Asianet Suvarna News Asianet Suvarna News

ಕರ್ನಾಟಕ ರೀತಿ ಮಧ್ಯ ಪ್ರದೇಶದಲ್ಲೂ ಕಾಂಗ್ರೆಸ್‌ ನಾಯಕರ ಘರ್‌ ವಾಪ್ಸಿ..!

ಮಧ್ಯಪ್ರದೇಶದಲ್ಲಿ ಮುಂದಿನ ಕೆಲ ತಿಂಗಳಲ್ಲೇ ವಿಧಾನಸಭಾ ಚುನಾವಣೆ ನಡೆಯಲಿದ್ದು, ಈ ಹೊತ್ತಿನಲ್ಲೇ ನಡೆದ ಈ ಘರ್‌ವಾಪ್ಸಿ ಬೆಳವಣಿಗೆ ಸಾಕಷ್ಟು ಕುತೂಹಲ ಕೆರಳಿಸಿದೆ. ಕರ್ನಾಟಕದ ರೀತಿಯಲ್ಲೇ ಮಧ್ಯಪ್ರದೇಶದಲ್ಲೂ ಪಕ್ಷ ಬಿಟ್ಟು ಹೋದ ನಾಯಕರನ್ನು ಮರಳಿ ಪಕ್ಷಕ್ಕೆ ಸೆಳೆಯಲು ಕಾಂಗ್ರೆಸ್‌ ದೊಡ್ಡ ಮಟ್ಟದಲ್ಲಿ ಕಾರ್ಯಾಚರಣೆ ನಡೆಸುತ್ತಿರುವುದರ ಸುಳಿವು ಇದಾಗಿರಬಹುದು ಎಂದು ವಿಶ್ಲೇಷಿಸಲಾಗಿದೆ.

Madhya Pradesh BJP MLA's Back to Congress grg
Author
First Published Aug 20, 2023, 4:00 AM IST

ಭೋಪಾಲ್‌(ಆ.20): 2018ರ ಕರ್ನಾಟಕ ವಿಧಾನಸಭಾ ಚುನಾವಣೆ ಬಳಿಕ ಬಿಜೆಪಿ ಸೇರಿದ್ದವರ ಪೈಕಿ ಕೆಲ ಶಾಸಕರು ಮರಳಿ ಕಾಂಗ್ರೆಸ್‌ ಸೇರ್ಪಡೆಗೆ ಸಜ್ಜಾಗಿದ್ದಾರೆ ಎಂಬ ವರದಿಗಳ ಬೆನ್ನಲ್ಲೇ ಮಧ್ಯಪ್ರದೇಶದಲ್ಲೂ ಅಂಥ ಘರವಾಪ್ಸಿ ಬೆಳವಣಿಗೆ ಕಂಡುಬಂದಿದೆ. 2020ರಲ್ಲಿ ಜ್ಯೋತಿರಾದಿತ್ಯ ಸಿಂಧಿಯಾ ಜೊತೆ ಕಾಂಗ್ರೆಸ್‌ಗೆ ವಿದಾಯ ಹೇಳಿ ಬಿಜೆಪಿ ಸೇರಿದ್ದ ಆಪ್ತ ಸಮಂದರ್‌ ಪಟೇಲ್‌ ಇದೀಗ ಮರಳಿ ಕಾಂಗ್ರೆಸ್‌ ಸೇರಿದ್ದಾರೆ.

