ಟಿಕೆಟ್ ಫೈಟ್: ಕಾಂಗ್ರೆಸ್ ಸಂಸದ ಜೆಡಿಎಸ್ ಅಭ್ಯರ್ಥಿ ಆಗ್ತಾರಾ?
ಒಕ್ಕಲಿಗರು, ವೀರಶೈವರು ಸಮಪ್ರಮಾಣದಲ್ಲಿರುವ ಹಾಗೂ ಅಹಿಂದ ವರ್ಗಗಳು ತುಸು ಹೆಚ್ಚಿನ ಸಂಖ್ಯೆಯಲ್ಲಿರುವ ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಮೂರೂ ಪಕ್ಷಗಳ ಪ್ರಾಬಲ್ಯವಿದೆ. ಈ ಬಾರಿ ಕಾಂಗ್ರೆಸ್- ಜೆಡಿಎಸ್ ನಡುವೆ ಮೈತ್ರಿ ಏರ್ಪಟ್ಟು, ಕ್ಷೇತ್ರ ಜೆಡಿಎಸ್ ಪಾಲಾಗುವ ಎಲ್ಲ ಸಾಧ್ಯತೆಗಳಿವೆ. ಹೀಗಾಗಿ ಹಾಲಿ ಸಂಸದ ಮುದ್ದಹನುಮೇಗೌಡ ಜೆಡಿಎಸ್‌ಗೆ ಸೇರಿ ಅಲ್ಲಿಂದ ಅಭ್ಯರ್ಥಿಯಾಗುತ್ತಾರೆ ಎನ್ನಲಾಗುತ್ತಿದೆ. ಈ ನಡುವೆ ವಿಧಾನಸಭೆ ಚುನಾವಣೆಯಲ್ಲಿ ಪರಾಭವಗೊಂಡಿರುವ ನಾಯಕರು ಕಾಂಗ್ರೆಸ್ ಹಾಗೂ ಬಿಜೆಪಿ ಎರಡರಲ್ಲೂ ಟಿಕೆಟ್‌ಗೆ ತೀವ್ರ ಪ್ರಯತ್ನ ನಡೆಸುತ್ತಿದ್ದಾರೆ.
ಮಹಾಭಾರತ ಸಂಗ್ರಾಮ: ತುಮಕೂರು ಕ್ಷೇತ್ರ
ತುಮಕೂರು[ಫೆ.13]: ಬೆಂಗಳೂರಿನ ಭವಿಷ್ಯದ ಉಪನಗರಿ ಹಾಗೂ ರಾಜ್ಯದಲ್ಲೇ ಅತಿ ಹೆಚ್ಚು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳನ್ನು ಒಳಗೊಂಡಿರುವ, ಎರಡನೇ ಅತಿ ದೊಡ್ಡ ಜಿಲ್ಲೆಯಾಗಿರುವ ತುಮಕೂರು ಲೋಕಸಭಾ ಕ್ಷೇತ್ರ ಮೂಲತಃ ಕಾಂಗ್ರೆಸ್ನ ಭದ್ರಕೋಟೆಯಾಗಿತ್ತು. ಆದರೆ ನಿಧಾನಕ್ಕೆ ಈ ಕ್ಷೇತ್ರದ ಮೇಲೆ ಬಿಜೆಪಿ ಹಿಡಿತ ಆರಂಭಗೊಂಡಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ನಡೆಯುವುದು ನಿಚ್ಚಳವಾಗಿದೆ.
