ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಅಘಾಡಿ 162+ ಸ್ಥಾನ ಗೆದ್ದು ಸರ್ಕಾರ ರಚನೆ: ಡಾ.ಜಿ. ಪರಮೇಶ್ವರ್ ಭವಿಷ್ಯ!

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಮಹಾ ವಿಕಾಸ್ ಅಘಾಡಿ ಮೈತ್ರಿಕೂಟ 162ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಸರ್ಕಾರ ರಚಿಸಲಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಭವಿಷ್ಯ ನುಡಿದಿದ್ದಾರೆ.

Maharashtra election 2024 Maha Vikas Aghadi will form government says dr g Parameshwara sat

ಮುಂಬೈ (ನ.15): ಮಹಾರಾಷ್ಟ್ರದ ವಿಧಾನಸಭಾ ಚುನಾವಣೆಯಲ್ಲಿ ಮಹಾ ವಿಕಾಸ್ ಅಘಾಡಿ ಮೈತ್ರಿಕೂಟವು ಹೆಚ್ಚು ಸ್ಥಾನಗಳನ್ನು ಗೆದ್ದು, ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಮಾಡಲಿದೆ ಎಂದು ಹೇಳುವ ಮೂಲಕ ಕರ್ನಾಟಕ ಗೃಹ ಸಚಿವ ಡಾ. ಜಿ.ಪರಮೇಶ್ವರ  ಅವರು ಮಹಾರಾಷ್ಟ್ರ ರಾಜಕೀಯ ಭವಿಷ್ಯವನ್ನು ನುಡಿದಿದ್ದಾರೆ.

ಮುಂಬೈ ಪ್ರದೇಶ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಆಂತರಿಕ ಸಮೀಕ್ಷೆಯ ಪ್ರಕಾರ ಮಹಾರಾಷ್ಟ್ರ ಚುನಾವಣೆಯಲಿ ಮಹಾ ವಿಕಾಸ್ ಅಘಾಡಿ ಮೈತ್ರಿಕೂಟವು 162ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ. ನಾವೇ ಸರ್ಕಾರ ರಚನೆ ಮಾಡಲಿದ್ದೇವೆ. ಏಕನಾಥ್ ಶಿಂಧೆ ಹಾಗೂ ದೇವೇಂದ್ರ ಫಡ್ನಾವಿಸ್ ಅವರು ಮಹಾರಾಷ್ಟ್ರದಲ್ಲಿ ಕಾನೂನು ಸುವ್ಯವಸ್ಥೆಯನ್ನು ಸಂಪೂರ್ಣವಾಗಿ ಹಾಳು ಮಾಡಿದ್ದಾರೆ. ಡ್ರಗ್ಸ್ ದಂಧೆ, ಮಹಿಳೆಯರ ನೇಲಿನ ದೌರ್ಜನ್ಯ, ಕೊಲೆ ಹೆಚ್ಚಾಗಿವೆ. ಮುಂಬೈ ನಗರದಲ್ಲಿ ಮಹಿಳಾ ಸುರಕ್ಷತೆಗೆ ಒತ್ತು ನೀಡಿಲ್ಲ. ಕೇಂದ್ರ ಸರ್ಕಾರ ನಿರ್ಭಯಾ ಯೋಜನೆಯಡಿ ನೀಡಿದ ಅನುದಾನವನ್ನು ಸಮರ್ಪಕವಾಗಿ ಬಳಸಿಲ್ಲ. ಹೀಗಾಗಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಮಹಾರಾಷ್ಟ್ರವನ್ನು ಎರಡನೇ ಸ್ಥಾನಕ್ಕೆ ತಂದು ನಿಲ್ಲಿಸಿದ್ದಾರೆ ಎಂದರು.

ಡ್ರಗ್ ದಂಧೆಯನ್ನು ನಿಯಂತ್ರಿಸುವಲ್ಲಿ ಮಹಾರಾಷ್ಟ್ರ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಯುವಕರು ದೊಡ್ಡಮಟ್ಟದಲ್ಲಿ ಮಾದಕ ದ್ರವ್ಯ ವ್ಯಸನಕ್ಕೆ ಬಲಿಯಾಗುತ್ತಿದ್ದಾರೆ. ಬಾಬಾ ಸಿದ್ಧಿಕಿ ಹತ್ಯೆ ಪ್ರಕರಣವು ಜನರ ಸುರಕ್ಷತೆಯ ಪ್ರಶ್ನೆಯನ್ನು ಹುಟ್ಟುಹಾಕಿದೆ. ಮುಂಬೈನಲ್ಲಿ ನಡೆಯುವ ಹಿಂಸಾತ್ಮಕ ಅಪರಾಧಗಳು ಜನರಲ್ಲಿ ಆತಂಕ ಹುಟ್ಟಿಸಿದೆ. ಮಹಾರಾಷ್ಟ್ರದ ಈ ದುಸ್ಥಿತಿಗೆ ಕಾರಣರಾದ ಬಿಜೆಪಿ ನಾಯಕರು ತಕ್ಕ ಪ್ರತಿಫಲ ಅನುಭವಿಸಲಿದ್ದಾರೆ ಎಂದು ಎಚ್ಚರಿಸಿದರು.