ಮಧ್ಯಪ್ರದೇಶದಲ್ಲಿ ಮುಂದಿನ ಕೆಲ ತಿಂಗಳಲ್ಲೇ ವಿಧಾನಸಭಾ ಚುನಾವಣೆ ನಡೆಯಲಿದ್ದು, ಈ ಹೊತ್ತಿನಲ್ಲೇ ನಡೆದ ಈ ಘರ್‌ವಾಪ್ಸಿ ಬೆಳವಣಿಗೆ ಸಾಕಷ್ಟು ಕುತೂಹಲ ಕೆರಳಿಸಿದೆ. ಕರ್ನಾಟಕದ ರೀತಿಯಲ್ಲೇ ಮಧ್ಯಪ್ರದೇಶದಲ್ಲೂ ಪಕ್ಷ ಬಿಟ್ಟು ಹೋದ ನಾಯಕರನ್ನು ಮರಳಿ ಪಕ್ಷಕ್ಕೆ ಸೆಳೆಯಲು ಕಾಂಗ್ರೆಸ್‌ ದೊಡ್ಡ ಮಟ್ಟದಲ್ಲಿ ಕಾರ್ಯಾಚರಣೆ ನಡೆಸುತ್ತಿರುವುದರ ಸುಳಿವು ಇದಾಗಿರಬಹುದು ಎಂದು ವಿಶ್ಲೇಷಿಸಲಾಗಿದೆ.

2.5 ವರ್ಷ ಬಳಿಕ ಸಿದ್ದು ಸಚಿವ ಸಂಪುಟ ಪೂರ್ಣ ಬದಲು: ಶಾಸಕ ವಿನಯ್‌ ಕುಲಕರ್ಣಿ ಹೊಸಬಾಂಬ್​​

ಜ್ಯೋತಿರಾದಿತ್ಯ ಸಿಂಧಿಯಾ ಅವರ ಆಪ್ತ ಸಮಂದರ್‌ ಪಟೇಲ್‌ ಪ್ರದೇಶ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷ ಕಮಲ್‌ ಅವರ ನೇತೃತ್ವದಲ್ಲಿ ಶನಿವಾರ ಮರಳಿ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. ಭೋಪಾಲ್‌ನಲ್ಲಿರುವ ಕಾಂಗ್ರೆಸ್‌ ಕಚೇರಿಗೆ ಬೆಂಬಲಿಗರೊಂದಿಗೆ ಭೇಟಿ ನೀಡಿದ ಸಮಂದರ್‌ ಬಳಿಕ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಈ ವೇಳೆ 800ಕ್ಕೂ ಹೆಚ್ಚು ಬೆಂಗಾವಲು ವಾಹನಗಳ ಜೊತೆ ತೆರಳಿ ಗಮನಸೆಳೆದಿದ್ದಾರೆ. ಕಳೆದ ಚುನಾವಣೆಯ ಬಳಿಕ ಬಿಜೆಪಿ ಸರ್ಕಾರ ರಚನೆಯಾಗುವ ಸಮಯದಲ್ಲಿ ಇವರು ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದರು.

ಈ ವೇಳೆ ಮಾತನಾಡಿದ ಕಮಲ್‌ನಾಥ್‌, ‘ಪಟೇಲ್‌ ಅವರು ಯಾವುದೇ ನಿಬಂಧನೆಗಳಿಲ್ಲದೇ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. ಪಕ್ಷದ ಸಿದ್ಧಾಂತ, ಆಚರಣೆ, ನಿಯಮದ ಮೇಲೆ ನಂಬಿಕೆ ಇರಿಸಿ ಅವರು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಅವರ ಸತ್ಯಸಂಧತೆ ಅವರನ್ನು ಇಲ್ಲಿಗೆ ಕರೆತಂದಿದೆ. ಈ ಸತ್ಯವನ್ನು ಅವರು ಅವರ ಕ್ಷೇತ್ರದ ಜನರಿಗೂ ಹೇಳುತ್ತಾರೆ ಎಂದು ನಾನು ನಂಬಿದ್ದೇನೆ. 2018ರಲ್ಲಿ ಜನರ ಆದೇಶವನ್ನು ಧಿಕ್ಕರಿಸಿ ಬಿಜೆಪಿ ಹಣ ನೀಡಿ ಸರ್ಕಾರ ರಚನೆ ಮಾಡಿತು. ಈ ಬಾರಿ ಈ ಭ್ರಷ್ಟಸರ್ಕಾರಕ್ಕೆ ವಿದಾಯ ಹೇಳಲು ಜನ ನಿರ್ಧರಿಸಿದ್ದಾರೆ’ ಎಂದು ಹೇಳಿದರು.

Follow Us:
Download App:
  • android
  • ios