ಬ್ರೇಕಿಂಗ್: ಕರ್ನಾಟಕ ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್‌ನಿಂದ ಅಚ್ಚರಿ ಅಭ್ಯರ್ಥಿ ಘೋಷಣೆ
ಕರ್ನಾಟಕ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದು, ಅಚ್ಚರಿ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ.
ಬೆಂಗಳೂರು, (ಜೂನ್.05): ಕರ್ನಾಟಕ ರಾಜ್ಯಸಭಾ ಚುನಾವಣೆ ಅಭ್ಯರ್ಥಿಯನ್ನಾಗಿ ಕಾಂಗ್ರೆಸ್ ಮಲ್ಲಿಕಾರ್ಜುನ ಖರ್ಗೆ ಅವರನ್ನ ಅಂತಿಮಗೊಳಿಸಿದೆ.ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ಚುನಾವಣೆ ನಡೆಯಲಿದ್ದು, ಇದಕ್ಕೆ ಎಐಸಿಸಿ, ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅಭ್ಯರ್ಥಿ ಎಂದು ಕಾಂಗ್ರೆಸ್ ಘೋಷಣೆ ಮಾಡಿದೆ.
"
ಕರ್ನಾಟಕದಲ್ಲಿ ರಂಗೇರಿದ ರಾಜ್ಯಸಭಾ ಚುನಾವಣೆ: ತೇಲಿಬಂದ ಘಟಾನುಘಟಿ ನಾಯಕರ ಹೆಸರು...!
ಸೋಲಿಲ್ಲದ ಸರದಾರ ಎನಿಸಿಕೊಂಡಿದ್ದ ಮಲ್ಲಿಕಾರ್ಜುನ ಖರ್ಗೆ ಅವರು 2019ರ ಲೋಕಸಭಾ ಚುನಾವಣೆಯಲ್ಲಿ ಕಲಬುರಗಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ವಿರುದ್ಧ ಸೋಲುಕಂಡಿದ್ದರು. ಇದರಿಂದ ಪಕ್ಷಕ್ಕೆ ಭಾರೀ ಮುಜುಗರ ಉಂಟುಮಾಡಿತ್ತು.ಈ ಹಿನ್ನೆಲೆಯಲ್ಲಿ ಇದೀಗ ಹಿರಿಯ ನಾಯಕನಿಗೆ ರಾಜ್ಯಸಭಾ ಟಿಕೆಟ್ ನೀಡಲಾಗಿದೆ.
ಡಿ.ಕುಪೇಂದ್ರ ರೆಡ್ಡಿ (ಜೆಡಿಎಸ್), ಪ್ರಭಾಕರ್ ಕೋರೆ (ಬಿಜೆಪಿ), ರಾಜೀವ್ ಗೌಡ ಎಂ ವಿ ಮತ್ತು ಬಿಕೆ ಹರಿಪ್ರಸಾದ್ ಅವರ ಅವಧಿ ಮುಕ್ತಾಯಗೊಳ್ಳುತ್ತಿದೆ. ಈ ಹಿನ್ನಲೆಯಲ್ಲಿ ಜೂನ್ 19 ರಂದು ರಾಜ್ಯದ 4 ರಾಜ್ಯಸಭೆ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಜೂನ್ 9 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.