* ಸುಮಲತಾ ಹಾಗೂ ಕುಮಾರಸ್ವಾಮಿ ನಡುವೆ ವಾಕ್ಸಮರ* ಕುಮಾರಸ್ವಾಮಿ ಹೇಳಿಕೆ ಸಂಸದೆ ಸುಮಲತಾ ಅಂಬರೀಶ್ ಬೆಂಬಗಲಿಗರಿಂದ ಪ್ರತಿಭಟನೆ* ಕೂಡಲೇ ಕ್ಷಮೆ ಕೇಳಬೇಕೆಂದು ಆಗ್ರಹ

ಮಂಡ್ಯ, (ಜುಲೈ.05): ಸಂಸದೆ ಸುಮಲತಾ ಅಂಬರೀಶ್ ಬೆಂಬಲಿಗರು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಬೀದಿಗಿಳಿದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕೃಷ್ಣರಾಜ ಸಾಗರ ಅಣೆಕಟ್ಟು ಬಿರುಕು ಬಿಟ್ಟಿದ್ದರೆ ಸುಮಲತಾ ಅವರನ್ನ ಅಡ್ಡಡ್ಡ ಮಲಗಿಸಿ ಎಂದು ಕುಮಾರಸ್ವಾಮಿ ಹೇಳಿಕೆ ನೀಡಿದ್ದರು. 

KRS ಬಾಗಿಲಿಗೆ ಸುಮಲತಾರನ್ನು ಅಡ್ಡಡ್ಡ ಮಲಗಿಸ್ಬೇಕು: ಏನಿದು ಎಚ್‌ಡಿಕೆ ಮಾತಿನ ಅರ್ಥ?

ಈ ಹೇಳಿಕೆಯನ್ನು ಖಂಡಿಸಿ ಸಂಸದೆ ಸುಮಲತಾ ಅಂಬರೀಶ್ ಬೆಂಬಲಿಗರು ಇಂದು (ಸೋಮವಾರ) ಮಂಡ್ಯ ನಗರದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಿ ಕುಮಾರಸ್ವಾಮಿ ಭಾವಚಿತ್ರಕ್ಕೆ ಬೆಂಕಿಹಚ್ಚಿ ಆಕ್ರೋಶ ಹೊರ ಹಾಕಿದರು.

ಮಂಡ್ಯದಲ್ಲಿ ನಡೆಯುತ್ತಿರುವ ಎಲ್ಲಾ ಅಕ್ರಮ ಚಟುವಟಿಕೆಗಳಿಗೆ ಕುಮಾರಸ್ವಾಮಿಯವರೇ ಕಾರಣ. ಕೂಡಲೇ ಸುಮಲತಾ ಅವರ ಕ್ಷಮೆ ಕೇಳಬೇಕೆಂದು ಆಗ್ರಹಿಸಿದರು.