ಟಿಕೆಟ್ ಫೈಟ್: ಸಿದ್ದು ಸ್ಪರ್ಧೆ ವದಂತಿಯಿಂದ ಕೊಪ್ಪಳ ಕ್ಷೇತ್ರದಲ್ಲಿ ಸಂಚಲನ
ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ನ ಹಾಲಿ ಸಂಸದ ಮುದ್ದಹನುಮೇಗೌಡ ಅವರು ಬಿಜೆಪಿಯಿಂದ ಸ್ಪರ್ಧಿಸಿದ್ದ ಜಿ.ಎಸ್. ಬಸವರಾಜು ವಿರುದ್ಧ ಅಧಿಕ ಮತಗಳ ಅಂತರದಿಂದ ಜಯ ಸಾಧಿಸಿದ್ದರು. ಜೆಡಿಎಸ್ನಿಂದ ಸ್ಪರ್ಧಿಸಿದ್ದ ಎ. ಕೃಷ್ಣಪ್ಪ ಹೀನಾಯವಾಗಿ ಪರಾಭವಗೊಂಡಿದ್ದರು. ಈ ಬಾರಿ ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಯಾಗಿ ಮುದ್ದಹನುಮೇಗೌಡ ಸ್ಪರ್ಧಿಸುವುದು ಬಹುತೇಕ ಖಚಿತ. ಜೆಡಿಎಸ್ ಪಕ್ಷ ಈ ಸಲ ತನಗೆ ತುಮಕೂರು ಲೋಕಸಭಾ ಕ್ಷೇತ್ರವನ್ನು ಬಿಟ್ಟುಕೊಡುವಂತೆ ಪಟ್ಟು ಹಿಡಿದಿದೆ. ಆದರೆ ಉಪ ಮುಖ್ಯಮಂತ್ರಿ ಪ್ರತಿನಿಧಿಸುವ ವಿಧಾನಸಭಾ ಕ್ಷೇತ್ರ ಇದೇ ಜಿಲ್ಲೆಯಲ್ಲಿರುವುದರಿಂದ ಹಾಗೂ ಪರಮೇಶ್ವರ್ ಅವರಿಗೆ ಮುದ್ದ ಹನುಮೇಗೌಡ ಅತ್ಯಂತ ಆತ್ಮೀಯರಾಗಿರುವುದರಿಂದ ಈ ಕ್ಷೇತ್ರವನ್ನು ಕಾಂಗ್ರೆಸ್ ಕೇಳುತ್ತಿದೆ. ಈ ಬಗ್ಗೆ ಇನ್ನೂ ಅಂತಿಮ ನಿರ್ಧಾರವಾಗಿಲ್ಲ.
ಟಿಕೆಟ್ ಫೈಟ್: ಉಗ್ರಪ್ಪಗೆ ಮೈತ್ರಿ ಟಿಕೆಟ್ ಖಚಿತ, ಬಿಜೆಪಿಯಿಂದ ಯಾರೆಂಬುದೇ ಅನಿಶ್ಚಿತ!
ಕುತೂಹಲಕಾರಿ ಸಂಗತಿಯೆಂದರೆ, ಒಂದು ವೇಳೆ ಈ ಕ್ಷೇತ್ರವೇನಾದರೂ ಜೆಡಿಎಸ್ ಪಾಲಾದರೆ ಕಾಂಗ್ರೆಸ್ಸಿನ ಮುದ್ದಹನುಮೇಗೌಡ ಅವರು ಜೆಡಿಎಸ್‌ಗೆ ಪಕ್ಷಾಂತರ ಮಾಡಿ, ಆ ಪಕ್ಷದಿಂದ ಸ್ಪರ್ಧಿಸುವ ಸಾಧ್ಯತೆಯೂ ಇದೆ ಎನ್ನಲಾಗುತ್ತಿದೆ. ಹೀಗಾಗಿ ಏನೇ ಆದರೂ ಹಾಲಿ ಸಂಸದ ಮುದ್ದ ಹನುಮೇಗೌಡ ಕಾಂಗ್ರೆಸ್- ಜೆಡಿಎಸ್ ಅಭ್ಯರ್ಥಿಯಾಗುವುದು ಖಚಿತ. ಇನ್ನು ಬಿಜೆಪಿಯಲ್ಲಿ ಕಳೆದ ಬಾರಿ ಪರಾಜಿತ ಅಭ್ಯರ್ಥಿ ಜಿ.ಎಸ್. ಬಸವರಾಜು ಮತ್ತೆ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಆದರೆ ಮಾಜಿ ಶಾಸಕ ಸುರೇಶಗೌಡ, ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಆರ್. ಹುಲಿನಾಯ್ಕರ್, ಮಾಜಿ ಸಚಿವ ಸೊಗಡು ಶಿವಣ್ಣ ಟಿಕೆಟ್ಗಾಗಿ ಪೈಪೋಟಿ ನಡೆಸಿದ್ದಾರೆ.
