Asianet Suvarna News Asianet Suvarna News

Makedatu Padayatre ಮೇಕೆದಾಟು ಪಾದಯಾತ್ರೆಗೆ ಶಿವಣ್ಣ ಗೈರಾಗಿದ್ದೇಕೆ? ಕಾರಣ ಬಿಚ್ಚಿಟ್ಟ ಮಧು ಬಂಗಾರಪ್ಪ

* ಕೊನೆಯಲ್ಲಿ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಯಿಂದ ಹಿಂದೆ ಸರಿದ ಶಿವಣ್ಣ
* ಕಾರ್ಯಕ್ರಮಕ್ಕೆ ರಾ ಶಿವರಾಜ್ ಕುಮಾರ್ ಗೈರಾಗಿದ್ದು ಯಾಕೆ?
* ಕಾರಣ ಬಿಚ್ಚಿಟ್ಟ ಸಂಬಂಧಿ ಹಾಗೂ ಕಾಂಗ್ರೆಸ್ ನಾಯಕ
* ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಗೆ ಶಿವಣ್ಣ ಚಾಲನೆ ನೀಡುತ್ತಾರೆ ಎನ್ನಲಾಗಿತ್ತು

Madhu Bangarappa Revels Why Dr Shivaraj Kumar step back From Congress Mekedatu Padayatre rbj
Author
Bengaluru, First Published Jan 10, 2022, 5:30 PM IST

ಬೆಂಗಳೂರು, (ಜ.10): ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಗೆ (Congress Mekedatu padayatre) ಸ್ಯಾಂಡಲ್​​ವುಡ್ ಹಿರಿಯ ನಟ, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ (Shivaraj Kumar) ಚಾಲನೆ ಕೊಡುತ್ತಾರೆ ಎನ್ನಲಾಗಿತ್ತು. ಆದ್ರೆ, ಅವರು ಪಾದಯಾತ್ರೆ ಕಾರ್ಯಕ್ರಮಕ್ಕೆ ಬರಲೇ ಇಲ್ಲ.

ಇನ್ನು ಮೇಕೆದಾಟು ಪಾದಯಾತ್ರೆ (Mekedatu Padayatre) ಉದ್ಘಾಟನೆ ಕಾರ್ಯಕ್ರಮದಿಂದ ಕೊನೆಯಲ್ಲಿ ಶಿವರಾಜ್ ಕುಮಾರ್ ಹಿಂದೆ ಸರಿದಿದ್ದರ ಹಿಂದಿನ ಕಾರಣವನ್ನು ಸಂಬಂಧಿ ಹಾಗೂ ಕಾಂಗ್ರೆಸ್ ನಾಯಕ ಮಧು ಬಂಗಾರಪ್ಪ (Madhu Bangarappa) ಬಿಚ್ಚಿಟ್ಟಿದ್ದಾರೆ.

Mekedatu Padayatra ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಗೆ ಸಿಕ್ತು ಶಿವರಾಜ್​ ಕುಮಾರ್ ಬಲ

ನಿನ್ನೆ(ಜ.09) ಶಿವಣ್ಣ ಅವರಿಗೆ ಬೇರೆ ವಿಚಾರಗಳು ಇದ್ದಿದ್ದರಿಂದ ಅವರು ಕನಕಪುರದವರೆಗೆ ಬಂದು ವಾಪಸ್​ ಹೋಗಿದ್ದಾರೆ. ಅವರು ಅವರದ್ದೇ ಆದಂತಹ ಯೋಜನೆಯಲ್ಲಿ ಇರುತ್ತಾರೆ. ಅವರ ಕೈಯಲ್ಲೇ ಉದ್ಘಾಟನೆ ಮಾಡಿಸಬೇಕು ಎಂಬ ಉದ್ದೇಶ ಇತ್ತು. ಕೊವಿಡ್​ ಮುಂತಾದ ಕಾರಣದಿಂದ ಅವರಿಗೆ ಬರಲು ಸಾಧ್ಯವಾಗಿಲ್ಲ ಎಂದು ಸ್ಪಷ್ಟಪಡಿಸಿದರು.

ಚಿತ್ರರಂಗದ ಬೆಂಬಲ ನಮಗೆ ಇದೆ. ಶಿವಣ್ಣ ಅವರನ್ನು ನಾನು ನೇರವಾಗಿ ಈ ವಿಚಾರದ ಬಗ್ಗೆ ಭೇಟಿ ಮಾಡಿಲ್ಲ. ಅವರ ಬೆಂಬಲ ಇದ್ದೇ ಇರುತ್ತದೆ ಎಂದು ಹೇಳಿದರು.

