Mandya: ಸಂಸದೆ ಸುಮಲತಾ ಆಪ್ತ ಇಂಡುವಾಳು ಸಚ್ಚಿದಾನಂದ ಬಿಜೆಪಿ ಸೇರ್ಪಡೆ

ಮಂಡ್ಯ ರಾಜಕಾರಣದಲ್ಲಿ ಕಾಂಗ್ರೆಸ್‌ ಪಕ್ಷದಿಂದ ಹೊಸ ನಾಯಕನೆಂದೇ ಗುರುತಿಸಿಕೊಂಡಿದ್ದ ಸುಮಲತಾ ಅವರ ಆಪ್ತ ಮತ್ತು ಬೆಂಬಲಿಗ ಇಂಡುವಾಳು ಸಚ್ಚಿದಾನಂದ ಈಗ ಬಿಜೆಪಿ ಸೇರ್ಪಡೆಯಾಗಲು ಮುಂದಾಗಿದ್ದಾರೆ.  ಈ ಬಗ್ಗೆ ಸ್ವತಃ ಹೇಳಿಕೆ ನೀಡಿರುವ ಸಚ್ಚಿದಾನಂದ ನಾನು ಕನಾಯಕರ ಪಕ್ಷವಾಗಿರುವ ಕಾಂಗ್ರೆಸ್‌ ಪಕ್ಷವನ್ನು ತೊರೆದು ಕಾರ್ಯಕರ್ತರ ಪಕ್ಷವಾದ ಬಿಜೆಪಿ ಸೇರುತ್ತಿದ್ದೇನೆ ಎಂದು ತಿಳಿಸಿದ್ದಾರೆ.

Mandya MP Sumalatha Apta Induvalu Satchidananda joins BJP

ಮಂಡ್ಯ (ನ.26): ಮಂಡ್ಯ ರಾಜಕಾರಣದಲ್ಲಿ ಕಾಂಗ್ರೆಸ್‌ ಪಕ್ಷದಿಂದ ಹೊಸ ನಾಯಕನೆಂದೇ ಗುರುತಿಸಿಕೊಂಡಿದ್ದ ಸುಮಲತಾ ಅವರ ಆಪ್ತ ಮತ್ತು ಬೆಂಬಲಿಗ ಇಂಡುವಾಳು ಸಚ್ಚಿದಾನಂದ ಈಗ ಬಿಜೆಪಿ ಸೇರ್ಪಡೆಯಾಗಲು ಮುಂದಾಗಿದ್ದಾರೆ.  ಈ ಬಗ್ಗೆ ಸ್ವತಃ ಹೇಳಿಕೆ ನೀಡಿರುವ ಸಚ್ಚಿದಾನಂದ ನಾನು ಕನಾಯಕರ ಪಕ್ಷವಾಗಿರುವ ಕಾಂಗ್ರೆಸ್‌ ಪಕ್ಷವನ್ನು ತೊರೆದು ಕಾರ್ಯಕರ್ತರ ಪಕ್ಷವಾದ ಬಿಜೆಪಿ ಸೇರುತ್ತಿದ್ದೇನೆ. ನ.28ರಂದು ಅಧಿಕೃತ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದ್ದಾರೆ.

