ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್‌ ಶಿಂಧೆ ನೇತೃತ್ವದ ಶಿವಸೇನೆ ಬಣದ 40 ಶಾಸಕರು ಹಾಗೂ ಮಾಜಿ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಬಣದ 14 ಶಾಸಕರಿಗೆ ವಿಧಾನಸಭೆ ಸ್ಪೀಕರ್‌ ರಾಹುಲ್‌ ನಾರ್ವೇಕರ್‌ ನಿಮ್ಮನ್ನೇಕೆ ಅನರ್ಹಗೊಳಿಸಬಾರದು? ಎಂದು ಕೇಳಿ ನೋಟಿಸ್‌ ಜಾರಿಗೊಳಿಸಿದ್ದಾರೆ.

ಮುಂಬೈ: ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್‌ ಶಿಂಧೆ ನೇತೃತ್ವದ ಶಿವಸೇನೆ ಬಣದ 40 ಶಾಸಕರು ಹಾಗೂ ಮಾಜಿ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಬಣದ 14 ಶಾಸಕರಿಗೆ ವಿಧಾನಸಭೆ ಸ್ಪೀಕರ್‌ ರಾಹುಲ್‌ ನಾರ್ವೇಕರ್‌ ನಿಮ್ಮನ್ನೇಕೆ ಅನರ್ಹಗೊಳಿಸಬಾರದು? ಎಂದು ಕೇಳಿ ನೋಟಿಸ್‌ ಜಾರಿಗೊಳಿಸಿದ್ದಾರೆ. ಸ್ವತಃ ಮುಖ್ಯಮಂತ್ರಿ ಶಿಂಧೆ ಹಾಗೂ ಉದ್ಧವ್‌ ಪುತ್ರ ಆದಿತ್ಯ ಠಾಕ್ರೆಗೂ ನೋಟಿಸ್‌ ನೋಡಲಾಗಿದೆ.

ಶಿಂಧೆ ಬಣದ ಶಾಸಕರು ಉದ್ಧವ್‌ ಠಾಕ್ರೆ ವಿರುದ್ಧ ಬಂಡೆದ್ದು ಬಿಜೆಪಿ ಜೊತೆ ಸೇರಿ ಸರ್ಕಾರ ರಚಿಸಿದ ಬಳಿಕ ಉದ್ಧವ್‌ ಬಣದ ಶಿವಸೇನೆಯಿಂದ ಈ 40 ಶಾಸಕರನ್ನು ಪಕ್ಷಾಂತರ ನಿಷೇಧ ಕಾಯ್ದೆಯಡಿ ಅನರ್ಹಗೊಳಿಸಬೇಕು ಎಂದು ಸ್ಪೀಕರ್‌ಗೆ ಅರ್ಜಿ ಸಲ್ಲಿಸಲಾಗಿತ್ತು. ಬಳಿಕ ತಮ್ಮದೇ ಮೂಲ ಶಿವಸೇನೆ ಎಂದು ಹೇಳಿಕೊಂಡ ಶಿಂಧೆ ಬಣದಿಂದ ಉದ್ಧವ್‌ ಬಣದ ಶಾಸಕರನ್ನು ವಿಧಾನಸಭೆಯ ಸದಸ್ಯತ್ವದಿಂದ ಅನರ್ಹಗೊಳಿಸುವಂತೆ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಆ ಮನವಿಗಳಿಗೆ ಉತ್ತರಿಸುವಂತೆ ಸ್ಪೀಕರ್‌ ಈಗ ನೋಟಿಸ್‌ ಜಾರಿಗೊಳಿಸಿದ್ದಾರೆ.

ಬಿಜೆಪಿಗರು 75ಕ್ಕೆ ನಿವೃತ್ತಿ ಆಗ್ತಾರೆ, ನಿಮ್ದು 83 ಆಯ್ತು, ಇನಿಂಗ್ಸ್‌ ಮುಗಿಸಿ: ಶರದ್‌ ಪವಾರ್‌ಗೆ ಅಜಿತ್‌ ಟಾಂಗ್‌

ತಾವು ನೀಡಿದ ಮನವಿಯನ್ವಯ ಸ್ಪೀಕರ್‌ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ಕಳೆದ ವಾರವಷ್ಟೇ ಉದ್ಧವ್‌ ಬಣದ ಶಿವಸೇನೆ ಸುಪ್ರೀಂಕೋರ್ಟ್‌ಗೆ ಹೋಗಿತ್ತು. ಈ ಮಧ್ಯೆ, ಶುಕ್ರವಾರವಷ್ಟೇ ಸ್ಪೀಕರ್‌ ರಾಹುಲ್‌ ನಾರ್ವೇಕರ್‌ ತಮಗೆ ಚುನಾವಣಾ ಆಯೋಗದಿಂದ ಶಿವಸೇನೆಯ ಸಂವಿಧಾನದ ಪ್ರತಿ ಲಭಿಸಿದೆ ಎಂದು ಹೇಳಿಕೊಂಡಿದ್ದರು. ಅದರ ಬೆನ್ನಲ್ಲೇ ನೋಟಿಸ್‌ಗಳು ಜಾರಿಯಾಗಿವೆ.

ಶಿವಸೇನೆ ಬಳಿಕ ಎನ್‌ಸಿಪಿಯೂ ಹೋಳು: ಮಹಾರಾಷ್ಟ್ರದಲ್ಲಿ ಮತ್ತೆ ರಾಜಕೀಯ ಕ್ಷಿಪ್ರಕ್ರಾಂತಿ; ವಿಪಕ್ಷಗಳ ಮೈತ್ರಿಕೂಟಕ್ಕೆ ಹಿನ್ನಡೆ