Asianet Suvarna News Asianet Suvarna News

ಸಿದ್ದು ಕೇಸಿಗೂ ನಿರ್ಮಲಾ ಪ್ರಕರಣಕ್ಕೂ ಅಜಗಜಾಂತರ ವ್ಯತ್ಯಾಸ: ಆ‌ರ್. ಅಶೋಕ್

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ವಿರುದ್ಧ ಎಫ್‌ಐಆ‌ರ್ ದಾಖಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿರುವುದಕ್ಕೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಡಾ ಹಗರಣಕ್ಕೂ ಅಜಗಜಾಂತರ ವ್ಯತ್ಯಾಸವಿದೆ. ಚುನಾವಣಾ ಬಾಂಡ್ ಅಡಿ ಎಲ್ಲಾ ಪಕ್ಷಗಳು ದೇಣಿಗೆ ಪಡೆದಿವೆ. ಆದರೆ, ಸಿದ್ದರಾಮಯ್ಯ ಅವರದು ವೈಯಕ್ತಿಕ ಹಗರಣ ಎಂದ ವಿಧಾನಸಭೆ ವಿರೋಧ ಪಕ್ಷದ ನಾಯಕ ಆ‌ರ್. ಅ

lot of difference between Siddaramaiah case and Nirmala Sitharaman case Says R Ashok grg
Author
First Published Sep 29, 2024, 6:30 AM IST | Last Updated Sep 29, 2024, 6:30 AM IST

ಬೆಂಗಳೂರು(ಸೆ.29): ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಜನ ಪಕ್ಷಪಾತ ಮಾಡಿದ್ದಾರೆ. ಕೋಟ್ಯಂತರ ರು. ಮೌಲ್ಯದ ಜಮೀನು ಕಬಳಿಸಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆ‌ರ್. ಅಶೋಕ್ ಹೇಳಿದ್ದಾರೆ. 

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ವಿರುದ್ಧ ಎಫ್‌ಐಆ‌ರ್ ದಾಖಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿರುವುದಕ್ಕೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಡಾ ಹಗರಣಕ್ಕೂ ಅಜಗಜಾಂತರ ವ್ಯತ್ಯಾಸವಿದೆ. ಚುನಾವಣಾ ಬಾಂಡ್ ಅಡಿ ಎಲ್ಲಾ ಪಕ್ಷಗಳು ದೇಣಿಗೆ ಪಡೆದಿವೆ. ಆದರೆ, ಸಿದ್ದರಾಮಯ್ಯ ಅವರದು ವೈಯಕ್ತಿಕ ಹಗರಣ ಎಂದರು. 

ದಾಖಲೆ ಬಿಡುಗಡೆ ಮಾಡದಂತೆ ಕುಮಾರಸ್ವಾಮಿ ತಡೆದವರು ಯಾರು?

ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಜನ ಪಕ್ಷಪಾತ ಮಾಡಿದ್ದಾರೆ. ಕೋಟ್ಯಂತರ ರು. ಮೌಲ್ಯದ ಜಮೀನು ಕಬಳಿಸಿದ್ದಾರೆ. ನಿರ್ಮಲಾ ಸೀತಾರಾಮನ್ ತಮ್ಮ ಸ್ವಂತಕ್ಕೆ ಏನೂ ಮಾಡಿಲ್ಲ. ಆ ಹಣ ಪಕ್ಷಕ್ಕೆ ಬಂದಿದೆ. ಕಾಂಗ್ರೆಸ್ ಪಕ್ಷಕ್ಕೂ 1,200 ಕೋಟಿ ರು. ಗೂ ಅಧಿಕ ಹಣ ಬಂದಿದೆ. ಆ ಹಣವನ್ನು ಮೊದಲು ವಾಪಾಸ್ ನೀಡಿ ಬಳಿಕ ಕೇಂದ್ರ ಸಚಿವರ ರಾಜೀನಾಮೆ ಕೇಳಲಿ ಎಂದು ಸವಾಲು ಹಾಕಿದರು. 

ಎಲ್ಲಾ ಪಕ್ಷಗಳು ದೇಣಿಗೆ ಸಂಗ್ರಹಿಸಿವೆ. ಹೀಗೆ ಹಣ ತೆಗೆದುಕೊಂಡವರ ಮೇಲೆ ಎಫ್ ಐಆರ್ ದಾಖಲಿಸುವುದಾದರೆ, ಎಲ್ಲರ ಮೇಲೂ ಎಫ್‌ಐಆರ್ ದಾಖಲಿಸಬೇಕಾಗುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಯಾರಿಂದಲೂ ಹೇಳಿಸಿ ದೂರು ದಾಖಲಿಸಿದ್ದಾರೆ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Latest Videos
Follow Us:
Download App:
  • android
  • ios