ಇಂಡುವಾಳು ಸಚ್ಚಿದಾನಂದ ಕಾಂಗ್ರೆಸ್‌ ಪಕ್ಷದಲ್ಲಿ ಗುರುತಿಸಿಕೊಂಡು ಹಲವು ವರ್ಷ ಕೆಲಸ ಮಾಡಿದ್ದರು. ಆದರೆ, ಈ ಹಿಂದೆ ಲೋಕಸಭಾ ಚುನಾವಣೆಯ ವೇಳೆ ಕಾಂಗ್ರೆಸ್ ಪಕ್ಷದಲ್ಲಿ ಇರುವುದನ್ನೂ ಲೆಕ್ಕಿಸದೇ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸುಮಲತಾ ಅಂಬರೀಶ್‌ ಅವರಿಗೆ ಬಂಬಲ ನೀಡುವ ಮೂಲಕ ಅವರ ಗೆಲುವಿಗೂ ಕಾರಣವಾಗಿದ್ದರು. ಹೀಗಾಗಿ, ಸುಮಲತಾ ಅಂಬರೀಶ್‌ ಅವರ ಆಪ್ತರಲ್ಲಿ ಇಂಡುವಾಳು ಸಚ್ಚಿದಾನಂದ ಪ್ರಮುಖರಾಗಿದ್ದರು. ಚುನಾವಣೆ ವೇಳೆ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಆಗಿದ್ದ ಗಂಗಾಧರ ಅವರು ಇಂಡುವಾಳು ಸಮಚ್ಚಿದಾನಂದ ಸೇರಿ ಅನೇಕ ಬ್ಲಾಕ್‌ ಕಾಂಗ್ರೆಸ್‌ ಸದಸ್ಯರನ್ನು ಕಾಂಗ್ರೆಸ್‌ ಸದಸ್ಯತ್ವದಿಂದ ವಜಾ ಮಾಡಲಾಗಿತ್ತು. ಆದರೆ, ಬಹುತೇಕರನ್ನು ವಾಪಸ್‌ ಕರೆಸಿಕೊಂಡಿದ್ದರೂ ಸಚ್ಚಿದಾನಂದನನ್ನು ಮಾತ್ರ ಹೊರಗಿಡಲಾಗಿತ್ತು. ಈಗ ಮುಂಬರುವ ಚುನಾವಣೆ ಉದ್ದೇಶದಿಂದ ಸಂಪೂರ್ಣವಾಗಿ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರ್ಪಡೆ ಆಗಲುತೀರ್ಮಾಣ ಕೈಗೊಂಡಿದ್ದಾರೆ.

ಆಪ್ತನ ಬಿಜೆಪಿ ಸೇರ್ಪಡೆಗೆ ಸುಮಲತಾ ಗ್ರೀನ್‌ ಸಿಗ್ನಲ್: ಸಚ್ಚಿದಾನಂದ ಅವರು ತಮ್ಮ ಇಂಡುವಾಳು ಗ್ರಾಮದ ನಿವಾಸದಲ್ಲಿ ಹಿತೈಷಿಗಳು, ಬೆಂಬಲಿಗರ ಸಭೆ ನಡೆಸಿ ಈ ವೇಳೆ ಬಿಜೆಪಿ ಸೇರ್ಪಡೆ ಬಗ್ಗೆ ಚರ್ಚೆ ನಡೆಸಿ ಅಭಿಪ್ರಾಯ ಸಂಗ್ರಹ ಮಾಡಿದ್ದಾರೆ. ಈ ವೇಳೆ ಎಲ್ಲರೂ ಒಪ್ಪಿಗೆ ಸೂಚಿಸಿ ಶುಭ ಹಾರೈಸಿದ್ದಾರೆ. ಇನ್ನು ಬಿಜೆಪಿ ಸೇರಲಿರುವ ಸಚ್ಚಿದಾನಂದ ಅವರು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ  ನ.28 ರಂದು ನಡೆಯುವ ಕಾರ್ಯಕ್ರಮದಲ್ಲಿ ಸೇರ್ಪಡೆ ಆಗಲಿದ್ದಾರೆ. ಈ ಕಾರ್ಯಕ್ರಮಕ್ಕೆ ಸಾವಿರಕ್ಕೂ ಹೆಚ್ಚು ಬೆಂಬಲಿಗರೊಂದಿಗೆ ತೆರಳಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಂದು ಬೆಳಗ್ಗೆ 9.20ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ರಾಜ್ಯ ನಾಯಕರ ಸಮ್ಮುಖದಲ್ಲಿ ಬಿಜೆಪಿ ಪಕ್ಷದ ಸದಸ್ಯತ್ವ ಪಡೆಯಲು ನಿರ್ಧರಿಸಲಾಗಿದೆ. ಇದಕ್ಕೆ ಸಂಸದೆ ಸುಮಲತಾ ಅಂಬರೀಶ್‌ ಅವರು ಕೂಡ ಗ್ರೀನ್‌ ಸಿಗ್ನಲ್‌ ನೀಡಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.