ಈ ವಿಚಾರವಾಗಿ ಶಿವರಾಜ್​ಕುಮಾರ್​ ಅವರನ್ನು ನಾನು ನೇರವಾಗಿ ಭೇಟಿ ಮಾಡಿಲ್ಲ. ಅವರ ಬೆಂಬಲ ಇದ್ದೇ ಇರುತ್ತದೆ' ಎಂದು ಮಧು ಬಂಗಾರಪ್ಪ ಹೇಳಿದ್ದಾರೆ.

ಮೇಕೆದಾಟು (Mekedatu) ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್​ ನೇತೃತ್ವದಲ್ಲಿ ಪಾದಯಾತ್ರೆ ನಡೆಯುತ್ತಿದೆ. ಡಿ.ಕೆ. ಶಿವಕುಮಾರ್​ (DK Shivakumar) ಅವರ ಮುಂದಾಳತ್ವದಲ್ಲಿ ಮೇಕೆದಾಟು ಯೋಜನೆಗೆ ಆಗ್ರಹಿಸಿ ಪಾದಯಾತ್ರೆ ನಡೆಯುತ್ತಿದ್ದು, ಕಾಂಗ್ರೆಸ್​ನ ಅನೇಕ ಮುಂಖಡರು ಪಾಲ್ಗೊಡಿದ್ದಾರೆ. 

ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳಿಗೂ ಆಹ್ವಾನ ನೀಡಲಾಗಿದೆ.  ಇನ್ನು ಒಂದು ವಾರಗಳ ಕಾಲ ಈ ಪಾದಯಾತ್ರೆ ನಡೆಯಲಿದ್ದು, ಶಿವರಾಜ್​ಕುಮಾರ್​ (Shivarajkumar) ಅವರು ಇದರಲ್ಲಿ ಭಾಗವಹಿಸುತ್ತಾರೋ ಇಲ್ಲವೋ ಎಂಬ ಬಗ್ಗೆ ದೊಡ್ಡ ಚರ್ಚೆ ಶುರುವಾಗಿದೆ. 

ಅಭಿಮಾನಿಗಳ ಒತ್ತಡಕ್ಕೆ ಮಣಿದ್ರಾ ಶಿವಣ್ಣ?
ಹೌದು....ಕಾಂಗ್ರೆಸ್ ಪಾದಯಾತ್ರೆಗೆ ಶಿವಣ್ಣ ಚಾಲನೆ ಕೊಡಲಿದ್ದಾರೆ ಎನ್ನುವ ಸುದ್ದಿ ಮಾಧ್ಯಮಗಳಲ್ಲಿ ಬರುತ್ತಿದ್ದಂತೆಯೇ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧದ ಚರ್ಚೆಯಾಗಿತ್ತು. ಕೆಲವರು ಶಿವಣ್ಣನ ನಡೆಯನ್ನು ಬಲವಾಗಿ ಖಂಡಿಸಿದ್ರೆ, ಇನ್ನೂ ಕೆಲವರು ಸ್ವಾಗತ ಮಾಡಿದ್ರು, ಆದ್ರೆ, ಸ್ವಾಗತ ಮಾಡಿದವರಿಗಂತ ವಿರೋಧ ವ್ಯಕ್ತಪಡಿಸಿದವರೇ ಹೆಚ್ಚು

ಅದೊಂದು ಕಾಂಗ್ರೆಸ್ ಪಾದಯಾತ್ರೆ. ನೀವು ರಾಜಕೀಯಕ್ಕೆ ಎಂಟ್ರಿ ಕೊಡಬೇಡಿ. ಯಾವುದೇ ಪಾರ್ಟಿ ಕಾರ್ಯಕ್ರಮದಲ್ಲಿ ಭಾಗವಹಿಸುವುದು ಬೇಡ. ಶಿವನ್ನ ನಿಮಗೆ ರಾಜಕೀಯ ಬೇಡ ಎಂದು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹೇಳಿದ್ದರು.

