Asianet Suvarna News Asianet Suvarna News

ಪುಲ್ವಾಮಾ ದಾಳಿಯಾಗದಿದ್ದರೆ ಮೋದಿ ಗೆಲ್ಲುತ್ತಿರಲಿಲ್ಲ: ಶಾಸಕ ಬಾಲಕೃಷ್ಣ ಕೀಳು ಹೇಳಿಕೆ

ಪುಲ್ವಾಮಾ ದಾಳಿ ನಡೆಯದಿದ್ದರೆ ಕಳೆದ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿಯವರು ಅಧಿಕಾರಕ್ಕೆ ಬರುತ್ತಿರಲಿಲ್ಲ. ಸೈನಿಕರ ಬಲಿ ಪಡೆದ ಕೀರ್ತಿ ಮೋದಿ ಸರ್ಕಾರಕ್ಕಿದೆ ಎಂದು ಶಾಸಕ ಎಚ್‌.ಸಿ.ಬಾಲಕೃಷ್ಣ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 

Magadi MLA HC Balakrishna Slams On PM Narendra Modi gvd
Author
First Published Nov 28, 2023, 3:30 AM IST

ಮಾಗಡಿ (ನ.28): ಪುಲ್ವಾಮಾ ದಾಳಿ ನಡೆಯದಿದ್ದರೆ ಕಳೆದ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿಯವರು ಅಧಿಕಾರಕ್ಕೆ ಬರುತ್ತಿರಲಿಲ್ಲ. ಸೈನಿಕರ ಬಲಿ ಪಡೆದ ಕೀರ್ತಿ ಮೋದಿ ಸರ್ಕಾರಕ್ಕಿದೆ ಎಂದು ಶಾಸಕ ಎಚ್‌.ಸಿ.ಬಾಲಕೃಷ್ಣ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ತಾಲೂಕಿನ ತೂಬಿನಕೆರೆ ಗ್ರಾಮದಲ್ಲಿ ಸಂವಿಧಾನ ದಿನದ ಅಂಗವಾಗಿ ಡಾ. ಬಿ.ಆರ್.ಅಂಬೇಡ್ಕರ್ ರವರ ಕಂಚಿನ ಪ್ರತಿಮೆ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಈ ದೇಶದಲ್ಲಿ ಅಮಾಯಕ ಸೈನಿಕರ ಬಲಿ ಪಡೆದ ಕೀರ್ತಿ ಮೋದಿ ಸರ್ಕಾರಕ್ಕಿದೆ. ಪುಲ್ವಾಮಾ ದಾಳಿಯಲ್ಲಿ ಸೈನಿಕರನ್ನು ರಕ್ಷಿಸದೇ ಬಲಿ ಪಡೆದು ಅಧಿಕಾರಕ್ಕೆ ಬಂದಿದ್ದಾರೆ ಎಂದರು.

ಇಂಟಿಲಿಜೆಂಟ್ಸ್‌ ವರದಿ ಗೃಹ ಸಚಿವ ಅಮಿತ್ ಶಾ ರವರಿಗೆ ಸಿಗುವುದಿಲ್ಲವೇ?, ಸೈನಿಕರ ಬಲಿಯಾಗುವುದು ತಿಳಿದಿಲ್ಲವೆಂದರೆ ಇವರದು ಮುಟ್ಟಾಳ ಸರ್ಕಾರವೇ ಇರಬೇಕು. ಮೋದಿ ಇನ್ನೊಮ್ಮೆ ಪ್ರಧಾನಿಯಾಗುತ್ತೇನೆ ಎಂದು ಕನಸು ಕಾಣುತ್ತಿದ್ದಾರೆ ಎಂದು ಹೇಳಿದರು. ವಿಪಕ್ಷ ನಾಯಕ ಆರ್.ಅಶೋಕ್ , ನಮ್ಮ ಸರ್ಕಾರ ಜನವರಿಯಲ್ಲಿ ಬೀಳುತ್ತದೆ ಎಂದು ಹೇಳುತ್ತಿದ್ದಾರೆ. 136 ಜನ ಗೆದ್ದಿದ್ದು, ಜನರು ಐದು ವರ್ಷಗಳ ಕಾಲ ಅಧಿಕಾರ ನೀಡಿದ್ದಾರೆ. ವಿರೋಧ ಪಕ್ಷವು ಬಾಯಿ ಮುಚ್ಕೊಂಡು ಇರಬೇಕು, ನಿಮ್ಮ ದುರಾಡಳಿತ ನೋಡಿಯೇ ಜನರು ನಮಗೆ ಆಶೀರ್ವಾದ ಮಾಡಿದ್ದು, ನಾವು ಕೆಲಸ ಮಾಡದಿದ್ದರೆ ಜನರೇ ನಮಗೆ ಉತ್ತರ ಕೊಡುತ್ತಾರೆ ಎಂದು ಅಶೋಕ್ ವಿರುದ್ದ ವಾಗ್ದಾಳಿ ನಡೆಸಿದರು.

ಸಿದ್ದರಾಮಯ್ಯ ಜನತಾದರ್ಶನ ಜಾಹೀರಾತಿಗೆ ಸೀಮಿತ: ಎಚ್‌.ಡಿ.ಕುಮಾರಸ್ವಾಮಿ

ಉತ್ತರ ಪ್ರದೇಶದಲ್ಲಿ ಮಾಜಿ ಮುಖ್ಯಮಂತ್ರಿಯಾಗಿದ್ದ ಮಾಯಾವತಿಯವರನ್ನು ಬಿಜೆಪಿ ನೆಲೆಸಮ ಮಾಡಿದ ರೀತಿಯಲ್ಲಿಯೇ ಕರ್ನಾಟಕದಲ್ಲೂ ಜೆಡಿಎಸ್ ಪಕ್ಷವನ್ನು ನೆಲಸಮ ಮಾಡುತ್ತಾರೆ. ಮುಂದಿನ ದಿನಗಳಲ್ಲಿ ಜೆಡಿಎಸ್‌ ನೆಲಸಮವಾಗದಿದ್ದರೆ ನನ್ನ ಹೆಸರನ್ನು ಬದಲಾಯಿಸಿಕೊಳ್ಳುತ್ತೇನೆ ಎಂದು ಅವರು ಸವಾಲು ಹಾಕಿದರು. ಬಿಜೆಪಿಯವರು ಬ್ರಿಟಿಷರಿದ್ದಂತೆ. ಯಾರು ಪ್ರಬಲರಿರುತ್ತಾರೋ ಅವರ ಮಧ್ಯೆ ಒಡೆದಾಳುವ ನೀತಿ ಅನುಸರಿಸಿ ಅವರನ್ನು ನೆಲಸಮ ಮಾಡುತ್ತಾರೆ. ಅದೇ ರೀತಿ, ಜೆಡಿಎಸ್ ತನ್ನ ಅಸ್ತಿತ್ವವನ್ನೇ ಕಳೆದುಕೊಳ್ಳಬೇಕಾಗುತ್ತದೆ. ಇದನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು ಅರಿಯಬೇಕು. ಜಾತ್ಯತೀತ ಎಂದು ಹೇಳುತ್ತಿದ್ದ ಜೆಡಿಎಸ್, ದೇವೇಗೌಡರು ಈಗ ಕುಮಾರಸ್ವಾಮಿಯವರಿಂದ ಕೋಮುವಾದಿಗಳಾಗಿದ್ದಾರೆ ಎಂದು ಕಿಡಿ ಕಾರಿದರು.

Follow Us:
Download App:
  • android
  • ios