ಕರ್ನಾಟಕ ಮುಂದಿನ ಸಿಎಂ ಆಯ್ಕೆ ವಿಚಾರ ಕಾಂಗ್ರೆಸ್ ಹೈಕಮಾಂಡ್‌ಗೆ ಅತೀ ದೊಡ್ಡ ತಲೆನೋವಾಗಿದೆ. ಇದೀಗ ಮಲ್ಲಿಕಾರ್ಜುನ ಖರ್ಗೆ ತಮ್ಮ ನಿವಾಸದಲ್ಲಿ ಸಿಎಂ ಆಯ್ಕೆ ಕುರಿತ ಮಹತ್ವದ ಸಭೆ ನಡೆಸಿದ್ದಾರೆ. ನಾಯಕ ಅಭಿಪ್ರಾಯ, ಉಸ್ತುವಾರಿಗಳ ತಂದಿರುವ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದಾರೆ. ಈ ಸಭೆಯಿಂದ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರನ್ನ ಹೊರಗಿಟ್ಟಿದ್ದಾರೆ.
ನವದೆಹಲಿ(ಮೇ.15): ಕರ್ನಾಟಕ ವಿಧಾನಸಬಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಇದೀಗ ಮುಖ್ಯಮಂತ್ರಿ ಆಯ್ಕೆ ಕಸರತ್ತು ನಡೆಸುತ್ತಿದೆ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ತೀವ್ರ ಸ್ಪರ್ಧೆ ಎರ್ಪಟ್ಟಿದೆ. ಇಬ್ಬರು ಮುಖ್ಯಮಂತ್ರಿ ಸ್ಥಾನಕ್ಕಾಗಿ ಪಟ್ಟು ಹಿಡಿದಿದ್ದಾರೆ. ಇದು ಕಾಂಗ್ರೆಸ್ ಹೈಕಮಾಂಡ್‌ಗೆ ತಲೆನೋವು ತಂದಿದೆ. ಇದೀಗ ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಹತ್ವದ ಸಭೆ ನಡೆಸುತ್ತಿದ್ದಾರೆ. ಈ ಸಭೆಯಿಂದ ದೆಹಲಿಯಲ್ಲೇ ಬೀಡುಬಿಟ್ಟಿರುವ ಸಿದ್ದರಾಮಯ್ಯ ಹಾಗೂ ಸದ್ಯ ಬೆಂಗಳೂರಿನಲ್ಲಿರುವ ಡಿಕೆ ಶಿವಕುಮಾರ್ ಅವರನ್ನ ಹೊರಗಿಟ್ಟು ಸಭೆ ಆರಂಭಿಸಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿಗಳಾದ ಕೆಸಿ ವೇಣುಗೋಪಾಲ್, ರಂದೀಪ್ ಸುರ್ಜೆವಾಲಾ ಸೇರಿದಂತೆ ಪ್ರಮುಖ ನಾಯಕರ ಜೊತೆ ಚರ್ಚೆ ನಡೆಸುತ್ತಿದ್ದಾರೆ. ಉಸ್ತುವಾರಿಗಳು ತಂದಿರುವ ವರದಿ ಹಾಗೂ ನಾಯಕ ಅಭಿಪ್ರಾಯವನ್ನು ಖರ್ಗೆ ಸಂಗ್ರಹಿಸುತ್ತಿದ್ದಾರೆ.
ಬಿಜೆಪಿ ಸರ್ಕಾರ ನನಗೆ ನೋವು ನೀಡಿದೆ; ಹೈಕಮಾಂಡ್ ಪರಿಗಣಿಸಬೇಕು: ಸಿಎಂ ಸ್ಥಾನಕ್ಕೆ ಮತ್ತೆ ಬೇಡಿಕೆ ಇಟ್ಟ ಡಿಕೆಶಿ!
ಈ ಸಭೆಯಲ್ಲಿ ಕರ್ನಾಟಕ ಮುಂದಿನ ಮುಖ್ಯಮಂತ್ರಿ ಯಾರು ಅನ್ನೋ ಬಹುತೇಕ ಚಿತ್ರಣ ಸಿಗಲಿದೆ. ಒಂದೆಡೆ ಮಲ್ಲಿಕಾರ್ಜುನ ಖರ್ಗೆ ಸಭೆ ನಡೆಸುತ್ತಿದ್ದರೆ, ಇತ್ತ ದೆಹಲಿಯಲ್ಲಿರುವ ಸಿದ್ದರಾಮಯ್ಯ ಖಾಸಗಿ ಹೊಟೆಲ್‌ನಲ್ಲಿ ತಮ್ಮ ಆಪ್ತರ ಜೊತೆ ಸಭೆ ನಡೆಸುತ್ತಿದ್ದಾರೆ. ಶಾಸಕರಾದ ಜಮೀರ್, ಎಂಬಿಪಾ, ಪುತ್ರ ಯತೀಂದ್ರ, ಜಾಜ್೯, ಭೈರತಿ ಸುರೇಶ್ ಜೊತೆ ಮಾತುಕತೆ ಆರಂಭಿಸಿದ್ದಾರೆ. ಇತ್ತ ನಿನ್ನೆಯಿಂದಲೇ ದೆಹಲಿಯಲ್ಲಿರುವ ಪ್ರಕಾಶ್ ಹುಕ್ಕೇರಿ ಕೂಡ ಸಿದ್ದರಾಮಯ್ಯ ತಂಗಿರುವ ಹೊಟೆಲ್‌ಗೆ ಆಗಮಿಸಿ ಮಾತುಕತೆ ನಡೆಸಿದ್ದಾರೆ. ದೇವನಹಳ್ಳಿ ಶಾಸಕ ಮುನಿಯಪ್ಪ ಕೂಡ ಸಿದ್ದು ಭೇಟಿಗೆ ಆಗಮಿಸಿದ್ದಾರೆ.
