Asianet Suvarna News Asianet Suvarna News

ಮಂಡ್ಯ ಲೋಕಸಭಾ ಕ್ಷೇತ್ರದ ಬಗ್ಗೆ ಇನ್ನೂ ಫೈನಲ್ ಆಗಿಲ್ಲ: ಸಂಸದೆ ಸುಮಲತಾ

ಮೈತ್ರಿ ಹಿನ್ನೆಲೆ ಮಂಡ್ಯ ಲೋಕಸಭಾ ಕ್ಷೇತ್ರವನ್ನು ಬಿಜೆಪಿಯು ಜೆಡಿಎಸ್‌ ಬಿಟ್ಟುಕೊಟ್ಟಿದೆಎಂದು ಎಚ್‌.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿದ ಬೆನ್ನಲ್ಲೇ ಹಾಲಿ ಸಂಸದೆ ಸುಮಲತಾ ಅವರು ಮಂಡ್ಯ ಕ್ಷೇತ್ರದ ಬಗ್ಗೆ ಇನ್ನೂ ಅಂತಿಮ ತೀರ್ಮಾನ ಆಗಿಲ್ಲ ಎನ್ನುವ ಮೂಲಕ ಕುತೂಹಲ ಮೂಡಿಸಿದ್ದಾರೆ.

Mandya Lok Sabha constituency not yet finalised Says MP Sumalatha Ambareesh gvd
Author
First Published Mar 21, 2024, 11:00 AM IST

ಬೆಂಗಳೂರು (ಮಾ.21): ಮೈತ್ರಿ ಹಿನ್ನೆಲೆ ಮಂಡ್ಯ ಲೋಕಸಭಾ ಕ್ಷೇತ್ರವನ್ನು ಬಿಜೆಪಿಯು ಜೆಡಿಎಸ್‌ ಬಿಟ್ಟುಕೊಟ್ಟಿದೆಎಂದು ಎಚ್‌.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿದ ಬೆನ್ನಲ್ಲೇ ಹಾಲಿ ಸಂಸದೆ ಸುಮಲತಾ ಅವರು ಮಂಡ್ಯ ಕ್ಷೇತ್ರದ ಬಗ್ಗೆ ಇನ್ನೂ ಅಂತಿಮ ತೀರ್ಮಾನ ಆಗಿಲ್ಲ ಎನ್ನುವ ಮೂಲಕ ಕುತೂಹಲ ಮೂಡಿಸಿದ್ದಾರೆ. ದೆಹಲಿಯಿಂದ ಬಂದ ಬಳಿಕ ಮಾತನಾಡಿದ ಅವರು, ಮಂಡ್ಯದ ಬಗ್ಗೆ ದೆಹಲಿಯಲ್ಲಿ ಬಿಜೆಪಿ ವರಿಷ್ಠರ ಜತೆ ಚರ್ಚಿಸಲಾಗಿದೆ. ಮಂಡ್ಯದ ಅಭ್ಯರ್ಥಿ ಬಗ್ಗೆ ಇನ್ನೂ ಅಂತಿಮ ನಿರ್ಧಾರವಾಗಿಲ್ಲ ಎಂದರು.

ಮಂಡ್ಯ ಬಿಟ್ಟು ಎಲ್ಲೂ ಹೋಗಲ್ಲ: ನಾನು ರಾಜಕೀಯ ಮಾಡಿದರೆ ಮಂಡ್ಯದಿಂದಲೇ ಮಾಡುತ್ತೇನೆ ಎಂದು ಈಗಾಗಲೇ ಹೇಳಿದ್ದೇನೆ. ಆ ಹೇಳಿಕೆಗೆ ಬದ್ಧನಾಗಿದ್ದೇನೆ. ಬೇರೆಯವರು ಚಿಕ್ಕ ಬಳ್ಳಾಪುರ ಮತ್ತು ಬೆಂ. ಉತ್ತರ ಎಂದು ಹೇಳುತ್ತಿದ್ದಾರೆ. ಪ್ರಧಾನಿಯವರೇ ಕರೆ ಮಾಡಿ ನನ್ನನ್ನು ಕರೆಸಿ ಮಾತನಾಡುವಂತೆ ಹೇಳಿದ್ದರು. ಹೀಗಾಗಿ ನನ್ನ ಕರೆಸಿದ್ದಾಗಿ ನಡ್ಡಾ ಹೇಳಿದ್ದಾರೆ. ಪಕ್ಷದಲ್ಲಿ ನನ್ನ ಬಗ್ಗೆ ತುಂಬಾ ಗೌರವವಿದೆ. ವರಿಷ್ಠರು ಯಾವ ತೀರಾನ ಮಾಡಲಿದ್ದಾರೆಂದು ಕಾದು ನೋಡಬೇಕಿದೆ ಎಂದರು.

