ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಮುಖಂಡಗೆ ಇದೀಗ ಪ್ರಭಲವಾದ ಅಭ್ಯರ್ಥಿ ಎದುರಿಗೆ ಕಾಂಗ್ರೆಸ್ ನಿಂದ ಟಿಕೆಟ್ ನೀಡಲಾಗುತ್ತಿದೆ. ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ವಸುಂಧರಾ ರಾಜೆ ವಿರುದ್ಧ ಮಾನವೇಂದ್ರ ಸಿಂಗ್ ಸ್ಪರ್ಧೆ ಮಾಡುತ್ತಿದ್ದಾರೆ.
ಜೈಪುರ : ಈ ಹಿಂದೆ ಬಿಜೆಪಿಯಲ್ಲಿದ್ದು, ಬಳಿಕ ಕಾಂಗ್ರೆಸ್ ಸೇರಿ ಇದೀಗ ರಾಜಸ್ಥಾನ ವಿಧಾನ ಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ವಸುಂಧರಾ ರಾಜೆ ವಿರುದ್ಧ ಸ್ಪರ್ಧೆ ಮಾಡಿರುವ ಮಾನವೇಂದ್ರ ಸಿಂಗ್ ತಾವು ಕಾಂಗ್ರೆಸ್ ನೊಂದಿಗೆ ಸೇರಿ ಹೃದಯಪೂರ್ವಕವಾಗಿ ಕಾರ್ಯ ನಿರ್ವಹಿಸುದಾಗಿ ಹೇಳಿಕೊಂಡಿದ್ದಾರೆ.
ಅಲ್ಲದೇ ಪಕ್ಷದ ಪರವಾಗಿ ಕೆಲಸ ಮಾಡುವುದಷ್ಟೇ ತಮ್ಮ ಗುರಿ ಎಂದಿರುವ ಅವರು ತಮಗೆ ಅನಾನುಕೂತೆಯನ್ನು ಸರಿಸುವ ನಿಟ್ಟಿನಲ್ಲಿ ಬಿಜೆಪಿ ತೊರೆದುದಾಗಿ ಹೇಳಿದ ಅವರು, ಒಳ್ಳೆಯ ಆಟಗಾರ ಎಲ್ಲಿದ್ದರೂ ಕೂಡ ಉತ್ತಮವಾಗಿ ಆಡಬಲ್ಲ ಎನ್ನುವ ಮಾತನ್ನಾಡಿದ್ದಾರೆ.
ಅಲ್ಲದೇ ಮುಖ್ಯಮಂತ್ರಿ ವಸುಂಧರಾ ರಾಜೆ ವಿರುದ್ಧ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿರುವ ಅವರು ಪಕ್ಷದ ಕಾರ್ಯಕರ್ತರು ತಮ್ಮ ಬೆಂಬಲಕ್ಕೆ ಇರುವುದಾಗಿ ಹೇಳಿಕೊಂಡಿದ್ದಾರೆ. ಡಿಎನ್ ಎಗೆ ನೀಡಿದ ಸಂದರ್ಶನದಲ್ಲಿ ಅವರು ಈ ವಿಚಾರ ಮಾತನಾಡಿದ್ದಾರೆ.
ಇನ್ನು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರೊಂದಿಗೆ ಉತ್ತಮ ಸಂಬಂಧವನ್ನು ಹೊಂದಿದ್ದು, ಅನೇಕ ವಿಚಾರಗಳನ್ನು, ಅಭಿವೃದ್ಧಿಪರ ಚಿಂತನೆಗಳನ್ನು ಅವರೊಂದಿಗೆ ಹಂಚಿಕೊಳ್ಳುವುದಾಗಿ ಹೇಳಿದ್ದಾರೆ.
ಮುಂದಿನ ಡಿಸೆಂಬರ್ 7 ರಂದು ರಾಜಸ್ಥಾನದಲ್ಲಿ ಚುನಾವಣೆ ನಡೆಯುತ್ತಿದ್ದು , ಡಿಸೆಂಬರ್ 11 ರಂದು ಫಲಿತಾಂಶ ಪ್ರಕಟವಾಗುತ್ತಿದೆ.
