ರಾಜೀವ್ ಗಾಂಧಿ ಪ್ರಧಾನಿಯಾದ ಬಳಿಕ ಗಾಂಧಿ ಕುಟುಂಬದ ಯಾವ ವ್ಯಕ್ತಿಯೂ ಅಧಿಕಾರ ಅನುಭವಿಸಿಲ್ಲ ಎಂದು ಮಲ್ಲಿಕಾರ್ಜುನ್ ಖರ್ಗೆ ಪ್ರಧಾನಿ ನರೇಂದ್ರ ಮೋದಿಗೆ ತಿರುಗೇಟು ನೀಡಿದ್ದಾರೆ.

ಬೆಂಗಳೂರು : ದೇಶದಲ್ಲಿ ರಾಜೀವ್ ಗಾಂಧಿ ಬಳಿಕ ಗಾಂಧಿ ಕುಟುಂಬದ ಯಾವ ವ್ಯಕ್ತಿಯೂ ಕೂಡ ಅಧಿಕಾರವನ್ನು ಅನುಭವಿಸಿಲ್ಲ ಎಂದು ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟಾಂಗ್ ನೀಡಿದ್ದಾರೆ. 

Add Asianetnews Kannada as a Preferred SourcegooglePreferred

ಕಾಂಗ್ರೆಸ್ ಅಧ್ಯಕ್ಷ ಪಟ್ಟವನ್ನು ಗಾಂಧಿ ಕುಟುಂಬದ ಹೊರಗಿನ ವ್ಯಕ್ತಿಗೆ 5 ವರ್ಷಗಳ ಅವಧಿಗೆ ನೀಡಲಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ ಹಿನ್ನೆಲೆಯಲ್ಲಿ ಖರ್ಗೆ ಪ್ರತಿಕ್ರಿಯಿಸಿದ್ದಾರೆ. 

ರಾಜೀವ್ ಗಾಂಧಿ ಅವರ ಬಳಿಕ ಗಾಂಧಿ ಕುಟುಂಬದ ಹೊರಗಿನ ವ್ಯಕ್ತಿಗಳೇ ಅಧಿಕಾರ ಪಡೆದಿದ್ದಾರೆ. ಪ್ರಧಾನಿ ಅವರು ಸುಳ್ಳು ಪ್ರಚಾರದಲ್ಲಿ ನಿರತರಾಗಿದ್ದಾರೆ ಎಂದು ಹೇಳಿದ್ದಾರೆ. 

ಪ್ರಧಾನಿಯವರು ದೇಶದ ಸಂವಿಧಾನದ ಪ್ರಕಾರ ನಡೆದುಕೊಂಡರೆ ಯಾರೂ ಕೂಡ ಆಕ್ಷೇಪ ವ್ಯಕ್ತಪಡಿಸುವುದಿಲ್ಲ. ದಲಿತರ ಮೇಲೆ ಹಲ್ಲೆಯಾದರೂ ಪ್ರಧಾನಿ ಮಾತನಾಡುವುದಿಲ್ಲ ಎಂದು ಹೇಳಿದ್ದಾರೆ.