ಚುನಾವಣೆ ವೇಳೆಲಿ ಮಾತ್ರ ಹನುಮಾನ ಚಾಲೀಸಾ ಪಠಿಸುವ ಬಿಜೆಪಿ: ಅಶೋಕ ಚೌವ್ಹಾಣ್
ಅಭಿವೃದ್ಧಿ ಪಕಕ್ಕಿಟ್ಟು ಧರ್ಮದ ಹೆಸರಿನಲ್ಲಿ ಮತ ಕೇಳುತ್ತಿರುವ ಬಿಜೆಪಿ: ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಚೌವ್ಹಾಣ್ ಕಿಡಿ
ಬೆಳಗಾವಿ(ಮೇ.06): ಭಜರಂಗದಳ ನಿಷೇಧ ಮಾಡುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇರುವುದಿಲ್ಲ. ಅದು ಕೇಂದ್ರ ಸರ್ಕಾರಕ್ಕೆ ಇರುತ್ತದೆ. ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಅಶೋಕ ಚೌವ್ಹಾಣ್ ಹೇಳಿದರು. ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹನುಮಾನ ಚಾಲೀಸಾ ಪಠಣ ನಾವು ಮನೆಯಲ್ಲಿ ಮಾಡುತ್ತೇವೆ. ಬಿಜೆಪಿಯವರಿಗೆ ಚುನಾವಣೆಯಲ್ಲಿ ಮಾತ್ರ ಹನುಮಾನ ಚಾಲೀಸಾ ಪಠಣ ಮಾಡುವುದು ಏಕೆ ಎಂದು ಪ್ರಶ್ನಿಸಿದರು.
ಕರ್ನಾಟಕವನ್ನು ಕೈಗಾರಿಕಾ ಕ್ಷೇತ್ರ, ಐಟಿ ಹಬ್ ಎಂದು ಕರೆಯುತ್ತೇವೆ. ಇಲ್ಲಿ ಜಾತಿ ಸಂಘರ್ಷ, ಗಲಾಟೆಯಾಗುವುದು ರಾಜ್ಯದ ಅಭಿವೃದ್ಧಿಗೆ ಕುಂಠಿತವಾಗುವ ವಿಷಯ. ರಾಜ್ಯದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಈಗಾಗಲೇ 40 ಪರ್ಸೆಂಟ್ ಕಮೀಷನ್ ಆರೋಪ ಇದೆ. ಬಿಜೆಪಿ ದುರಾಡಳಿತದಿಂದ ಕರ್ನಾಟಕದ ಜನತೆ ಬೇಸತ್ತಿದ್ದಾರೆ. ಜನರು ಅಭಿವೃದ್ಧಿ ವಿಷಯದ ಬಗ್ಗೆ ಮಾತನಾಡುವವರಿಗೆ ಮತ ನೀಡಿ ಗೆಲ್ಲಿಸುವ ಪಣ ತೊಟ್ಟಿದ್ದಾರೆ. ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ತಿಳಿಸಿದರು.
ಬಿಜೆಪಿ ವ್ಯಕ್ತಿ ಪೂಜೆಯ ಪಕ್ಷವಲ್ಲ; ದೇಶ ಪೂಜಿಸುವ ಪಕ್ಷ: ರಮೇಶ್ ಕತ್ತಿ
ಕೇಂದ್ರ ಮತ್ತು ಕರ್ನಾಟಕದಲ್ಲಿ ಬಿಜೆಪಿ ಡಬಲ್ ಎಂಜಿನ್ ಸರ್ಕಾರವಿದೆ. ಅಭಿವೃದ್ಧಿ ವಿಚಾರ ಪಕ್ಕಕ್ಕಿಟ್ಟು ಜಾತಿ ಮತ್ತು ಧರ್ಮದ ಹೆಸರಿನಲ್ಲಿ ಮತ ಕೇಳುತ್ತಿರುವುದು ದುರ್ದೈವದ ಸಂಗತಿ. ಮೀಸಲಾತಿ ಘೋಷಣೆ ಮಾಡಿರುವ ಕುರಿತು ಮಾತನಾಡುವ ಬಿಜೆಪಿ ಲಿಂಗಾಯತ, ಒಕ್ಕಲಿಗ ಸಮುದಾಯಕ್ಕೆ ಸರಿಯಾದ ನ್ಯಾಯ ಸಿಕ್ಕಿಲ್ಲ. ಅದರಲ್ಲಿಯೂ ಮುಸ್ಲಿಮರ ಮೀಸಲಾತಿ ಕಸೆದುಕೊಂಡು ಬೇರೆಯವರಿಗೆ ನೀಡುವುದು ಎಷ್ಟುಸರಿ ಎಂದು ಪ್ರಶ್ನಿಸಿದರು.