ನನಗೆ ಲೋಕಸಭಾ ಟಿಕೆಟ್‌ ತಪ್ಪಿಸುವ ಹುನ್ನಾರ ನಡೆದಿಲ್ಲ: ಜಗದೀಶ್‌ ಶೆಟ್ಟರ್‌

ಸ್ಪರ್ಧೆಗಿಂತ ಮಂಡ್ಯದಲ್ಲಿ ಬಿಜೆಪಿ ಸ್ಪರ್ಧಿಸುವುದು ಮುಖ್ಯ: ನನ್ನ ಸ್ಪರ್ಧೆ ಬಗ್ಗೆ ಇನ್ನೂ ನಿರ್ಧಾರ ಆಗಿಲ್ಲ. ಇನ್ನೂ ಮಂಡ್ಯ ಕ್ಷೇತ್ರದ ಕುರಿತು ಏನೂ ನಿರ್ಧಾರ ಆಗಿಲ್ಲ. ಮಂಗಳವಾರ ಈ ಸಂಬಂಧ ಬೆಂಬಲಿಗರ ಜತೆಗೆ ಸಭೆ ನಡೆಸುತ್ತೇನೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಹೇಳಿದ್ದಾರೆ ಎಂದು ಸಂಸದೆ ಸುಮಲತಾ ಅಂಬರೀಶ್‌ ತಿಳಿಸಿದ್ದಾರೆ.

ನಡ್ಡಾ ಭೇಟಿ ಬಳಿಕ ದೆಹಲಿಯಲ್ಲಿ ಸೋಮವಾರ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ನಿಮ್ಮಂಥ ನಾಯಕಿ ಪಕ್ಷಕ್ಕೆ ಬೇಕು. ನಾನು ಸ್ಪರ್ಧೆ ಮಾಡಬೇಕು ಎಂಬುದಕ್ಕಿಂತ ಮಂಡ್ಯದಲ್ಲಿ ಬಿಜೆಪಿ ಸ್ಪರ್ಧೆ ಮಾಡಬೇಕು. ಸ್ಪರ್ಧೆ ಮಾಡಿದರೆ ಮಂಡ್ಯದಲ್ಲಿ ಬಿಜೆಪಿ ಅಸ್ತಿತ್ವ ಉಳಿಯುತ್ತದೆ ಎಂದು ತಿಳಿಸಿದರು. ನಾನು ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಸ್ಪರ್ಧಿಸುತ್ತೇನೆ ಎನ್ನುವುದು ಊಹಾಪೋಹ ಅಷ್ಟೇ. ಕಳೆದ ಬಾರಿ ಪಕ್ಷೇತರರವಾಗಿ ನಿಲ್ಲಿ ಎಂದು ಅಭಿಮಾನಿಗಳು ಹೇಳಿದ್ದರು, ಅದರಂತೆ ಮಂಡ್ಯದಲ್ಲಿ ಸ್ಪರ್ಧಿಸಿದ್ದೆ. ಮುಂದೆ ಯಾವುದೇ ನಿರ್ಧಾರ ಮಾಡುವುದಿದ್ದರೆ ಅವರನ್ನೇ ಕೇಳುತ್ತೇನೆ. 

ಮೋದಿ‌ ಸರ್ಕಾರ ಕಿತ್ತು ಒಗೆಯದಿದ್ದರೆ ಆರ್ಥಿಕ ಗುಲಾಮಗಿರಿ: ಸಚಿವ ಎಚ್.ಕೆ.ಪಾಟೀಲ್‌

ಸಭೆಯಲ್ಲಿ ಹೈಕಮಾಂಡ್‌ ತೆಗೆದುಕೊಳ್ಳುವ ನಿರ್ಧಾರ ಕುರಿತು ಬೆಂಬಲಿಗರೊಂದಿಗೆ ಚರ್ಚಿಸುತ್ತೇನೆ. ಮಂಡ್ಯದಲ್ಲಿ ಜೆಡಿಎಸ್ ಸ್ಪರ್ಧೆ ಮಾಡಲು ಬಯಸುವುದು ಸಹಜ. ಆದರೆ ಈ ವಿಚಾರದಲ್ಲಿ ಯಾವುದೇ ಸಮಸ್ಯೆ ಆಗದ ರೀತಿ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ ಎಂದರು ಕಾರ್ಯಕರ್ತರನ್ನು ಬಿಟ್ಟುಕೊಟ್ಟು ಯಾವುದೇ ನಿರ್ಧಾರ ಮಾಡುವುದಿಲ್ಲ ಎಂದಿದ್ದೇನೆ, ಹಾಗೆಯೇ ನಡ್ಡಾ ಅವರು ಸಹ ನಿಮ್ಮ ಬೆಂಬಲಿಗರನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂದು ಭರವಸೆ ನೀಡಿದ್ದಾರೆ ಎಂದು ಎಂದು ಸುಮಲತಾ ತಿಳಿಸಿದರು. ಮೋದಿಯವರು ಕೂಡ ಇದೇ ಭರವಸೆ ಕೊಟ್ಟಿದ್ದಾರೆ. ಅಮಿತ್ ಶಾ ಅವರನ್ನು ಭೇಟಿ ಮಾಡಲು ಹೇಳಿದ್ದಾರೆ ಎಂದರು.

Follow Us:
Download App:
  • android
  • ios