ಕಾಂಗ್ರೆಸ್ ವರಿಷ್ಠರು ಮಂಗಳವಾರದ ವೇಳೆಗೆ ಕರುನಾಡಿನ ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎಂಬ ನಿರ್ಧಾರ ಕೈಗೊಳ್ಳುವಲ್ಲಿ ಸಫಲರಾದರೆ ಮೇ 18ರಂದು ನೂತನ ಸಿಎಂ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯುವ ಸಾಧ್ಯತೆಯಿದೆ. ಮೂಲಗಳ ಪ್ರಕಾರ, ಮುಖ್ಯಮಂತ್ರಿ ಹುದ್ದೆ ನಿರ್ಣಯ ಕೈಗೊಳ್ಳಲು ಸೋಮವಾರ ಹಾಗೂ ಮಂಗಳವಾರ ದೆಹಲಿಯಲ್ಲಿ ವರಿಷ್ಠರು ಸರಣಿ ಸಭೆ ನಡೆಸಲಿದ್ದಾರೆ. ಈ ವೇಳೆ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರೊಂದಿಗೂ ಸಮಾಲೋಚನೆ ನಡೆಸಲಿದ್ದಾರೆ. ಈ ಪ್ರಕ್ರಿಯೆಯನ್ನು ಮಂಗಳವಾರದ ವೇಳೆಗೆ ವರಿಷ್ಠರು ಪೂರ್ಣಗೊಳಿಸಿದರೆ ಮೇ 17 ಅಥವಾ 18ಕ್ಕೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಬಹುದು. ಇದಾಗದ ಪಕ್ಷದಲ್ಲಿ ವಿಳಂಬವಾಗುವ ಸಾಧ್ಯತೆಯಿದೆ.
Suvarna Focus: ಯಾರಾಗ್ತಾರೆ ಸಿಎಂ?: ಘೋಷಣೆಗೂ ಮುನ್ನವೇ ಸಿದ್ದರಾಮಯ್ಯಗೆ ಪಟ್ಟ!?
ಈ ಬಾರಿ ಮುಸ್ಲಿಂ ಸಮುದಾಯ ಪರಿಪೂರ್ಣವಾಗಿ ಕಾಂಗ್ರೆಸ್‌ಗೆ ಬೆಂಬಲ ನೀಡಿರುವುದರಿಂದ ಆ ಸಮುದಾಯಕ್ಕೆ ಒಂದು ಡಿಸಿಎಂ ಹುದ್ದೆ ನೀಡುವ ಅನಿವಾರ್ಯತೆ ಸೃಷ್ಟಿಯಾಗುವ ಸಾಧ್ಯತೆಯಿದೆ. ಇಂತಹ ಸಂದರ್ಭದಲ್ಲಿ ಹಲವು ಹೆಸರು ಕೇಳಿ ಬಂದರೂ ಈಗಾಗಲೇ ಕಾರ್ಯಾಧ್ಯಕ್ಷರಾಗಿರುವ ಹಾಗೂ ಕಳೆದ ಮೂರು ವರ್ಷಗಳಿಂದ ಪಕ್ಷಕ್ಕಾಗಿ ಅಹರ್ನಿಶಿ ದುಡಿದಿರುವ ಸಲೀಂ ಅಹಮದ್ ಅವರಿಗೆ ಹೆಚ್ಚು ಅವಕಾಶವಿದೆ ಎನ್ನಲಾಗುತ್ತಿದೆ.ಇದರ ಜತೆಗೆ ಜಾತಿವಾರು ಬೇಡಿಕೆ ಬಂದರೆ ವಾಲ್ಮೀಕಿ ಸಮುದಾಯದಿಂದ ಸತೀಶ್ ಜಾರಕಿಹೊಳಿ ಅವರಿಂದಲೂ ಬೇಡಿಕೆ ಬರಬಹುದು ಎಂದು ತಿಳಿದುಬಂದಿದೆ.
