ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಕಾರು ಪ್ರಯಾಣ ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ. ಉಭಯ ನಾಯಕರು ವಿಧಾನಸೌಧದಿಂದ ಸದಾಶಿವನಗರದ ತಮ್ಮ ನಿವಾಸ 'ದವರೆಗೆ ಒಂದೇ ಕಾರಿನಲ್ಲಿ ಪ್ರಯಾಣಿಸಿದ್ದು ಕುತೂಹಲಕ್ಕೆ ಕಾರಣವಾಯಿತು.
ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವಿಧಾನಸೌಧದಿಂದ ಸದಾ ಶಿವನಗರದ ನಿವಾಸದವರೆಗೆ ಒಂದೇ ಕಾರಿನಲ್ಲಿ ತೆರಳಿ ಗಮನ ಸೆಳೆದರು. ನಾಯಕತ್ವ ಬದಲಾವಣೆ ಗೊಂದಲದ ಸಂದರ್ಭದಲ್ಲಿ ಖರ್ಗೆ ಮತ್ತು ಶಿವಕುಮಾರ್ ಅವರು ಸದಾಶಿವನಗರದಿಂದ ವಿಮಾನ ನಿಲ್ದಾಣವರೆಗೆ ಒಂದೇ ಕಾರಿನಲ್ಲಿ ತೆರಳಿ, ಅಲ್ಲಿನ ವಿಐಪಿ ಲಾಂಜ್‌ನಲ್ಲಿ ಅರ್ಧ ಗಂಟೆಗೂ ಹೆಚ್ಚಿನ ಕಾಲ ಚರ್ಚಿಸಿದ್ದರು. ಆ ಸಂದರ್ಭದಲ್ಲಿ ಈ ನಾಯಕರ ನಡೆ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ನಾಯಕತ್ವ ಬದಲಾವಣೆ ಚರ್ಚೆಗಳು ತಣ್ಣಗಾಗಿದೆ. ಅದರ ನಡುವೆಯೇ ಶನಿವಾರ ಡಾ.ಬಿ.ಆರ್.ಅಂಬೇಡ್ಕರ್ ಅವರ 69ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ವಿಧಾನಸೌಧದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ನಂತರ ಉಭಯ ನಾಯಕರು ವಿಧಾನಸೌಧದಿಂದ ಸದಾಶಿವನಗರದ ತಮ್ಮ ನಿವಾಸ 'ದವರೆಗೆ ಒಂದೇ ಕಾರಿನಲ್ಲಿ ಪ್ರಯಾಣಿಸಿದ್ದು ಕುತೂಹಲಕ್ಕೆ ಕಾರಣವಾಯಿತು.
ಮೀಸಲಾತಿ ಹೆಚ್ಚಳವನ್ನು ಸಂವಿಧಾನ ಪರಿಚ್ಛೇದ 9ಕ್ಕೆ ಸೇರಿಸಿ: ಉಗ್ರಪ್ಪ
ಬೆಂಗಳೂರು: ರಾಜ್ಯದಲ್ಲಿ ಮೀಸಲಾತಿ ಪ್ರಮಾಣ ಶೇ.56ಕ್ಕೆ ಹೆಚ್ಚಿಸಿರುವುದನ್ನು ಸಂವಿಧಾನದ ಪರಿಚ್ಛೇದ 9ಕ್ಕೆ ಸೇರ್ಪಡೆ ಮಾಡಲು ಕೇಂದ್ರ ಸರ್ಕಾರದ ಮೇಲೆ ರಾಜ್ಯ ಸರ್ಕಾರ ಒತ್ತಡ ಹೇರಬೇಕು ಎಂದು ರಾಜ್ಯ ವಾಲ್ಮೀಕಿ ಸಮಾಜದ ಸಮಾನ ಮನಸ್ಕರ ವೇದಿಕೆ ಅಧ್ಯಕ್ಷರಾದ ವಿ.ಎಸ್.ಉಗ್ರಪ್ಪ ಆಗ್ರಹಿಸಿದರು. