Asianet Suvarna News Asianet Suvarna News

ಲೋಕಸಭೆಗೆ ಈಗಿನಿಂದಲೇ ತಯಾರಿ; ಸಿದ್ದರಾಮಯ್ಯ, ಡಿಕೆಶಿ, ಸಚಿವರಿಗೆ ಹೈಕಮಾಂಡ್ ಬುಲಾವ್!

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಸೇರಿದಂತೆ ಕೆಲ ಸಚಿವರಿಗೆ ಕಾಂಗ್ರೆಸ್‌ ಹೈಕಮಾಂಡ್‌ನಿಂದ ಬುಲಾವ್‌ ಬಂದಿದ್ದು, ಡಿ. 18ರಂದು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.ಲೋಕಸಭೆ ಚುನಾವಣೆ, ನಿಗಮ-ಮಂಡಳಿ ಅಧ್ಯಕ್ಷರ ಆಯ್ಕೆ ಸೇರಿದಂತೆ ಮತ್ತಿತರ ವಿಚಾರಗಳ ಕುರಿತು ಚರ್ಚೆ ನಡೆಸಲು ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌ ಹಾಗೂ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್‌ ಸೇರಿದಂತೆ ಕೆಲ ಸಚಿವರನ್ನು ದೆಹಲಿಗೆ ಬರುವಂತೆ ಕಾಂಗ್ರೆಸ್‌ನ ಕೇಂದ್ರ ನಾಯಕರು ಸೂಚಿಸಿದ್ದಾರೆ.

Loksabha election 2024  Siddaramaiah, DK Shivakumar will travel to Delhi rav
Author
First Published Dec 15, 2023, 9:57 AM IST

ಬೆಂಗಳೂರು (ಡಿ.15): ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಸೇರಿದಂತೆ ಕೆಲ ಸಚಿವರಿಗೆ ಕಾಂಗ್ರೆಸ್‌ ಹೈಕಮಾಂಡ್‌ನಿಂದ ಬುಲಾವ್‌ ಬಂದಿದ್ದು, ಡಿ. 18ರಂದು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.ಲೋಕಸಭೆ ಚುನಾವಣೆ, ನಿಗಮ-ಮಂಡಳಿ ಅಧ್ಯಕ್ಷರ ಆಯ್ಕೆ ಸೇರಿದಂತೆ ಮತ್ತಿತರ ವಿಚಾರಗಳ ಕುರಿತು ಚರ್ಚೆ ನಡೆಸಲು ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌ ಹಾಗೂ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್‌ ಸೇರಿದಂತೆ ಕೆಲ ಸಚಿವರನ್ನು ದೆಹಲಿಗೆ ಬರುವಂತೆ ಕಾಂಗ್ರೆಸ್‌ನ ಕೇಂದ್ರ ನಾಯಕರು ಸೂಚಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಪರ ಮಾಜಿ ಶಾಸಕಿ ಪೂರ್ಣಿಮಾ ಮತಯಾಚನೆ

ಈ ಕುರಿತು ಖುದ್ದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸುರ್ಜೇವಾಲ ಅವರು ಸಿಎಂ, ಡಿಸಿಎಂ ಹಾಗೂ ಕೆಲ ಸಚಿವರಿಗೆ ಕರೆ ಮಾಡಿ ತಿಳಿಸಿದ್ದಾರೆ. ಆ ಹಿನ್ನೆಲೆಯಲ್ಲಿ ಡಿ. 18ರಂದು ದೆಹಲಿಗೆ ತೆರಳಲಿರುವ ನಾಯಕರು, ಡಿ. 20ರವರೆಗೆ ಅಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ಡಿ. 21ರಂದು ಎಲ್ಲ ನಾಯಕರು ದೆಹಲಿಯಿಂದ ಬೆಂಗಳೂರಿಗೆ ವಾಪಾಸಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಏನು ಚರ್ಚೆ?:

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ರಾಜ್ಯ ನಾಯಕರೊಂದಿಗೆ ಲೋಕಸಭೆ ಚುನಾವಣೆ ತಯಾರಿ, ಅಭ್ಯರ್ಥಿಗಳ ಆಯ್ಕೆ ಸೇರಿದಂತೆ ಮತ್ತಿತರ ವಿಚಾರಗಳ ಬಗ್ಗೆ ಮೂರು ದಿನಗಲ ಕಾಲ ಚರ್ಚೆ ನಡೆಯಲಿದೆ. ಈ ವೇಳೆ ನಿಗಮ-ಮಂಡಳಿ ಅಧ್ಯಕ್ಷರ ಆಯ್ಕೆ, ಅದರಿಂದ ಲೋಕಸಭೆ ಚುನಾವಣೆಯಲ್ಲಿ ಪಕ್ಷಕ್ಕಾಗುವ ಲಾಭದ ಬಗ್ಗೆಯೂ ಸಮಾಲೋಚಿಸಲಾಗುತ್ತದೆ. ಹಾಗೆಯೇ, ಗ್ಯಾರಂಟಿ ಯೋಜನೆಗಳ ಜಾರಿ, ಪಂಚರಾಜ್ಯ ಚುನಾವಣೆ ಫಲಿತಾಂಶದಿಂದ ರಾಜ್ಯದಲ್ಲಾಗಿರುವ ಬದಲಾವಣೆ ಬಗ್ಗೆಯೂ ಕೇಂದ್ರ ನಾಯಕರು ವರದಿ ಪಡೆಯುವ ಸಾಧ್ಯತೆಗಳಿವೆ.

ಬಿಜೆಪಿ ದಲಿತ, ದಮನಿತ ವರ್ಗಗಳ ವಿರೋಧಿ: ಸಿಎಂ ಸಿದ್ದರಾಮಯ್ಯ ವಿಪಕ್ಷ ವಿರುದ್ಧ ಕಿಡಿ

Follow Us:
Download App:
  • android
  • ios