ ಶಾಸಕ ಜನಾರ್ದನ ರೆಡ್ಡಿ!

ಆದರೆ ಈಗ ಶೋಭಾಗೆ ಏಕೆ ವಿರೋಧ ಮಾಡುತ್ತಿದ್ದಾರೆ ಎಂದು ಪಕ್ಷದ ನಾಯಕರೂ ಮಾಹಿತಿ ಪಡೆಯುತ್ತಿದ್ದಾರೆ. ಆಗಲೇ ಸತ್ಯ ಗೊತ್ತಾಗೋದು. ನಮ್ಮ ವ್ಯಕ್ತಿತ್ವವೇನು? ನಮ್ಮ ಅಭಿವೃದ್ಧಿ ಕೆಲಸಗಳು ಏನು ಎಂಬುದು ಗೊತ್ತಾಗುತ್ತವೆ. ನಾವೇನು ಮಾಡಿಲ್ಲ, ಏನು ಮಾಡಬಾರದು ಎಂಬುದು ಇದರಿಂದ ತಿಳಿಯುತ್ತದೆ. ಮಾಹಿತಿ ಸಂಗ್ರಹದಿಂದ ನನಗೆ ಅನುಕೂಲ ಆಗಲಿದೆಯೇ ಹೊರತು ಕೆಟ್ಟದ್ದು ಆಗಲ್ಲ. ಹೈಕಮಾಂಡ್‌ ಬಗ್ಗೆ ನನಗೆ ನಂಬಿಕೆ ಇದ್ದು, ಕೆಲಸದ ಆಧಾರದ ಮೇಲೆ ಟಿಕೆಟ್ ಸಿಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Shobha Karandlaje: ನಮ್ಮ ಪಕ್ಷದ ಕೆಲವರಿಂದಲೇ ಟಿಕೆಟ್‌ ತಪ್ಪಿಸಲು ಷಡ್ಯಂತ್ರ: ಶೋಭಾ ಕರಂದ್ಲಾಜೆ

ಯಾರಿಗೆ ಟಿಕೆಟ್ ಸಿಗುತ್ತೆ, ಸಿಗಲ್ಲ ಎಂಬುದು ಯಾರಿಗೂ ಗೊತ್ತಿಲ್ಲ. ಹಾಲಿ ಸಂಸದರಿಗೆ ಟಿಕೆಟ್ ಕೈ ತಪ್ಪುತ್ತದೆ ಎಂದು ಮಾಧ್ಯಮಗಳಲ್ಲಿ ವರದಿಯಾಗುತ್ತಿದೆ. ಆದರೆ ಈ ಕುರಿತು ಪ್ರಧಾನಿಯಾಗಲಿ, ಪಕ್ಷದ ವರಿಷ್ಠರಾದ ಜೆ.ಪಿ.ನಡ್ಡಾ, ಅಮಿತ್ ಶಾ ಅವರಾಗಲಿ ಎಲ್ಲೂ ಹೇಳಿಲ್ಲ. ಈ ಎಲ್ಲ ಸುದ್ದಿಗಳು ಊಹಾಪೋಹ ಎನಿಸುತ್ತದೆ. ಗೆಲ್ಲುವ ಪಕ್ಷದಲ್ಲಿ ಬಹಳಷ್ಟು ಜನ ಟಿಕೆಟ್ ಕೇಳುವುದು ಸಹಜ, ಅದು ತಪ್ಪಲ್ಲ. ಹಲವು ವರ್ಷಗಳಿಂದ ಪಕ್ಷಕ್ಕಾಗಿ ದುಡಿದ ನಮ್ಮ ಕಾರ್ಯಕರ್ತರಿಗೆ ಟಿಕೆಟ್ ಕೇಳುವ ಹಕ್ಕಿದೆ. ಆದರೆ, ಪ್ರಧಾನಿ ಮೋದಿ, ನಮ್ಮ ಕೇಂದ್ರ ಚುನಾವಣೆ ಮಂಡಳಿ ಯಾರಿಗೆ ಎಲ್ಲಿಂದ ಟಿಕೆಟ್ ಕೊಡಬೇಕು, ಏಕೆ ಕೊಡಬೇಕು ಎಂದು ನಿರ್ಧರಿಸುತ್ತದೆ ಎಂದರು.

Follow Us:
Download App:
  • android
  • ios