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೀಸಲಾತಿ ಹೆಚ್ಚಳ ಕುರಿತು ಜನಪ್ರತಿನಿಧಿಗಳು ತುಟಿಬಿಚ್ಚದೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳಿಗೆ ಅನ್ಯಾಯ ಮಾಡುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ಕೋರ್ಟ್‌ಗಳಲ್ಲಿ ಎಸ್ಸಿ, ಎಸ್ಟಿ ಮತ್ತು ಹಿಂದುಳಿದ ವರ್ಗಗಳಿಗೆ ಅನ್ಯಾಯ ಮಾಡಲಾಗುತ್ತಿದೆ. ತಮಿಳುನಾಡಿನಲ್ಲಿ ಶೇ.69ರಷ್ಟು ಮೀಸಲಾತಿ ನಿಗದಿ ಮಾಡಲಾಗಿದೆ. ಕರ್ನಾಟಕದಲ್ಲಿ ಈ ಹಿಂದಿನ ಬೊಮ್ಮಾಯಿ ಸರ್ಕಾರ ಮೀಸಲಾತಿ ಪ್ರಮಾಣ ಶೇ.56ಕ್ಕೆ ಹೆಚ್ಚಿಸಿತ್ತು. ಆದರೆ, ಆ ಮೀಸಲಾತಿ ನಿಗದಿಯನ್ನು ಸಂವಿಧಾನದ ಪರಿಚ್ಛೇದ 9ಕ್ಕೆ ಸೇರಿಸಿಲ್ಲ ಎಂದರು.
ಇದನ್ನೂ ಓದಿ: ಬಿಜೆಪಿಗರ ಬಳಿ 1 ಕೋಟಿ 2 ಕೋಟಿ ಮೊತ್ತದ ದುಬಾರಿ ವಾಚ್‌ಗಳಿವೆ ಚೆಕ್ ಮಾಡಿ: ಕಾಂಗ್ರೆಸ್ ಶಾಸಕ
ಅಧಿವೇಶನದಲ್ಲಿ ಉತ್ತರ ಕರ್ನಾಟಕ ಅಭಿವೃದ್ಧಿಯ ಬಗ್ಗೆ ಚರ್ಚೆ: ಎಂಬಿಪಾ
ವಿಜಯಪುರ: ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿಯ ಬಗ್ಗೆ ಚರ್ಚಿಸಲು ಸರ್ಕಾರ ಬದ್ಧ. ಸಿಎಂ, ಕಾನೂನು ಸಚಿವ ಎಚ್.ಕೆ.ಪಾಟೀಲ ಸೇರಿದಂತೆ ನಾವೆಲ್ಲರೂ ಚರ್ಚೆ ಮಾಡಿದ್ದೇವೆ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಹೇಳಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿ, ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹಾರ ಕೊಡುವ ಕೆಲಸ ಆಗಲಿದೆ. ಕಬ್ಬು ಬೆಳೆಗಾರರ ಸಮಸ್ಯೆ ಎದುರಾಗಿತ್ತು. ಆದರೆ ಎಫ್‌ಆರ್‌ಪಿ ದರ ನಿಗದಿ ಮಾಡಬೇಕಿರುವುದು ಕೇಂದ್ರ ಪ್ರಧಾನಿ ಅವರನ್ನು ಸಿಎಂ ಭೇಟಿಯಾಗಿ ಮನವಿ ಕೊಟ್ಟರೂ ಏನೂ ಕ್ರಮಕೈಗೊಂಡಿಲ್ಲ. ಈಗ ಮೆಕ್ಕೆ ಜೋಳದ ವಿವಾದ ಬಂದಿದೆ. ಕಬ್ಬು ಹಾಗೂ ಮೆಕ್ಕೆಜೋಳದ ಜವಾಬ್ದಾರಿ ಕೇಂದ್ರದ್ದು, ಕೇಂದ್ರದ ವೈಫಲ್ಯವನ್ನು ನಾವು ನಿಭಾಯಿಸುವ ಸ್ಥಿತಿ ಬಂದಿದೆ ಎಂದರು.
ಇದನ್ನೂ ಓದಿ: ಎಚ್‌ಡಿಕೆ ಮನುವಾದಿ ಆಗಿದ್ದಾರೆ ಎಂದ ಸಿದ್ದು: ಸಿದ್ದರಾಮಯ್ಯ ಮಜಾವಾದಿ ಎಂದ ಎಚ್‌ಡಿಕೆ