ಖಂಡಿಸಿದ್ದ ಬಿಜೆಪಿ ನಾಯಕರು
ಇನ್ನು ಶಿವಮರಾಜ್‌ ಕುಮಾರ್‌ ನಡೆಗೆ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಖಂಡಿಸಿದ್ದರು. ಕಾಂಗ್ರೆಸ್ ಪಕ್ಷದ ಸದಸ್ಯತ್ವ ಸ್ವೀಕರಿಸಿ ಮೇಕೆದಾಟು ಪಾದಯಾತ್ರೆಯಲ್ಲಿ ಪಾಲ್ಗೊಳ್ಳಿ...ದೊಡ್ಡ ಮನೆಯ ಘನತೆಗೆ ಕಪ್ಪುಚುಕ್ಕಿ ಇಡಬೇಡಿ ಅಂತೆಲ್ಲ ಟೀಕೆಗಳನ್ನ ಮಾಡಿದ್ದರು. ಈ ಎಲ್ಲಾ ಒತ್ತಡಕ್ಕೆ ಮಣಿದು ಶಿವರಾಜ್ ಕುಮಾರ್ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ವೇದಿಕೆಯನ್ನು ಹಂಚಿಕೊಂಡಿಲ್ಲ ಎನ್ನಲಾಗುತ್ತಿದೆ.

ಪಾದಯಾತ್ರೆಯ ವಿವರ 
* ಜನವರಿ 9ರ ಭಾನುವಾರ ಬೆಳಿಗ್ಗೆ 8.30ಕ್ಕೆ ಮೇಕೆದಾಟು ಬಳಿಯ ಅರ್ಕಾವತಿ ಮತ್ತು ಕಾವೇರಿ ನದಿಗಳು ಸಂಧಿಸುವ ಸಂಗಮ ಸ್ಥಳದಿಂದ ಪ್ರಾರಂಭವಾಗುವ ಪಾದಯಾತ್ರೆ 6.5 ಕಿ. ಮೀ. ದೂರ ಸಾಗಿ ಹೆಗ್ಗನೂರು ಬಳಿ ಮಧ್ಯಾಹ್ನದ ಭೋಜನ ಮುಗಿಸಿ ಮತ್ತೆ 8.5 ಕಿ. ಮೀ. ಸಾಗಿ ಡಿ. ಕೆ. ಶಿವಕುಮಾರ್ ಹುಟ್ಟೂರು ದೊಡ್ಡಾಲಹಳ್ಳಿ ಗ್ರಾಮ ತಲುಪಲಿದೆ. ಸಭೆಯ ಬಳಿಕ ಅಲ್ಲೇ ರಾತ್ರಿ ವಾಸ್ತವ್ಯ. 

* 2ನೇ ದಿನ ದೊಡ್ಡಾಲಹಳ್ಳಿ ಗ್ರಾಮದಿಂದ 8 ಕಿ. ಮೀ. ಸಾಗಿ ಮಾದಪ್ಪನದೊಡ್ಡಿ ಬಳಿ ವಿಶ್ರಾಂತಿ, ಊಟ ಮುಗಿಸಿ ಮತ್ತೆ 8 ಕಿ. ಮೀ. ಸಾಗಿ ಕನಕಪುರ ತಾಲ್ಲೂಕು ಕೇಂದ್ರ ತಲುಪಲಿದೆ. ರಾತ್ರಿ ಕನಕಪುರದಲ್ಲಿ ನಾಯಕರ ವಾಸ್ತವ್ಯ. 

* 3ನೇ ದಿನ ಕನಕಪುರದಿಂದ 7.3 ಕಿ. ಮೀ. ನೆಡದು ಗಾಣಳು ಗ್ರಾಮದ ವೀರಭದ್ರ ಸ್ವಾಮಿ ದೇವಾಲಯದ ಬಳಿ ಊಟ ಹಾಗೂ ವಿಶ್ರಾಂತಿ. ನಂತರ ಮತ್ತೆ 7 ಕಿ. ಮೀ. ಸಾಗುವ ಪಾದಯಾತ್ರೆ ಚಿಕ್ಕೇನಹಳ್ಳಿ ಗ್ರಾಮದಲ್ಲಿ ರಾತ್ರಿ ವಾಸ್ತವ್ಯ ಮಾಡಲಿದೆ.

 * 4ನೇ ದಿನದ ಪಾದಯಾತ್ರೆ ಚುಕ್ಕೇನಹಳ್ಳಿ ಗ್ರಾಮದಿಂದ ಪ್ರಾರಂಭವಾಗಿ 15 ಕಿ. ಮೀ. ಸಾಗಿ ಜಿಲ್ಲಾ ಕೇಂದ್ರ ರಾಮನಗರ ತಲುಪಲಿದೆ. ರಾತ್ರಿ ಅಲ್ಲಿಯೇ ಸಭೆ ನಡೆಸಿ, ನಾಯಕರು ವಾಸ್ತವ್ಯ ಹೂಡಲಿದ್ದಾರೆ.

