ಮಹರ್ಷಿ ವಾಲ್ಮೀಕಿ ನಿಗಮದ ಹಗರಣ: ಜೈಲಲ್ಲಿರುವ ನಾಗೇಂದ್ರ ಭೇಟಿಗೆ 20 ಕಾರಲ್ಲಿ ಬಂದ ಬಳ್ಳಾರಿ ಟೀಂ
ಮಹರ್ಷಿ ವಾಲ್ಮೀಕಿ ನಿಗಮದ ಹಗರಣದಲ್ಲಿ ಬಂಧಿತರಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಬಳ್ಳಾರಿ ಜಿಲ್ಲೆಯ ಕಾಂಗ್ರೆಸ್ ಶಾಸಕರು ಮಂಗಳವಾರ ಭೇಟಿಯಾಗಿ ಕುಶಲ ವಿಚಾರಿಸಿದರು.
ಬೆಂಗಳೂರು (ಜು.24): ಮಹರ್ಷಿ ವಾಲ್ಮೀಕಿ ನಿಗಮದ ಹಗರಣದಲ್ಲಿ ಬಂಧಿತರಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಬಳ್ಳಾರಿ ಜಿಲ್ಲೆಯ ಕಾಂಗ್ರೆಸ್ ಶಾಸಕರು ಮಂಗಳವಾರ ಭೇಟಿಯಾಗಿ ಕುಶಲ ವಿಚಾರಿಸಿದರು. ಜೈಲಿನಲ್ಲಿರುವ ಮಾಜಿ ಸಚಿವರ ಭೇಟಿಗೆ 20ಕ್ಕೂ ಹೆಚ್ಚಿನ ಕಾರುಗಳಲ್ಲಿ ಅವರ ಸ್ವಕ್ಷೇತ್ರ ಬಳ್ಳಾರಿ ಗ್ರಾಮಾಂತರದಿಂದ ಕಾಂಗ್ರೆಸ್ ಮುಖಂಡರು ಆಗಮಿಸಿದ್ದರು.
ಆದರೆ, ಒಂದೇ ಬಾರಿಗೆ ಅಷ್ಟು ಕಾರ್ಯಕರ್ತರ ಭೇಟಿಗೆ ನಿಯಮಾನುಸಾರ ಅವಕಾಶ ಇಲ್ಲದ ಕಾರಣ, ಕಾರಾಗೃಹದ ಅಧಿಕಾರಿಗಳು ಬಳ್ಳಾರಿ ನಗರ ಶಾಸಕ ಭರತ್ ರೆಡ್ಡಿ ಹಾಗೂ ಕಂಪ್ಲಿ ಶಾಸಕ ಗಣೇಶ್ ಅವರಿಗೆ ಮಾತ್ರ ನಾಗೇಂದ್ರ ಅವರ ಭೇಟಿಗೆ ಅವಕಾಶ ನೀಡಿದರು. ವಾಲ್ಮೀಕಿ ನಿಗಮದ ಹಗರಣ ಸಂಬಂಧ ಹಲವು ದಿನಗಳ ಕಾಲ ಇ.ಡಿ. ವಶದಲ್ಲಿದ್ದ ಮಾಜಿ ಸಚಿವ ನಾಗೇಂದ್ರ ಅವರನ್ನು ನ್ಯಾಯಾಲಯ ಸೋಮವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿತ್ತು.
ಬೆಂಗಳೂರಿನ ಲೇಡಿಸ್ ಪಿಜಿಗೆ ನುಗ್ಗಿ ಕತ್ತು ಕೊಯ್ದು ಯುವತಿಯ ಬರ್ಬರ ಹತ್ಯೆ: ಪರಿಚಯಸ್ಥನಿಂದಲೇ ಕೃತ್ಯ ಶಂಕೆ
ಸಮಯ ಬಂದಾಗ ಧ್ವನಿ ಎತ್ತುವೆ: ವಾಲ್ಮೀಕಿ ನಿಗಮದಲ್ಲಿ ನಡೆದ ಹಗರಣದ ಬಗ್ಗೆ ಸ್ವಾಮೀಜಿ ಮೌನವಹಿಸಿದ್ದಾರೆ ಎಂದು ಕೆಲವರು ಮಾತನಾಡಿಕೊಳ್ಳುತ್ತಿದ್ದಾರೆ. ಆದರೆ ಪ್ರಕರಣದ ತನಿಖೆ ನಡೆಯುತ್ತಿರುವ ಸಂದರ್ಭದಲ್ಲಿ ಮಾತನಾಡುವುದು ಸರಿಯಲ್ಲ ಎನ್ನುವ ಕಾರಣಕ್ಕೆ ಸುಮ್ಮನಿದ್ದೇನೆ ಹೊರತು ಸಮಯ ಬಂದಾಗ ಖಂಡಿತ ಧ್ವನಿ ಎತ್ತುವೆ ಎಂದು ಹರಿಹರ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಹೇಳಿದರು.