ಬಿಜೆಪಿ ಬಲ ಹೆಚ್ಚು:
ತುಮಕೂರು ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ ಮತ್ತು ಜೆಡಿಎಸ್ನಲ್ಲಿ ತಲಾ 4 ಶಾಸಕರು ಹಾಗೂ ಕಾಂಗ್ರೆಸ್‌ನಲ್ಲಿ 3 ಶಾಸಕರು ಇದ್ದಾರೆ. ಆದರೆ 11 ವಿಧಾನಸಭಾ ಕ್ಷೇತ್ರಗಳ ಶಿರಾ ಮತ್ತು ಪಾವಗಡ ಚಿತ್ರದುರ್ಗ ಲೋಕಸಭೆ ಕ್ಷೇತ್ರಕ್ಕೆ ಹಾಗೂ ಕುಣಿಗಲ್ ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಸೇರಿವೆ. ಹೀಗಾಗಿ ತುಮಕೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬರುವುದು 8 ವಿಧಾನಸಭಾ ಕ್ಷೇತ್ರ. ಈ ಪೈಕಿ ಬಿಜೆಪಿ 4ರಲ್ಲಿ ಪ್ರಾಬಲ್ಯ ಸಾಧಿಸಿದೆ. ಇನ್ನು ಜೆಡಿಎಸ್ 3 ಕ್ಷೇತ್ರಗಳಲ್ಲಿ ಹಾಗೂ ಕಾಂಗ್ರೆಸ್ 1 ಕ್ಷೇತ್ರದಲ್ಲಿ ಶಾಸಕರನ್ನು ಹೊಂದಿದೆ. ಹೀಗಾಗಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಿಜೆಪಿ ಬಲ ಕೊಂಚ ಅಧಿಕವಾಗಿದೆ.
ಟಿಕೆಟ್ ಫೈಟ್: ಶಿವಮೊಗ್ಗದಿಂದ ಮಧು ಸ್ಪರ್ಧಿಸ್ತಾರಾ? ಗೀತಾ ಕಣಕ್ಕಿಳೀತಾರಾ?
ಗುಬ್ಬಿಯಿಂದ ಜೆಡಿಎಸ್ ಶಾಸಕರಾಗಿ ಆಯ್ಕೆಯಾಗಿರುವ ಎಸ್.ಆರ್. ಶ್ರೀನಿವಾಸ್ ಹಾಗೂ ಪಾವಗಡದ ಕಾಂಗ್ರೆಸ್ ಶಾಸಕರಾಗಿರುವ ವೆಂಕಟರಮಣಪ್ಪ ಸಚಿವರಾಗಿದ್ದಾರೆ. ಕೊರಟಗೆರೆಯಿಂದ ಗೆದ್ದಿರುವ ಡಾ. ಜಿ. ಪರಮೇಶ್ವರ್ ಉಪಮುಖ್ಯಮಂತ್ರಿ ಆಗಿರುವುದರಿಂದ ಜಿಲ್ಲೆಯ ಮಟ್ಟಿಗೆ 3 ಮಂದಿ ಸಚಿವರು ಇದ್ದಾರೆ.
