"

ಮುಂಬೈ[ನ.23]: ಮಹಾರಾಷ್ಟ್ರ ರಾಜಕೀಯ ರೋಚಕ ತಿರುವು ಪಡೆದಿದೆ. ರಾತ್ರೋ ರಾತ್ರಿ ಶಿವಸೇನೆಗೆ ಬಿಜೆಪಿ ಶಾಕ್ ನೀಡಿದ್ದು, ದೇವೇಂದ್ರ ಫಡ್ನವೀಸ್ ಸಿಎಂ, ಅಜಿತ್ ಪವಾರ್ ಡಿಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಹೌದು ಮಹಾರಾಷ್ಟ್ರ ಸರ್ಕಾರ ರಚಿಸುವ ವಿಶ್ವಾಸದಲ್ಲಿದ್ದ ಶಿವಸೇನೆ ಹಾಗೂ ಕಾಂಗ್ರೆಸ್‌ಗೆ, ಬಿಜೆಪಿ ಬಹುದೊಡ್ಡ ಹೊಡೆತ ನೀಡಿದೆ. ಶಿವಸೇನೆ ಹಾಗೂ ಕಾಂಗ್ರೆಸ್‌ ಜೊತೆ ಕೈಜೋಡಿಸುತ್ತಾರೆಂದೇ ನಂಬಲಾಗಿದ್ದ ಶರತ್ ಪವಾರ್ ನೇತೃತ್ವದ ಎನ್‌ಸಿಪಿ ರಾತ್ರೋ ರಾತ್ರಿ ಬಿಜೆಪಿ ಜೊತೆ ಕೈ ಜೋಡಿಸಿದೆ. ಈ ಮೂಲಕ ಮತ್ತೆ ಫಡ್ನವೀಸ್ ಮಹಾರಾಷ್ಟ್ರದ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಎರಡು ದಿನದ ಹಿಂದೆ ಶರತ್ ಪವಾರ್ ಪ್ರಧಾನಿ ಮೋದಿಯನ್ನು ಭೇಟಿಯಾಗಿದ್ದರೆಂಬುವುದು ಉಲ್ಲೇಖನೀಯ. 

ಫಡ್ನವೀಸ್ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದು, ಮಹಾರಾಷ್ಟ್ರದ ನೂತನ ಸಿಎಂ ಫಡ್ನವೀಸ್ ಹಾಗೂ ಡಿಸಿಎಂ ಅಜಿತ್ ಪವಾರ್‌ಗೆ ಅಭಿನಂದಿಸಿದ್ದಾರೆ. ಅಲ್ಲದೇ ಮಹಾರಾಷ್ಟ್ರಕ್ಕೆ ಭವ್ಯ ಭವಿಷ್ಯವಿದೆ ಎಂದು ಬರೆದಿದ್ದಾರೆ. ಫಡ್ನವೀಸ್ ಪ್ರಮಾಣವಚನ ಸ್ವೀಕರಿಸಿದ 5 ನಿಮಿಷದೊಳಗೆ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಮಹಾರಾಷ್ಟ್ರ ರಾಜಕೀಯದಲ್ಲಿ ಏನೇನಾಯ್ತು? ಒಂದೇ ಕ್ಲಿಕ್‌ನಲ್ಲಿ ಹಲವು ಸುದ್ದಿಗಳು

ಈ ಹಿಂದೆ ಮಹಾರಾಷ್ಟ್ರದ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ದೇವೇಂದ್ರ ಫಡ್ನವೀಸ್ ಮಹಾರಾಷ್ಟ್ರದ ಮುಂದಿನ ಸಿಎಂ ಆಗುತ್ತಾರೆ ಎಂದು ಪಿಎಂ ಮೋದಿ ಸೇರಿದಂತೆ ಬಿಜೆಪಿ ನಾಯಕರು ತಮ್ಮೆಲ್ಲಾ ಸಮಾವೇಶಗಳಲ್ಲಿ ಘೋಷಿಸಿದ್ದರು. ಅಲ್ಲದೇ ಶಿವಸೇನೆಯೊಂದಿಗಿನ ಮೈತ್ರಿ ಮುರಿದು ಬಿದ್ದ ಬಳಿಕವೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಯಬೇಡ ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ರಚಿಸುವುದು ಖಚಿತ ಹಾಗೂ ಫಡ್ನವೀಸ್ ಮುಂದಿನ ಸಿಎಂ ಆಗುವುದರಲ್ಲಿ ಅನುಮಾನವಿಲ್ಲ ಎಂದಿದ್ದರು.

ನವೆಂಬರ್ 23ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: