ಕೊರೋನಾ ಸೋಂಕಿನಿಂದ ಸಂಸದೆ ಹಾಗು ನಟಿ ಸುಮಲತಾ ಅಂಬರೀಷ್ ಗುಣಮುಖರಾಗಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಈ ಬಗ್ಗೆ ಸ್ವತಃ ಸುಮಲತಾ ಅವರು ಸ್ಪಷ್ಟನೆ ಕೊಟ್ಟಿದ್ದಾರೆ. 

ಬೆಂಗಳೂರು, (ಜುಲೈ.17): ಮಂಡ್ಯ ಸಂಸದೇ ಸುಮಲತಾ ಅಂಬರೀಶ್ ಅವರಿಗೆ ಕೊರೋನಾ ಸೋಂಕು ತಗುಲಿದ್ದು, ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕೊರೋನಾ ಸೋಂಕಿನಿಂದ ಸಂಸದೆ ಸುಮಲತಾ ಅಂಬರೀಶ್ ಗುಣಮುಖರಾಗಿದ್ದಾರೆ. ನಿತ್ಯದ ಕೆಲಸಕ್ಕೆ ಹಾಜರಾಗುತ್ತಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಈ ಹಿನ್ನೆಲೆಯಲ್ಲಿ ಸುಮಲತಾ ಅವರು ಈ ಬಗ್ಗೆ ಫೇಸ್‌ಬುಕ್ ಮೂಲಕ ಸ್ಪಷ್ಟನೆ ಕೊಟ್ಟಿದ್ದಾರೆ.

ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ಗೂ ತಗುಲಿದ ಕೊರೋನಾ ವೈರಸ್

ಸುಮಲತಾ ಅಂಬರೀಶ್ ಸ್ಪಷ್ಟನೆ
ಸಂಪೂರ್ಣವಾಗಿ ಗುಣಮುಖವಾಗಿರುವುದು, ಕ್ವಾರಂಟೈನ್ ಅವಧಿ ಮುಗಿದು, ಪರೀಕ್ಷೆಯ ಬಳಿಕವೇ ತಿಳಿಯಲಿದೆ ಎಂದು ಹೇಳಿದ್ದಾರೆ. ಸದ್ಯಕ್ಕೆ ಔಷಧಿ ಹಾಗೂ ಸುಶ್ರುಷೆ ಮುಂದುವರೆದಿದೆ. ಗುಣಮುಖ ಆಗಲೆಂದು ನೀವೆಲ್ಲರೂ ಮಾಡಿದ ಆಶೀರ್ವಾದ, ಹಾರೈಕೆಗಳಿಗೆ ಋಣಿ. ಇನ್ನು ಕೆಲವೇ ದಿನಗಳಲ್ಲಿ ಗುಣಮುಖ ಆಗುವ ಭರವಸೆ ಇದೆ ಎಂದು ಹೇಳಿದ್ದಾರೆ

ಕೊರೋನಾ ಸೋಂಕಿತರನ್ನ ಅಪರಾಧಿಗಳ ರೀತಿ ಕಾಣುವುದು, ಸಾಮಾಜದ ನಿಂದನೆಗೆ ಗುರಿ ಮಾಡುವುದು ಸರಿಯಲ್ಲ. ಇದು ಒಂದು ಯುದ್ಧ, ಕೊರೋನಾ ವಿರುದ್ಧ ಎಲ್ಲರೂ ಒಟ್ಟಾಗಿ ಹೋರಾಡಬೇಕಿದೆ. ಮುಖ್ಯವಾಗಿ, ಸೊಂಕಿತರು ಕ್ವಾರಂಟೈನ್ ಅವಧಿಯನ್ನು ಮತ್ತು ಸರ್ಕಾರದ ಎಲ್ಲಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಅತ್ಯಗತ್ಯ ಹಾಗೂ ಅದು ನಮ್ಮ ಜವಾಬ್ದಾರಿ ಎಂದು ಹೇಳಿದ್ದಾರೆ.

ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ತಪ್ಪದೆ ಮುಖಕ್ಕೆ ಮಾಸ್ಕ್ ಧರಿಸುವುದನ್ನ ಮರಿಯಬೇಡಿ ಎನ್ನುವ ಸಲಹೆಯನ್ನು ಸಹ ಅವರು ನೀಡಿದ್ದಾರೆ.