ಆಕಾಂಕ್ಷಿಗಳು ಹೆಚ್ಚುತ್ತಿದ್ದಾರೆ:
ಹಾಲಿ ಸಂಸದರಿಗೆ ಟಿಕೆಟ್ ನೀಡುವುದು ಖಚಿತ ಎಂದು ಕಾಂಗ್ರೆಸ್ ಮುಖಂಡರು ಹೇಳುತ್ತಿರುವ ಬೆನ್ನಲ್ಲೇ ಮಾಜಿ ಸಚಿವ ಟಿ.ಬಿ. ಜಯಚಂದ್ರ ಹಾಗೂ ಮಾಜಿ ಶಾಸಕ, ಹಾಲಿ ಅಪೆಕ್ಸ್ ಅಧ್ಯಕ್ಷ ಕೆ.ಎನ್. ರಾಜಣ್ಣ ತಾವು ಕೂಡ ಕಾಂಗ್ರೆಸ್ನ ಟಿಕೆಟ್ ಆಕಾಂಕ್ಷಿಗಳು ಎಂದು ಬಹಿರಂಗವಾಗಿ ಹೇಳುತ್ತಿದ್ದಾರೆ. ಇನ್ನು ಬಿಜೆಪಿಯಲ್ಲೂ ಆಕಾಂಕ್ಷಿಗಳ ಪಟ್ಟಿದೊಡ್ಡದಿದೆ. ಹೀಗಾಗಿ ಬಿಜೆಪಿಯಲ್ಲಿ ವರಿಷ್ಠರು ಯಾರಿಗೆ ಟಿಕೆಟ್ ಅನ್ನು ಅಂತಿಮಗೊಳಿಸುತ್ತಾರೆ ಎಂಬ ಕುತೂಹಲ ಹೆಚ್ಚಿದೆ.
ಟಿಕೆಟ್ ಫೈಟ್: ಬಿಜೆಪಿ ಭದ್ರಕೋಟೆ ಕಸಿಯಲು ಕಾಂಗ್ರೆಸ್ ಕಸರತ್ತು!
ಮುದ್ದಹನುಮೇಗೌಡರಿಗೆ ಸುಲಭದ ತುತ್ತೆ?:
ಕ್ಷೇತ್ರದಲ್ಲಿ ಒಕ್ಕಲಿಗರು ಹಾಗೂ ವೀರಶೈವ ಲಿಂಗಾಯತರು ಸಮ ಪ್ರಮಾಣದಲ್ಲಿದ್ದರೆ, ಅಹಿಂದ ವರ್ಗಗಳ ಮತಗಳು ತುಸು ಹೆಚ್ಚಿವೆ. ಕಳೆದ ಬಾರಿ ಜೆಡಿಎಸ್ನಿಂದ ಸ್ಪರ್ಧಿಸಿದ್ದ ಅಂದಿನ ಜೆಡಿಎಸ್ ರಾಜ್ಯಾಧ್ಯಕ್ಷ ಎ. ಕೃಷ್ಣಪ್ಪ ವಿರುದ್ಧ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಅಸಮಾಧಾನಗೊಂಡಿದ್ದರು. ಹೊರಗಡೆಯಿಂದ ಅಭ್ಯರ್ಥಿಯನ್ನು ಕರೆದು ತರುವುದು ಎಷ್ಟುಸರಿ ಎಂದು ಬಹಿರಂಗವಾಗಿ ಪ್ರಶ್ನಿಸಿದ್ದರು. ಅಲ್ಲದೇ ಕಳೆದ 35 ವರ್ಷಗಳಿಂದ ಒಕ್ಕಲಿಗರು ಈ ಕ್ಷೇತ್ರದಲ್ಲಿ ಜಯಸಾಧಿಸಿಲ್ಲ ಎಂಬ ಕೂಗು ಎದ್ದಿತ್ತು. ಈ ಮಧ್ಯೆ ಜೆಡಿಎಸ್ ಹೊರಗಡೆಯಿಂದ ಅಭ್ಯರ್ಥಿ ತಂದು ಹೂಡಿದ ಕಾರಣದಿಂದ ಸಿಟ್ಟಾದ ಜೆಡಿಎಸ್ನ ಕಾರ್ಯಕರ್ತರು ಬಹಿರಂಗವಾಗಿ ಒಕ್ಕಲಿಗ ಸಮುದಾಯದ ಮುದ್ದಹನುಮೇಗೌಡರನ್ನು ಬೆಂಬಲಿಸಿದ್ದರು. ಹೀಗಾಗಿ ಅವರ ಜಯ ಸುಲಭವಾಯಿತು. ಇನ್ನು ಸಂಸತ್ನಲ್ಲಿ ಜಿಲ್ಲೆಯ ಪರವಾಗಿ ಪ್ರಶ್ನೆಗಳನ್ನು ಕೇಳಿ ಮುದ್ದ ಹನುಮೇಗೌಡರು ಗಮನ ಸೆಳೆದಿದ್ದೂ ಉಂಟು. ಆದರೆ ಕಟ್ಟಕಡೆಯ ಕಾರ್ಯಕರ್ತನನ್ನು ಮುದ್ದಹನುಮೇಗೌಡರು ವಿಶ್ವಾಸಕ್ಕೆ ತೆಗೆದುಕೊಳ್ಳಲಿಲ್ಲ ಎಂಬ ಆರೋಪವಿದೆ.
