ಪ್ರಧಾನಿ ಮೋದಿ ಆಡಳಿತದ ಪಿಕ್ಚರ್‌ ಇನ್ನೂ ಬಾಕಿ ಇದೆ: ದೇವೇಂದ್ರ ಫಡ್ನವಿಸ್‌

ಕಳೆದ 10 ವರ್ಷಗಳಲ್ಲಿ ದೇಶದಲ್ಲಿ ನಡೆದದ್ದು ಟ್ರೈಲರ್‌, ಪಿಕ್ಟರ್‌ ಇನ್ನೂ ಬಾಕಿ ಇದೆ ಎಂದು ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಇನ್ನೂ 10 ವರ್ಷ ಕಾಲ ದೇಶವನ್ನು ಆಳುತ್ತಾರೆ ಎಂಬ ಆಶಾಭಾವವನ್ನು ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವಿಸ್‌ ವ್ಯಕ್ತಪಡಿಸಿದರು.

Maharashtra DCM Devendra Fadnavis Talks Over PM Narendra Modi gvd

ಮಂಗಳೂರು (ಮಾ.13): ಕಳೆದ 10 ವರ್ಷಗಳಲ್ಲಿ ದೇಶದಲ್ಲಿ ನಡೆದದ್ದು ಟ್ರೈಲರ್‌, ಪಿಕ್ಟರ್‌ ಇನ್ನೂ ಬಾಕಿ ಇದೆ ಎಂದು ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಇನ್ನೂ 10 ವರ್ಷ ಕಾಲ ದೇಶವನ್ನು ಆಳುತ್ತಾರೆ ಎಂಬ ಆಶಾಭಾವವನ್ನು ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವಿಸ್‌ ವ್ಯಕ್ತಪಡಿಸಿದರು. ಮಂಗಳೂರಿನ ಸಂಘನಿಕೇತನದಲ್ಲಿ ದ.ಕ.ಜಿಲ್ಲಾ ಮಟ್ಟದ ಬಿಜೆಪಿ ಬೂತ್‌ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು. 2024ರಿಂದ 2029ರ ವರೆಗೂ ಮೋದಿಯೇ ರಾಷ್ಟ್ರದ ನಾಯಕ. ಕಳೆದ 10 ವರ್ಷದ ಅವಧಿಯಲ್ಲಿ ನೂರು ವರ್ಷದ ಸಾಧನೆ ಮಾಡಿದ್ದಾರೆ. 

ಮುಂದೆ ವಿಶ್ವದಲ್ಲಿ ಭಾರತ ಮೂರನೇ ಆರ್ಥಿಕತೆ ಹೊಂದಿದ ದೇಶವಾಗಲಿದೆ ಎಂದು ಮೋದಿ ಆಡಳಿತವನ್ನು ಬಣ್ಣಿಸಿದರು. 2024ರ ಚುನಾವಣೆ ಹೊಸ ಇತಿಹಾಸ ನಿರ್ಮಿಸುವ ಚುನಾವಣೆ. ನಾವು ಸರ್ಕಾರಗಳನ್ನು ಐದು ವರ್ಷಗಳಿಗೊಮ್ಮೆ ಚುನಾಯಿಸುತ್ತೇವೆ. ಆದರೆ ಮೋದಿ 10 ವರ್ಷಗಳಲ್ಲಿ ನೂರು ವರ್ಷದ ಕೆಲಸ ಮಾಡಿದ್ದಾರೆ. ಮೋದಿ ಗ್ಯಾರಂಟಿ ಕಾಂಗ್ರೆಸ್‌ನ ಗ್ಯಾರಂಟಿಗಳಲ್ಲ, ಕರ್ನಾಟಕದಲ್ಲಿ ಕಾಂಗ್ರೆಸ್ ಕೊಟ್ಟಿರುವ ಗ್ಯಾರಂಟಿಗಳು ಯಾವುದೂ ಪೂರ್ಣವಾಗಿಲ್ಲ. ಜನರನ್ನು ಮೂರ್ಖರನ್ನಾಗಿ ಮಾಡಿ ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದಿದೆ. 

ಮೋದಿ ಗ್ಯಾರಂಟಿ ಎನ್ನುವುದೇ ಗ್ಯಾರಂಟಿಗಳ ಮಹಾ ಗ್ಯಾರಂಟಿ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌ ಬಣ್ಣಿಸಿದ್ದಾರೆ. ಕರ್ನಾಟಕದಲ್ಲಿ ದೇಶ ವಿರೋಧಿ ಜನರಿಗೆ ಸಿದ್ದರಾಮಯ್ಯ ಸರ್ಕಾರ ಬೆಂಬಲ ಕೊಡುತ್ತಿದೆ. ಪಾಕಿಸ್ತಾನ ಪರ ಘೋಷಣೆ ಕೂಗುವವರನ್ನು ಬೆಂಬಲಿಸುವ ಸರ್ಕಾರ ಎಂಥದ್ದು? ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ದೇಶವಿರೋಧಿಗಳಿಗೆ ಬಲ ಬಂದಿದೆ. ವೋಟ್ ಬ್ಯಾಂಕ್‌ಗಾಗಿ ದೇಶದ್ರೋಹಿಗಳನ್ನು ಯಾರೂ ಬೆಂಬಲಿಸಬಾರದು. ಯಾವುದೇ ದೇಶ ವಿರೋಧಿ ಘಟನೆಗಳನ್ನು ಆಯಾ ಸರ್ಕಾರಗಳು ಖಂಡಿಸಬೇಕು ಎಂದು ಹೇಳಿದರು.

ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಮೆದುಳು ಕೇಂದ್ರ ಶುರು: ಸಚಿವ ದಿನೇಶ್ ಗುಂಡೂರಾವ್‌

ಬೆಂಗಳೂರಿನಲ್ಲಿ ಬಾಂಬ್ ಸ್ಫೋಟ ಆಗಿದೆ. ನಾವು ಬಿಜೆಪಿಗೆ ಮತ ನೀಡುತ್ತಿಲ್ಲ, ಭಾರತಕ್ಕಾಗಿ ಮತ ಚಲಾಯಿಸುತ್ತೇವೆ ಎಂದು ನೆನಪಿರಬೇಕು. ನರೇಂದ್ರ ಮೋದಿ ನಾಯಕತ್ವದಲ್ಲಿ ನಾವು ಉತ್ತರ ಕೊಡಬೇಕಿದೆ. ಬೂತ್ ಮಟ್ಟದಲ್ಲಿ ನಾವು ಪಕ್ಷವನ್ನು ಗಟ್ಟಿ ಮಾಡಬೇಕು. ಪ್ರತಿ ಬೂತ್‌ಗಳಲ್ಲಿ ಮೋದಿ ಸರ್ಕಾರದ ಫಲಾನುಭವಿಗಳನ್ನು ಭೇಟಿ ಮಾಡಬೇಕು. ಕೇಂದ್ರದ ಫಲಾನುಭವ ಪಡೆದ ಅವರು ನಮಗೂ ಫಲ ನೀಡುವಂತೆ ಕೋರಿಕೊಳ್ಳಬೇಕು ಎಂದು ಹೊಗಳಿದರು.

Latest Videos
Follow Us:
Download App:
  • android
  • ios