Asianet Suvarna News Asianet Suvarna News

Assembly Election: ಟಿಕೆಟ್‌ ಘೋಷಣೆ ಅಧಿಕಾರ ನಂಗೂ ಇಲ್ಲ, ಸಿದ್ದುಗೂ ಇಲ್ಲ: ಡಿಕೆಶಿ

  • ಟಿಕೆಟ್‌ ಘೋಷಣೆ ಅಧಿಕಾರ ನಂಗೂ ಇಲ್ಲ, ಸಿದ್ದುಗೂ ಇಲ್ಲ: ಡಿಕೆಶಿ
  • ಸಿದ್ದು ಅಭ್ಯರ್ಥಿಗಳನ್ನು ಘೋಷಿಸಿದ್ದಕ್ಕೆ ಪ್ರತಿಕ್ರಿಯೆ
  • ಅಧಿಕಾರ ಇರುವುದು ಖರ್ಗೆ, ಹೈಕಮಾಂಡ್‌ಗೆ: 
Mallikarjuna Kharge  High Command has the authority to declare tickets says DKS rav
Author
First Published Nov 22, 2022, 3:42 AM IST

ಬೆಂಗಳೂರು (ನ.22) : ‘ಸಿದ್ದರಾಮಯ್ಯ ಅವರು ಕೊಪ್ಪಳದಲ್ಲಿ ಕಾರ್ಯಕರ್ತರಿಗೆ ಉತ್ತೇಜನ ನೀಡಲು ಕೆಲವರ ಹೆಸರು ಹೇಳಿರಬಹುದು. ಆದರೆ, ಪಕ್ಷದ ಅಭ್ಯರ್ಥಿಗಳನ್ನು ಘೋಷಿಸುವ ಹಕ್ಕು ನನಗೂ ಇಲ್ಲ, ಸಿದ್ದರಾಮಯ್ಯ ಅವರಿಗೂ ಇಲ್ಲ. ಹೈಕಮಾಂಡ್‌ಗೆ ಈ ಅಧಿಕಾರವಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸ್ಪಷ್ಟಪಡಿಸಿದ್ದಾರೆ.

ಭಾನುವಾರ ಕೊಪ್ಪಳದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ‘ಕೊಪ್ಪಳದಲ್ಲಿ ರಾಘವೇಂದ್ರ ಹಿಟ್ನಾಳ್‌, ಗಂಗಾವತಿಯಲ್ಲಿ ಇಕ್ಬಾಲ್‌ ಅನ್ಸಾರಿ, ಕುಷ್ಟಗಿಯಲ್ಲಿ ಅಮರೇಗೌಡ ಬಯ್ಯಾಪುರ, ಕನಕಗಿರಿಯಲ್ಲಿ ಶಿವರಾಜ್‌ ತಂಗಡಗಿ, ಯಲಬುರ್ಗಾದಲ್ಲಿ ಬಸವರಾಜ ರಾಯರೆಡ್ಡಿ ಅವರನ್ನು ಮುಂದಿನ ಚುನಾವಣೆಯಲ್ಲಿ ಗೆಲ್ಲಿಸಿ’ ಎಂದು ಜನರಿಗೆ ಕರೆ ನೀಡಿದ್ದರು.

 

ಸಿಎಂ ಬೊಮ್ಮಾಯಿಗೆ ಧಮ್‌ ಇದ್ದರೆ ತನಿಖೆ ನಡೆಸಲಿ: ಡಿ.ಕೆ.ಶಿವಕುಮಾರ್‌

ಈ ಬಗ್ಗೆ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್‌, ‘ಯಾವ ವಿಚಾರದಲ್ಲಿ ಸಿದ್ದರಾಮಯ್ಯ ಅವರು ಹಾಗೆ ಹೇಳಿದ್ದಾರೆ ಎಂಬುದು ಗೊತ್ತಿಲ್ಲ. ಈಗ ಪಕ್ಷದ ಅಭ್ಯರ್ಥಿಗಳನ್ನು ಘೋಷಣೆ ಮಾಡುವ ಹಕ್ಕು ನನಗೂ ಇಲ್ಲ, ಸಿದ್ದರಾಮಯ್ಯ ಅವರಿಗೂ ಇಲ್ಲ. ಆ ಅಧಿಕಾರ ಏನಿದ್ದರೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಹೈಕಮಾಂಡ್‌ ಹಿರಿಯ ನಾಯಕರಿಗೆ ಮಾತ್ರ ಇದೆ’ ಎಂದು ಹೇಳಿದರು.

ಸ್ಫೂರ್ತಿ ತುಂಬಲುಹೇಳಿದ್ದಾರೆ: ಎಂಬಿಪಾ

ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಘೋಷಣೆಗೆ ಪ್ರತ್ಯೇಕ ಸಮಿತಿ ಮಾಡಬೇಕು. ಸಮಿತಿ ಕಳುಹಿಸಿದ ಅರ್ಹರ ಪಟ್ಟಿಗೆ ಎಐಸಿಸಿ ಅಧ್ಯಕ್ಷರು ಅನುಮೋದನೆ ನೀಡಿದ ಬಳಿಕವಷ್ಟೇ ಅಂತಿಮ ಪಟ್ಟಿಘೋಷಿಸಲಾಗುತ್ತದೆ. ಕಾರ್ಯಕರ್ತರಿಗೆ ಸ್ಫೂರ್ತಿ ತುಂಬಲು ಸಿದ್ದರಾಮಯ್ಯ ಅವರು ಕೆಲವರ ಹೆಸರು ಹೇಳಿರಬಹುದು. ಹೀಗಾಗಿ ಇದರ ಬಗ್ಗೆ ಹೆಚ್ಚು ಚರ್ಚೆ ಬೇಕಾಗಿಲ್ಲ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್‌ ಹೇಳಿದ್ದಾರೆ.  

Voters Data Theft Case: ಮತ ಮಾಹಿತಿ ಕದ್ದವರ ಬಂಧನಕ್ಕೆ ಡಿ.ಕೆ.ಶಿವಕುಮಾರ್‌ ಗಡುವು

Follow Us:
Download App:
  • android
  • ios