ಕಾರ್ಯಕರ್ಯರ ಪಕ್ಷ ಬಿಜೆಪಿ ಸೇರುತ್ತಿದ್ದೇನೆ:  ಬಿಜೆಪಿ ಸೇರ್ಪಡೆ ನಿರ್ಧಾರ ಬಳಿಕ ಸಚ್ಚಿದಾನಂದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸುಮಲತಾರನ್ನು ಬೆಂಬಲಿಸಿದ  ಕಾಂಗ್ರೆಸ್ ನನ್ನನ್ನು ಉಚ್ಚಾಟನೆ ಮಾಡಿತ್ತು. ನನ್ನಂತೆ ಲಕ್ಷಾಂತರ ಕಾರ್ಯಕರ್ತರು ಸುಮಲತಾರನ್ನು ಬೆಂಬಲಿಸಿದ್ದರು. ಆ ವೇಳೆ ನನ್ನನ್ನು ಸೇರಿದಂತೆ ಹಲವು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನು ಉಚ್ಚಾಟಿಸಲಾಗಿತ್ತು. ಆದರೆ ನನ್ನೊಬ್ಬನನ್ನು ಬಿಟ್ಟು ಉಳಿದವರೆಲ್ಲರನ್ನು ವಾಪಾಸ್ ಕರೆದುಕೊಳ್ಳಲಾಗಿದೆ. ಕಳೆದ ಎರಡು ವರ್ಷಗಳಿಂದ ಯಾವುದೇ ಪಕ್ಷದಲ್ಲಿ ಗುರುತಿಸಿಕೊಂಡಿರಲಿಲ್ಲ. ನರೇಂದ್ರ ಮೋದಿಯವರ ನಾಯಕತ್ವ ಮೆಚ್ಚಿ ಬಿಜೆಪಿ ಸೇರಲು ನಿರ್ಧರಿಸಿದ್ದೇನೆ. ಕಾಂಗ್ರೆಸ್ ನಾಯಕರ ಪಕ್ಷ, ಬಿಜೆಪಿ ಕಾರ್ಯಕರ್ತರ ಪಕ್ಷವಾಗಿದೆ. ಬಿಜೆಪಿ ಸದಸ್ಯತ್ವ ಪಡೆದು ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ದುಡಿಯುತ್ತೇನೆ. ಚುನಾವಣೆಯಲ್ಲಿ ನನ್ನನ್ನು ಬೆಂಬಲಿಸುವ ಬಗ್ಗೆ ಸುಮಲತಾ ಅವರು ಸೂಕ್ತ ಸಮಯದಲ್ಲಿ ನಿರ್ಧಾರ ಮಾಡ್ತಾರೆ. ಜನವರಿ ವೇಳೆಗೆ ಶ್ರೀರಂಗಪಟ್ಟಣದಲ್ಲಿ ಬೃಹತ್ ಸಭೆ ನಡೆಸಲಾಗುವುದು. ಶ್ರೀರಂಗಪಟ್ಟಣದ ಜನತೆ ವಂಶ ರಾಜಕಾರಣ ತೊರೆದು ಯುವ ನಾಯಕತ್ವ ಒಪ್ಪಿಕೊಳ್ಳುವ ವಿಶ್ವಾಸವಿದೆ ಎಂದು ತಿಳಿಸಿದರು.
 

Latest Videos
Follow Us:
Download App:
  • android
  • ios