ಬರೆದಿಟ್ಟುಕೊಳ್ಳಿ, ತಿಂಗಳಲ್ಲಿ ಶಿಂಧೆ ಮಾಜಿ ಆಗ್ತಾರೆ: ಎಂ.ಬಿ.ಪಾಟೀಲ್‌

ಲೋಕಸಭೆ ಚುನಾವಣೆಯ ಬಳಿಕ ಕರ್ನಾಟಕ ಸರ್ಕಾರ ಉರುಳಿ ಬೀಳಲಿದೆ ಎನ್ನುತ್ತಿರುವ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂಧೆ ಮೊದಲು ಸಂವಿಧಾನ ಮತ್ತು ಪಕ್ಷಾಂತರ ನಿಷೇಧ ಕಾಯ್ದೆಯನ್ನು ಅರ್ಥ ಮಾಡಿಕೊಳ್ಳಲಿ. ಬರೆದಿಟ್ಟುಕೊಳ್ಳಿ, ಒಂದು ತಿಂಗಳ ಅವಧಿಯಲ್ಲಿ ಏಕನಾಥ ಶಿಂಧೆ ಅವರು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಹೇಳಿದ ಸಚಿವ ಎಂ.ಬಿ.ಪಾಟೀಲ್‌ 

Maharashtra CM Eknath Shinde will become former in the month Says Minister MB Patil grg

ಬೆಂಗಳೂರು(ಮೇ.14): ಬೀಳಲಿರುವುದು ಕಾಂಗ್ರೆಸ್ ಪಕ್ಷದ ರಾಜ್ಯ ಸರ್ಕಾರವಲ್ಲ. ಬದಲಿಗೆ ಈ ಲೋಕಸಭಾ ಚುನಾವಣೆ ನಂತರ ಏಕನಾಥ ಶಿಂಧೆ ಅವರ ಮಹಾರಾಷ್ಟ್ರ ಸರ್ಕಾರವೇ ಪತನವಾಗಲಿದೆ ಎಂದು ಬಹೃತ್‌ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಭವಿಷ್ಯ ನುಡಿದಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಯ ಬಳಿಕ ಕರ್ನಾಟಕ ಸರ್ಕಾರ ಉರುಳಿ ಬೀಳಲಿದೆ ಎನ್ನುತ್ತಿರುವ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂಧೆ ಮೊದಲು ಸಂವಿಧಾನ ಮತ್ತು ಪಕ್ಷಾಂತರ ನಿಷೇಧ ಕಾಯ್ದೆಯನ್ನು ಅರ್ಥ ಮಾಡಿಕೊಳ್ಳಲಿ. ಬರೆದಿಟ್ಟುಕೊಳ್ಳಿ, ಒಂದು ತಿಂಗಳ ಅವಧಿಯಲ್ಲಿ ಏಕನಾಥ ಶಿಂಧೆ ಅವರು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಹೇಳಿದರು.

ಮಹಾ ಸಿಎಂ ಶಿಂಧೆ, ಶಿವಸೈನಿಕರ ಅನರ್ಹತೆ: ಮಹಾ ಸ್ಪೀಕರ್‌ಗೆ ಸುಪ್ರೀಂ ನೋಟಿಸ್‌

ಲೋಕಸಭಾ ಚುನಾವಣೆ ನಂತರ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ 20 ಶಾಸಕರು ಕಾಂಗ್ರೆಸ್ಸನ್ನು ಸೇರಲಿದ್ದು, ಅವರೆಲ್ಲರೂ ನಮ್ಮ ಸಂಪರ್ಕದಲ್ಲಿ ಇದ್ದಾರೆ. ಸರ್ಕಾರ ಬೀಳಿಸಲು ಇದು ಮಹಾರಾಷ್ಟ್ರವಲ್ಲ. ಜೂನ್ ಮೊದಲ ವಾರದ ನಂತರ ಶಿಂಧೆ ಅವರ ಸರ್ಕಾರವೇ ಪತನವಾಗಿ, ಅವರೇ ಮಾಜಿ ಆಗಲಿದ್ದಾರೆ. ರಾಜ್ಯದಲ್ಲಿ ನಾವು 136 ಶಾಸಕರಿದ್ದೇವೆ. ಪಕ್ಷಾಂತರ ನಿಷೇಧ ಕಾಯ್ದೆಯಿಂದ ಪಾರಾಗಲು ನಮ್ಮ 89 ಶಾಸಕರು ಬಿಜೆಪಿಗೆ ಹೋಗಬೇಕು. ಈಗ ಬೇರೆ ಪಕ್ಷಕ್ಕೆ ಹೋಗುವ ದಡ್ಡರು ಯಾರೂ ಇಲ್ಲ ಎಂದು ವ್ಯಂಗ್ಯವಾಡಿದರು.

ಏಕನಾಥ ಶಿಂಧೆಗೆ ಶಕ್ತಿ ಇದ್ದರೆ ನಮ್ಮ ಐದು ಶಾಸಕರನ್ನು ಮೊದಲು ತಮ್ಮತ್ತ ಸೆಳೆದುಕೊಂಡು ತೋರಿಸಲಿ. ಇನ್ನು ಒಂದೆರಡು ತಿಂಗಳಲ್ಲಿ ಆ ರಾಜ್ಯದಲ್ಲಿ ಶರದ್ ಪವಾರ್ ಮತ್ತು ಉದ್ಧವ್ ಠಾಕ್ರೆ ನೇತೃತ್ವದಲ್ಲಿ ಮಹಾವಿಕಾಸ ಅಘಾಡಿ ಮೈತ್ರಿಕೂಟದ ಸರ್ಕಾರ ಬರಲಿದೆ ಎಂದು ಹೇಳಿದರು.

Latest Videos
Follow Us:
Download App:
  • android
  • ios