ಇಂದು ಬೆಳಗ್ಗೆ 11.30ಕ್ಕೆ ಬೆಂಗಳೂರಿನ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಅಧಿಕೃತವಾಗಿ ಪಕ್ಷ ಸೇರ್ಪಡೆ ಆಗುತ್ತಿರುವುದಾಗಿ ಸಾಮಾಜಿಕ ಜಾಲತಾಣದ ಮೂಲಕ ತಿಳಿಸಿದ ಸುಮಲತಾ ಅಂಬರೀಶ್‌ 

ಮಂಡ್ಯ(ಏ.05): ಕಳೆದ ಐದು ವರ್ಷಗಳಿಂದ ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಸಂಸದೆಯಾಗಿ ಉಳಿದು, ಈ ಬಾರಿ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ವಂಚಿತರಾದ ಸುಮಲತಾ ಅಂಬರೀಶ್‌ ಅವರು ಇಂದು(ಶುಕ್ರವಾರ) ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಶುಕ್ರವಾರ ಬೆಳಗ್ಗೆ 11.30ಕ್ಕೆ ಬೆಂಗಳೂರಿನ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಅಧಿಕೃತವಾಗಿ ಪಕ್ಷ ಸೇರ್ಪಡೆ ಆಗುತ್ತಿರುವುದಾಗಿ ಸಾಮಾಜಿಕ ಜಾಲತಾಣದ ಮೂಲಕ ತಿಳಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮಂಡ್ಯದ ಅಭಿವೃದ್ಧಿಯೇ ನನ್ನ ಮೂಲ ಮಂತ್ರವಾಗಿಸಿಕೊಂಡು ಹಾಗೂ ನಮ್ಮೆಲ್ಲರ ನೆಚ್ಚಿನ ಪ್ರಧಾನ ಮಂತ್ರಿಯವರಾದ ಶ್ರೀ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಲಿ ಎನ್ನುವ ಆಶಯದೊಂದಿಗೆ ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸುವುದಾಗಿ ಘೋಷಿಸಿದ್ದೆ. ಮಂಡ್ಯದ ನನ್ನ ಸ್ವಾಭಿಮಾನಿ ಬಂಧುಗಳ, ಡಾ.ಅಂಬರೀಶ್ ಅವರ ಅಭಿಮಾನಿಗಳ ಹಾಗೂ ಹಿತೈಷಿಗಳ ಹಾರೈಕೆ ಮತ್ತು ಆಶೀರ್ವಾದ ಎಂದಿನಂತೆ ಇರಲಿ ಎಂದು ಮನವಿ ಮಾಡಿದ್ದಾರೆ.

ಸುಮಲತಾ ಜೊತೆ ಶೀಘ್ರ ಭೇಟಿ, ಪಕ್ಷದಲ್ಲಿ ಗೌರವಯುತ ಸ್ಥಾನದ ಭರವಸೆ: ವಿಜಯೇಂದ್ರ

ಬುಧವಾರವಷ್ಟೇ ಮಂಡ್ಯದಲ್ಲಿ ಬೆಂಬಲಿಗರು, ಅಭಿಮಾನಿಗಳು, ಹಿತೈಷಿಗಳ ಸಭೆ ಕರೆದು ಬಿಜೆಪಿ ಸೇರ್ಪಡೆಯಾಗುವ ಅಂತಿಮ ನಿರ್ಧಾರ ಪ್ರಕಟಿಸಿದ್ದರು. ಇದೀಗ ಬಿಜೆಪಿ ಪಕ್ಷ ಸೇರುವ ಅಧಿಕೃತ ದಿನಾಂಕವೂ ಪ್ರಕಟವಾಗಿದೆ.