 * 5 ನೇ ದಿನದ ಪಾದಯಾತ್ರೆ ರಾಮನಗರದಿಂದ ಆರಂಭಗೊಂಡು 15 ಕಿ. ಮೀ. ಸಾಗಿ ಬಿಡದಿ ತಲುಪಲಿದೆ. ರಾತ್ರಿ ಬಿಡದಿಯಲ್ಲಿ ವಾಸ್ತವ್ಯ. 

* 6ನೇ ದಿನದ ಪಾದಯಾತ್ರೆ ಬಿಡದಿಯಿಂದ ಪ್ರಾರಂಭಗೊಂಡು ಮಂಚನಾಯಕನಹಳ್ಳಿ ಮೂಲಕ ರಾಷ್ಟ್ರೀಯ ಹೆದ್ದಾರಿಯಲ್ಲಿ 18 ಕಿ. ಮೀ. ಸಾಗಿ ಕೆಂಗೇರಿ ತಲುಪಲಿದೆ. ರಾತ್ರಿ ಪೂರ್ಣಿಮಾ ಕನ್ವೆನ್ಷನ್ ಹಾಲ್ ನಲ್ಲಿ ವಾಸ್ತವ್ಯ.

 * 7ನೇ ದಿನದ ಪಾದಯಾತ್ರೆ ಕೆಂಗೇರಿಯಿಂದ ಪ್ರಾರಂಭ, ಬೆಂಗಳೂರು ನಗರ ಪ್ರವೇಶ. 12 ಕಿ. ಮೀ. ನಡೆದು ಬೆಂಗಳೂರಿನ ಬನಶಂಕರಿಯಲ್ಲಿ ಮೂಲಕ ಸಾಗಿ ಸಾರಕ್ಕಿ ಸಿಗ್ನಲ್ ಬಳಿಯ ಸಿಂಧೂರ ಕನ್ವೆನ್ಷನ್ ಹಾಲ್ ನಲ್ಲಿ ರಾತ್ರಿ ವಾಸ್ತವ್ಯ. 

* 8ನೇ ದಿನದ ಪಾದಯಾತ್ರೆ ಸಾರಕ್ಕಿಯಿಂದ ಪ್ರಾರಂಭ. ಕೋರಮಂಗಲ ಮಾರ್ಗವಾಗಿ ಸಾಗುವ ಪಾದಯಾತ್ರೆ 17.2 ಕಿ. ಮೀ. ಸಾಗಿ ರಾತ್ರಿ ಲಕ್ಷ್ಮಿಪುರಂ ಸುಬ್ರಹ್ಮಣ್ಯ ಛತ್ರದಲ್ಲಿ ವಾಸ್ತವ್ಯ. 

* 9ನೇ ದಿನದ ಪಾದಯಾತ್ರೆ ಲಕ್ಷ್ಮಿಪುರಂನಿಂದ ಪ್ರಾರಂಭ. ಬಾಣಸವಾಡಿ ಮಾರ್ಗವಾಗಿ 12 ಕಿ. ಮೀ. ಸಾಗಿ ರಾತ್ರಿ ನಾಗವಾರದ ಲಕ್ಷ್ಮಿ ಕಲ್ಯಾಣ ಮಂಟಪದಲ್ಲಿ ವಾಸ್ತವ್ಯ. 

* 10ನೇ ದಿನದ ಪಾದಯಾತ್ರೆ ನಾಗವಾರದಿಂದ ಪ್ರಾರಂಭವಾಗುವ ಕಾಂಗ್ರೆಸ್ ನಾಯಕರ ಪಾದಯಾತ್ರೆ 12 ಕಿ. ಮೀ. ಸಂಚಾರ ಮಾಡಿ ಗಾಯಿತ್ರಿ ವಿಹಾರ್, ಪ್ಯಾಲೇಸ್ ಗ್ರೌಂಡ್ ತಪುಪಲಿದೆ. 

* ಪಾದಯಾತ್ರೆ ಕೊನೆಯ ದಿನವಾದ 11ನೇ ದಿನ ಪ್ಯಾಲೇಸ್ ಗ್ರೌಂಡ್‌ನಿಂದ ಹೊರಟು 8 ಕಿ. ಮೀ. ಸಂಚಾರ ಮಾಡಿ ರೇಸ್ ಕೋರ್ಸ್ ರೋಡ್ ಮೂಲಕ ಸಾಗಿ ಬಸವನಗುಡಿ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಮುಕ್ತಾಯ.

Follow Us:
Download App:
  • android
  • ios