ಇದನ್ನೂ ಓದಿ: ಹಗರಣಗಳ ಮುಚ್ಚಿಕೊಳ್ಳಲು ಸಿಎಂ, ಡಿಸಿಎಂರಿಂದ ಆಪರೇಷನ್ ಕಮಲದ ಸುಳ್ಳು ಆರೋಪ: ಸಂಸದ ಯದುವೀರ್ ಒಡೆಯರ್

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಘೊಷಣೆಯಾದ ಬಳಿಮ ಮುಂಬೈ ಮತ್ತು ಕೊಂಕಣದಲ್ಲಿ ನಾನು ಪ್ರವಾಸ ಕೈಗೊಂಡು ಕೆಲವು ಅವಲೋಕನಗಳನ್ನು ಮಾಡಿದ್ದೇನೆ. ಹಿಂದಿನ ಸರ್ಕಾರವು ಮಹಾರಾಷ್ಟ್ರದ ಅತ್ಯಂತ ಭ್ರಷ್ಟ ಸರ್ಕಾರವಾಗಿದೆ ಎಂಬುದು ಸ್ಥಳೀಯ ಜನರ ಮಾತಾಗಿದೆ. ಏಕ್‌ನಾಥ್ ಶಿಂಧೆ, ಉಪಮುಖ್ಯಮಂತ್ರಿ ದೇವೇಂದ್ರ ಫಡ್ನಾವಿಸ್ ಅವರು ಬಡವರ ಪರವಾಗಿ ಆಡಳಿತವನ್ನು ನೀಡಿಲ್ಲ. ಉಳ್ಳವರ‌ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿದ್ದಾರೆ.  ಇನ್ನು ದೇವೇಂದ್ರ ಫಡ್ನವಿಸ್ ಅವರು ಆಂಬ್ಯುಲೆನ್ಸ್‌ ಖರೀದಿಗೆ ರೂ. 8 ಸಾವಿರ ಕೋಟಿಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. 5 ಲಕ್ಷ ಯುವಕರಿಗೆ ಉದ್ಯೋಗ ನೀಡುವ ಭರವಸೆವನ್ನು ಈಡೇರಿಸಿಲ್ಲ. ಮಹಾರಾಷ್ಟ್ರದ ಅಭಿವೃದ್ಧಿಯ ಅನುದಾನವನ್ನು ಗುಜುರಾತ್‌ಗೆ ಸಾಗಿಸುತ್ತಿದ್ದಾರೆ. ಮಹಾರಾಷ್ಟ್ರದ ನಾಗರಿಕರ ಸುರಕ್ಷತೆಯ ಬಗ್ಗೆ ಸರ್ಕಾರಕ್ಕೆ ಕಿಂಚಿತ್ತು ಕಾಳಜಿ ಇಲ್ಲ‌‌ ಎಂದು ಕಿಡಿಕಾರಿದರು.

ಪ್ರಧಾನಿ ಮೋದಿ ಸುಳ್ಳು ಆಪಾದನೆ: 2023ರ ಕರ್ನಾಟಕ ವಿಧಾನಸಭಾ ಚುನಾವಣೆ ಪ್ರಣಾಳಿಕೆಯಲ್ಲಿ ಮಹಿಳೆಯರು, ಬಡವರ  ಅಭಿವೃದ್ಧಿಗೆ ಐದು ಗ್ಯಾರಂಟಿ ಯೋಜ‌ನೆಗಳನ್ನು ನೀಡುವುದಾಗಿ ಭರವಸೆ ನೀಡಿದ್ದೆವು. ಸರ್ಕಾರ ಅಸ್ಥಿತ್ವಕ್ಕೆ ಬಂದ‌ ಕೂಡಲೇ ಗೃಹಲಕ್ಷ್ಮೀ ಯೋಜನೆಯಡಿ ಮಹಿಳೆಯರಿಗೆ 2000 ರೂ, 200 ಯೂನಿಟ್ ಉಚಿತ ವಿದ್ಯುತ್, ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣ, ಅನ್ನಭಾಗ್ಯ ಯೋಜನೆಯಡಿ 10 ಕೆ.ಜಿ. ಅಕ್ಕಿ ಹಾಗೂ ನಿರುದ್ಯೋಗಿ ಯುವಕರಿಗೆ ಯುವನಿಧಿ ಯೋಜನೆಯಡಿ 3 ಸಾವಿರ ರೂ. ನೀಡುತ್ತಿದ್ದೇವೆ. ಕಳೆದ ಬಜೆಟ್‌ನಲ್ಲಿ ಗ್ಯಾರಂಟಿ ಯೋಜನೆಗಳಿಗೆ ರೂ. 56 ಸಾವಿರ ಕೋಟಿ ಮೀಸಲಿಟ್ಟಿದ್ದೇವೆ ಎಂದು ತಿಳಿಸಿದರು.

ಇದನ್ನೂ ಓದಿ: ಕನ್ನಡ ನಾಡು, ನುಡಿ ಮೇಲಿನ ಪ್ರೀತಿಗಾಗಿ ಮಗಳಿಗೆ 'ಭುವನೇಶ್ವರಿ' ಎಂದು ಹೆಸರಿಟ್ಟು, ಊರಿಗೆ ಊಟ ಹಾಕಿಸಿದ ದಂಪತಿ!

Latest Videos
Follow Us:
Download App:
  • android
  • ios