ನಾವು ಕರ್ನಾಟಕದಲ್ಲಿ ಎನ್‌ಸಿಪಿ, ಎಂಇಎಸ್, ಶಿವಸೇನಾದೊಂದಿಗೆ ರಾಜ್ಯದಲ್ಲಿ ಹೊಂದಾಣಿಕೆ ಮಾಡಿಕೊಂಡು ಚುನಾವಣೆ ನಡೆಸುವ ಅವಶ್ಯಕತೆ ಇಲ್ಲ. ಕಾಂಗ್ರೆಸ್ ರಾಷ್ಟ್ರೀಯ ಪಕ್ಷ. ಕರ್ನಾಟಕದಲ್ಲಿ ಕಾಂಗ್ರೆಸ್ ಪರ ಅಲೆ ಇದೆ. ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸ್ಪಷ್ಟಬಹುಮತದೊಂದಿಗೆ ಸರ್ಕಾರ ರಚನೆಯಾಗಲಿದೆ. ಕಾಂಗ್ರೆಸ್ ಚುನಾವಣೆಯಲ್ಲಿ 5 ಪ್ರಮುಖ ಯೋಜನೆಗಳನ್ನು ಪ್ರಣಾಳಿಕೆಯಲ್ಲಿ ನೀಡಿದೆ. ಉಚಿತ ವಿದ್ಯುತ್, ಗೃಹ ಲಕ್ಷ್ಮೇ ಅನ್ನಭಾಗ್ಯ, ನಿರುದ್ಯೋಗ ಯುವಕರಿಗೆ ಭತ್ಯೆ ಸೇರಿದಂತೆ ಸಾಕಷ್ಟುಯೋಜನೆಯನ್ನು ಘೋಷಣೆ ಮಾಡಿದೆ. ಇದನ್ನು ಇಂತಿಷ್ಟುಕಾಲದಲ್ಲಿ ಪೂರ್ಣಗೊಳಿಸುವ ಭರವಸೆಯನ್ನು ಕಾಂಗ್ರೆಸ್ ನೀಡಿದ್ದು, ಜನರು ಕಾಂಗ್ರೆಸ್ ಮೇಲೆ ವಿಶ್ವಾಸ ಇಟ್ಟಿದ್ದಾರೆ. ಆದರೆ, ಬಿಜೆಪಿ ಇದರ ವಿರುದ್ಧವಾಗಿ ನಡೆಯುತ್ತಿದೆ ಎಂದು ದೂರಿದರು.
ಕರ್ನಾಟಕದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರ ನಿಶ್ಚಿತ: ಮಹಾರಾಷ್ಟ್ರ ಡಿಸಿಎಂ ಫಡ್ನವೀಸ್
ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ವಿನಯ ನಾವಲಗಟ್ಟಿ, ಜಯಶ್ರೀ ಮಾಳಗಿ ಮೊದಲಾದವರು ಉಪಸ್ಥಿತರಿದ್ದರು.
ರಾಜ್ಯದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಈಗಾಗಲೇ 40 ಪರ್ಸೆಂಟ್ ಕಮೀಷನ್ ಆರೋಪ ಇದೆ. ಬಿಜೆಪಿ ದುರಾಡಳಿತದಿಂದ ಕರ್ನಾಟಕ ರಾಜ್ಯದ ಜನತೆ ಬೇಸತ್ತಿದ್ದಾರೆ. ಜನರು ಅಭಿವೃದ್ಧಿ ವಿಷಯದ ಬಗ್ಗೆ ಮಾತನಾಡುವವರಿಗೆ ಮತ ನೀಡಿ ಗೆಲ್ಲಿಸುವ ಪಣ ತೊಟ್ಟಿದ್ದಾರೆ. ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ ಅಂತ ಮಹಾರಾಷ್ಟ್ರ ಮಾಜಿ ಸಿಎಂ ಅಶೋಕ ಚೌವ್ಹಾಣ್ ತಿಳಿಸಿದ್ದಾರೆ.