ಟಿಕೆಟ್ ಫೈಟ್ : ಚಿಕ್ಕಬಳ್ಳಾಪುರದಲ್ಲಿ 2 ಬಾರಿ ಗೆದ್ದಿದ್ದರೂ ಮೊಯ್ಲಿಗೆ ಟಿಕೆಟ್ ಕಗ್ಗಂಟು!
2013ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಲೋಕಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಬಿಜೆಪಿ ಗೆದ್ದಿದ್ದು ಕೇವಲ ಒಂದು ಸ್ಥಾನ ಮಾತ್ರ. ಆದರೆ ಈ ಬಾರಿ ತುಮಕೂರು ಲೋಕಸಭಾ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ ನಾಲ್ಕರಲ್ಲಿ ಗೆಲುವು ಸಾಧಿಸಿರುವುದರಿಂದ ಸಹಜವಾಗಿ ಹುಮ್ಮಸ್ಸಿನಲ್ಲಿದೆ. ಇದು ಬಿಜೆಪಿಗೆ ಅನುಕೂಲವಾಗಬಹುದು.
ಕಳೆದ ಮೂರು ವಿಧಾನಸಭಾ ಚುನಾವಣೆಗಳಲ್ಲೂ ಜೆಡಿಎಸ್ ಪಾರುಪತ್ಯ ಮೆರೆದಿದೆ. ಆದರೆ ಲೋಕಸಭೆಯಲ್ಲಿ ಒಮ್ಮೆ ಮಾತ್ರ ಹಿಂದಿನ ಜನತಾದಳ ಅಭ್ಯರ್ಥಿ ಗೆದ್ದಿದ್ದರು. ಈ ಬಾರಿ ಮತ್ತೆ ಕ್ಷೇತ್ರವನ್ನು ಕಾಂಗ್ರೆಸ್ಗೆ ಬಿಟ್ಟುಕೊಟ್ಟರೆ ಪಕ್ಷಕ್ಕೆ ನಷ್ಟಎಂಬ ಅಭಿಪ್ರಾಯಗಳು ಜೆಡಿಎಸ್ನಲ್ಲಿ ಕೇಳಿ ಬರುತ್ತಿವೆ. ಅಲ್ಲದೇ ಜೆಡಿಎಸ್ನಲ್ಲೂ ಆಕಾಂಕ್ಷಿಗಳು ಹೆಚ್ಚಿದ್ದಾರೆ. ಹೀಗಾಗಿ ಮೂರು ಪಕ್ಷಗಳಲ್ಲೂ ಕೂಡ ಸಣ್ಣ ಭಿನ್ನಾಭಿಪ್ರಾಯ ಇದ್ದು ಇದರ ಲಾಭ ಯಾರಿಗೆ ಆಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.
ಟಿಕೆಟ್ ಫೈಟ್ : ಹಾಸನದಲ್ಲಿ ಪ್ರಜ್ವಲ್ ಎದುರು ಬಿಜೆಪಿ ಸ್ಪರ್ಧಿ ಯಾರು..?