ಸಮೀಪದ ಮಸ್ಕಿ ತಾಲೂಕಿನ ನೆಲಕೊಳ ಗ್ರಾಮದಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಮೂರ್ತಿ ಪ್ರತಿಷ್ಠಾಪನೆ ಸಮಾರಂಭದಲ್ಲಿ ಇದೇ ಮೊದಲ ಬಾರಿಗೆ ವಾಲ್ಮೀಕಿ ಹಗರಣ ಕುರಿತು ಸ್ವಾಮೀಜಿ ಮೌನ ಮುರಿದರು.ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭಿವೃದ್ಧಿಗೆ ಮೀಸಲಿಟ್ಟ 5.5 ಸಾವಿರ ಕೋಟಿ ಮತ್ತು 11 ಸಾವಿರ ಕೋಟಿ ಹಣವನ್ನು ಲೂಟಿ ಮಾಡಲಾಗಿದೆ. ಈ ಕುರಿತು ಯಾರೊಬ್ಬರೂ ಚಕಾರ ಎತ್ತುತ್ತಿಲ್ಲ. ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರ ಅವರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಳ್ಳದಿದ್ದರೆ ವಾಲ್ಮೀಕಿ ನಿಗಮದಲ್ಲಿ ನಡೆದ 187 ಕೋಟಿ ಹಣ ಲೂಟಿ ಹೊಡೆದ ಪ್ರಕರಣ ಬಹಿರಂಗವಾಗುತ್ತಿರಲಿಲ್ಲ ಎಂದರು.
ಡಾ.ಬಾಬಾ ಸಾಹೇಬ ಅಂಬೇಡ್ಕರ್ ಅವರು ಹಿಂದುಳಿದ ಜಾತಿಗಳ ಅಭಿವೃದ್ಧಿಗೆ ಮೀಸಲಾತಿ ಕಲ್ಪಿಸಿದರು. ಅದೇ ರೀತಿ ಸರ್ಕಾರಗಳು ಸಮುದಾಯದ ಅಭಿವೃದ್ಧಿಗೆ ನಿಗಮ ಮಂಡಳಿ ಮಾಡಿದ್ದರೂ ಸಮುದಾಯದ ಅಭಿವೃದ್ಧಿಗೆ ಮೀಸಲಿಟ್ಟಿರುವ ಹಣವನ್ನು ಲೂಟಿ ಹೊಡೆಯುವ ಮೂಲಕ ಬೇಲಿಯೇ ಎದ್ದು ಹೊಲ ಮೇಯಿದಂತೆ ಎನ್ನುವ ಗಾದೆ ಮಾತನ್ನು ನಿರೂಪಿಸಿವೆ ಎಂದು ವ್ಯಂಗವಾಡಿದರು.
ಶಾಲಾ ಮೈದಾನಗಳಲ್ಲಿ ಶಿಕ್ಷಣೇತರ ಚಟುವಟಿಕೆ ನಿಷೇಧಿಸಿದ್ದೇ ಬಿಜೆಪಿ ಸರ್ಕಾರ: ಕಮಲ ಪಡೆಗೆ ತಿರುಗುಬಾಣವಾಯ್ತಾ ಹೋರಾಟ?
ವಾಲ್ಮೀಕಿ ನಿಗಮದ ಹಗರಣ ಕುರಿತು ಸ್ವಾಮೀಜಿ ಮಾತನಾಡಿಲ್ಲ ಎಂದು ಕೆಲವರು ಹೇಳುತ್ತಿದ್ದಾರೆ. ನಮಗೆ ಈ ದೇಶದ ಸಂವಿಧಾನ ಹಾಗೂ ಕಾನೂನಿನ ಬಗ್ಗೆ ಸಂಪೂರ್ಣ ಗೌರವ ಹಾಗೂ ನಂಬಿಕೆ ಇದೆ. ವಾಲ್ಮೀಕಿ ನಿಗಮದ ಹಣ ದುರುಪಯೋಗ ಪ್ರಕರಣ ಕುರಿತು ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದೆ. ಕೇಂದ್ರದ ಸಿಬಿಐ ಮತ್ತು ಇಡಿ ಇಲಾಖೆಗಳು ಈಗಾಗಲೇ ತನಿಖೆ ಕೈಗೊಂಡಿವೆ. ಈ ಹಂತದಲ್ಲಿ ಅಭಿಪ್ರಾಯ ವ್ಯಕ್ತಪಡಿಸುವುದು ಸರಿಯಲ್ಲ ಎನ್ನುವ ಕಾರಣಕ್ಕೆ ಸುಮ್ಮನಿದ್ದೇವೆ ಎಂದರು.