8 ವಿಧಾನಸಭೆ ಕ್ಷೇತ್ರಗಳಲ್ಲಿ ನಾಲ್ವರು ಬಿಜೆಪಿ ಶಾಸಕರು
ತುಮಕೂರು ಜಿಲ್ಲೆಯಲ್ಲಿ 11 ವಿಧಾನಸಭಾ ಕ್ಷೇತ್ರಗಳು ಇವೆ. ಆ ಪೈಕಿ ಶಿರಾ, ಪಾವಗಡ ಕ್ಷೇತ್ರಗಳು ಚಿತ್ರದುರ್ಗ ಹಾಗೂ ಕುಣಿಗಲ್ ಕ್ಷೇತ್ರ ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರಕ್ಕೆ ಸೇರಿರುವುದರಿಂದ ತುಮಕೂರು ಲೋಕಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ 8 ಕ್ಷೇತ್ರಗಳು ಇವೆ. ಆ ಪೈಕಿ 4 ಕ್ಷೇತ್ರಗಳಲ್ಲಿ (ಚಿಕ್ಕನಾಯಕನಹಳ್ಳಿ, ತಿಪಟೂರು, ತುರುವೇಕೆರೆ ಹಾಗೂ ತುಮಕೂರು ನಗರ) ಬಿಜೆಪಿ, 3ರಲ್ಲಿ (ತುಮಕೂರು ಗ್ರಾಮಾಂತರ, ಗುಬ್ಬಿ ಹಾಗೂ ಮಧುಗಿರಿ) ಜೆಡಿಎಸ್ ಹಾಗೂ ಕೊರಟಗೆರೆಯಲ್ಲಿ ಕಾಂಗ್ರೆಸ್ ಶಾಸಕರು ಇದ್ದಾರೆ.
ಟಿಕೆಟ್ ಫೈಟ್: ಬೆಂಗಳೂರು ಉತ್ತರದಲ್ಲಿ ದೇವೇಗೌಡ V/S ಡಿವಿಎಸ್ V/S ರಮ್ಯಾ?
ಇಲ್ಲಿನ ಸಂಸದ ಲೋಕಸಭೆ ಉಪ ಸ್ಪೀಕರ್ ಆಗಿದ್ದರು
1991ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದ ಎಸ್. ಮಲ್ಲಿಕಾರ್ಜುನಯ್ಯ ಅವರನ್ನು ಲೋಕಸಭೆಯ ಡೆಪ್ಯೂಟಿ ಸ್ಪೀಕರ್ ಆಗಿ ಆಯ್ಕೆ ಮಾಡಲಾಗಿತ್ತು. ಹೀಗಾಗಿ ಲೋಕಸಭೆಯಲ್ಲಿ ತುಮಕೂರಿಗೆ ದೊಡ್ಡ ಗೌರವ ಸಿಕ್ಕಂತಾಗಿತ್ತು.
ಟಿಕೆಟ್ ಫೈಟ್: ಮಂಡ್ಯ ಕ್ಷೇತ್ರದಲ್ಲಿ ಸುಮಲತಾ ನಿಲ್ತಾರಾ? ನಿಖಿಲ್‌ಗೆ ಬಿಡ್ತಾರಾ?
ಯಾರ್ಯಾರು ಪೈಪೋಟಿ?
ಕಾಂಗ್ರೆಸ್: ಮುದ್ದಹನುಮೇಗೌಡ, ಟಿ.ಬಿ.ಜಯಚಂದ್ರ, ಕೆ.ಎನ್.ರಾಜಣ್ಣ
ಬಿಜೆಪಿ: ಜಿ.ಎಸ್.ಬಸವರಾಜು, ಸುರೇಶ್‌ಗೌಡ, ಎಂ.ಆರ್.ಹುಲಿನಾಯ್ಕರ್, ಸೊಗಡು ಶಿವಣ್ಣ
ಜೆಡಿಎಸ್- ಸುರೇಶ್‌ಗೌಡ
ಟಿಕೆಟ್ ಫೈಟ್: ಬೆಳಗಾವಿಯಲ್ಲಿ ಅಂಗಡಿ ವರ್ಸಸ್ ವಿವೇಕರಾವ್?
ಟಿಕೆಟ್ ಫೈಟ್: ಉತ್ತರ ಕನ್ನಡದಲ್ಲಿ ಹೆಗಡೆ ಓಟಕ್ಕೆ ದೇಶಪಾಂಡೆ ಹಾಕ್ತಾರಾ ತಡೆ?